Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದಲ್ಲಿ ಬಾಂಬ್- ಬೆದರಿಕೆ ಪತ್ರ ಸೃಷ್ಟಿಸಿದ ಆತಂಕ..
    ಸುದ್ದಿ

    ವಿಮಾನದಲ್ಲಿ ಬಾಂಬ್- ಬೆದರಿಕೆ ಪತ್ರ ಸೃಷ್ಟಿಸಿದ ಆತಂಕ..

    vartha chakraBy vartha chakraAugust 9, 2022Updated:August 9, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.9- ‘ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’ ಎಂಬ ಬೆದರಿಕೆಯ ಸಂದೇಶವನ್ನು ಬರೆದ ಟಿಶ್ಯೂ ಪೇಪರ್ ಜೈಪುರ-ಬೆಂಗಳೂರು ಇಂಡಿಗೋ ವಿಮಾನದ ಶೌಚಾಯಲಯದಲ್ಲಿ ಪತ್ತೆಯಾಗಿದೆ.
    ಮಾಹಿತಿ ಪಡೆದ ಬಾಂಬ್ ನಿಷ್ಕ್ರಿಯ ದಳ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಇಂಡಿಗೋ ವಿಮಾನದಲ್ಲಿ ಶೋಧ ನಡೆಸಿದ್ದಲ್ಲದೆ ಸುಮಾರು 174 ಪ್ರಯಾಣಿಕರು ಹಾಗು ಅವರುಗಳ ಬ್ಯಾಗ್​ಗಳನ್ನು ತಪಾಸಣೆ ನಡೆಸಿದರು.
    ಮಾತ್ರವಲ್ಲದೆ ಅಷ್ಟೂ ಪ್ರಯಾಣಿಕರ ಮತ್ತು 12 ಸಿಬ್ಬಂದಿಗಳ ಕೈಬರಹ ಪರೀಕ್ಷೆ ನಡೆಸಲಾಗಿಯಿತು. ಅದರಂತೆ ಇಬ್ಬರು ಪ್ರಯಾಣಿಕರನ್ನು ಶಂಕಿತರು ಎಂದು ಗುರುತಿಸಲಾಯಿತು. ಘಟನೆಯಿಂದಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
    ವಿಮಾನದ ಸಿಬ್ಬಂದಿಯೊಬ್ಬರು ಹಿಂಭಾಗದ ಶೌಚಾಲಯದ ನೆಲದ ಮೇಲೆ ಹರಿದ ಟಿಶ್ಯೂ ಪೇಪರ್ ಅನ್ನು ನೋಡಿದರು. ಅದರಲ್ಲಿ ಬೆದರಿಕೆ ಸಂದೇಶವಿರುವುದನ್ನು ನೋಡಿದ ಸಿಬ್ಬಂದಿ ಕ್ಯಾಪ್ಟನ್‌ಗೆ ಮಾಹಿತಿ ನೀಡಿದರು. ಕೂಡಲೇ ಎಚ್ಚೆತ್ತ ಕ್ಯಾಪ್ಟನ್, ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಎಚ್ಚರಿಕೆ ನೀಡಿದರು. ಅದರಂತೆ ಸಿಐಎಸ್ಎಫ್ ತಂಡ ಕೆಲವೇ ನಿಮಿಷಗಳಲ್ಲಿ ಪರಿಶೀಲನೆಗೆ ಸಜ್ಜಾಯಿತು.
    ಪ್ರಯಾಣಿಕರು ಭೀತಿಗೆ ಒಳಗಾಗಬಾರದು ಎಂದು ಯಾವುದೇ ಮಾಹಿತಿಯನ್ನು ನೀಡದೆ ವಿಮಾನವನ್ನು ಕಾರ್ಗೋ ಟರ್ಮಿನಲ್ ಬಳಿಯ ಪ್ರತ್ಯೇಕ ಕೊಲ್ಲಿಗೆ ಕೊಂಡೊಯ್ಯಲಾಯಿತು.
    ನಂತರ ಪ್ರಯಾಣಿಕರನ್ನು ಟರ್ಮಿನಲ್​ಗೆ ಕರೆದೊಯ್ದು ಪ್ರಯಾಣಿಕರ ಬ್ಯಾಗ್‌ಗಳನ್ನು ವಿಮಾನದಿಂದ ಹೊರತೆಗೆದು ಲೋಹದ ಶೋಧಕಗಳೊಂದಿಗೆ ಪರಿಶೀಲಿಸಲಾಯಿತು. ಸುಮಾರು 1 ಗಂಟೆಗಳ ಕಾಲ ನಡೆದ ಶೋಧಕಾರ್ಯ ನಂತರ ಇದು ಸುಳ್ಳು ಬೆದರಿಕೆ ಎಂದು ಘೋಷಿಸಲಾಯಿತು.
    ಶಂಕಿತರನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಸಿಐಎಸ್ಎಫ್ ತಂಡವು ಪ್ರಯಾಣಿಕರ ಕೈಬರಹವನ್ನು ಪರೀಕ್ಷೆ ನಡೆಸಿದ್ದು, ಹಿಂದಿಯಲ್ಲಿ ಬರೆಯಲು ಬರದವರನ್ನು ಪರೀಕ್ಷೆಯಿಂದ ಹೊರಗಿಡಲಾಯಿತು. ನಂತರ ಇಪ್ಪತ್ತು ಜನರನ್ನು ಶಾರ್ಟ್‌ಲಿಸ್ಟ್ ಮಾಡಿ ಪರೀಕ್ಷೆ ನಡೆಸಲಾಗಿದ್ದು, ಅಂತಿಮವಾಗಿ ಇಬ್ಬರು ಶಂಕಿತರನ್ನು ಪತ್ತೆಹಚ್ಚಿ ಬರವಣಿಗೆ ಬಗ್ಗೆ ಪ್ರಶ್ನಿಸಲಾಯಿತು. ಎರಡು ಗಂಟೆಗಳ ವಿಳಂಬದ ನಂತರ ಎಲ್ಲಾ ಪ್ರಯಾಣಿಕರನ್ನು ಮನೆಗೆ ಹೋಗಲು ಅನುಮತಿಸಲಾಯಿತು. ಇಬ್ಬರು ಶಂಕಿತರ ತನಿಖೆ ಮುಂದುವರಿದಿದೆ.
    ಜೈಪುರದಿಂದ ಇಂಡಿಗೋ ವಿಮಾನ 6ಇ-556 ಭಾನುವಾರ ರಾತ್ರಿ 9.26 ಕ್ಕೆ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ವಿಮಾನದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. “ನೀಲಿ ಶಾಯಿಯಲ್ಲಿ ‘ವಿಮಾನವನ್ನು ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’ ಎಂದು ಬರೆದಿರುವ ಟಿಶ್ಯೂ ಪೇಪರ್ ಪತ್ತೆಯಾಗಿರುವುದಾಗಿ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಅನೂಪ್ ಎ ಶೆಟ್ಟಿ ಹೇಳಿದ್ದಾರೆ. ಬೆದರಿಕೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    indigo flight
    Share. Facebook Twitter Pinterest LinkedIn Tumblr Email WhatsApp
    Previous Articleಚಾಲೆಂಜಿಂಗ್​​ ಸ್ಟಾರ್​ ದರ್ಶನ್ ಧಮ್ಕಿ ಪೊಲೀಸರಿಗೆ ನಿರ್ಮಾಪಕನ ದೂರು
    Next Article ಬಿಜೆಪಿಯಲ್ಲಿ ಬದಲಾವಣೆಯ ಪರ್ವ..?
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasFem on ಹೈಕಮಾಂಡ್ ಮುಂದೆ ವಿಜಯೇಂದ್ರ ಅಳಲು | Vijayendra
    • Tracymix on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Pyidan on ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.