ಮಂಗಳೂರು,ಜು.30- ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣದ ಆರೋಪಿಗಳನ್ನು ಕಸ್ಟಡಿಗೆ ಪಡೆದುಕೊಂಡಿರುವ ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.
ಪ್ರವೀಣ್ ಹತ್ಯೆ ನಡೆದ ಒಂದೇ ದಿನದಲ್ಲಿ ಝಾಕಿರ್, ಶಫಿಕ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಝಾಕಿರ್ ಮತ್ತು ಶಫಿಕ್ ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಅದರಂತೆ ನ್ಯಾಯಾಲಯವು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಸದ್ಯ ಆರೋಪಿಗಳನ್ನು ಗೌಪ್ಯ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಮಸೂದ್ ಕೊಲೆ ನಡೆದ ಎರಡು ದಿನಗಳ ನಂತರ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬೆಳ್ಳಾರೆಯಲ್ಲಿ ಭೀಕರವಾಗಿ ಹತ್ಯೆಗೈಯಲಾಗಿತ್ತು. ಅಂದಿನಿಂದ ಕರಾವಳಿ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಅಲ್ಲದೆ ಕಾರ್ಯಕರ್ತನನ್ನು ಕಳೆದುಕೊಂಡು ಕೆರಳಿದ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳ್ಳಾರೆಯಲ್ಲಿ ಆರಂಭವಾದ ಪ್ರತಿಭಟನೆಯ ಕಿಚ್ಚು ಕರಾವಳಿಯನ್ನು ವ್ಯಾಪಿಸಿ ನಂತರ ಇಡೀ ರಾಜ್ಯಕ್ಕೆ ಹಬ್ಬಿತು.
Previous Articleರಕ್ಷಿತ್ ಶೆಟ್ಟಿ ನನ್ನ ನಡುವೆ ಮನಸ್ತಾಪ ಇದೆ: ಕಿಚ್ಚ ಸುದೀಪ್
Next Article ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದವರ ಬಂಧನ