ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ನಿರ್ಬಂಧವನ್ನು ಸಡಿಲಗೊಳಿಸಲು ಮುಂದಾಗಿರುವ ಜಿಲ್ಲಾಡಳಿತ ಇಂದಿನಿಂದ ನೈಟ್ ಕರ್ಫ್ಯೂ ಆದೇಶವನ್ನು ಹಿಂಪಡೆದಿದೆ.
ಈ ಕುರಿತು ಆದೇಶ ಹೊರಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ‘ಈವರೆಗೆ ರಾತ್ರಿ 9 ಗಂಟೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಆದರೆ ಇಂದಿನಿಂದ ರಾತ್ರಿ 9 ಗಂಟೆಯ ನಂತರವು ಅಂಗಡಿಗಳನ್ನು ಓಪನ್ ಇಡಬಹುದು. ಬಾರ್, ವೈನ್ ಶಾಪ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೂ ಕೂಡ ಯಾವುದೇ ನಿರ್ಬಂಧವಿರುವುದಿಲ್ಲ. ಆಗಸ್ಟ್ 14 ರ ತನಕ 144 ಸೆಕ್ಷನ್ ಜಾರಿಯಲ್ಲಿರುತ್ತದೆ’ ಎಂದು ಹೇಳಿದ್ದಾರೆ.