Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನನಗೆ ಮಾತ್ರ ಯಾಕೆ ನೋಟೀಸ್‌-ಪ್ರಿಯಾಂಕ್ ಖರ್ಗೆ
    ಸುದ್ದಿ

    ನನಗೆ ಮಾತ್ರ ಯಾಕೆ ನೋಟೀಸ್‌-ಪ್ರಿಯಾಂಕ್ ಖರ್ಗೆ

    vartha chakraBy vartha chakraApril 26, 2022Updated:April 26, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಸಚಿವ ಪ್ರಭು ಚವ್ಹಾಣ್ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ ಅವರಿಗೆ ಸಿಐಡಿ ಯಾಕೆ ನೋಟಿಸ್ ನೀಡಿಲ್ಲ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನೇಮಕಾತಿ ಅಕ್ರಮ ಕುರಿತು ಸಚಿವರು ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಬರೆದಿರುವ ಪತ್ರಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಬಹಿರಂಗ ಪಡಿಸಿದ್ದಾರೆ.
    ಇದರಲ್ಲಿನ ಒಂದು ಪತ್ರದಲ್ಲಿ ಪಿ.ಎಸ್.ಐ ನೇಮಕಾತಿಯ ಆಯ್ಕೆ ಪಟ್ಟಿ ಬಿಡುಗಡೆ ನಂತರ ಪರೀಕ್ಷೆ-1 ಮತ್ತು ಪರೀಕ್ಷೆ -2ರಲ್ಲಿ ಕಲಬುರಗಿ ಜಿಲ್ಲೆಯ ಅಫ್ಜಲ್‍ಪುರ ತಾಲ್ಲೂಕಿನಲ್ಲೇ 43ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವುದರಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿರುವುದನ್ನು ತಡೆಗಟ್ಟಲು ಕೂಡಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ತಮ್ಮನ್ನು ಕೋರುತ್ತೇನೆ ಎಂದು ಸಚಿವ ಪ್ರಭುಚವ್ಹಾಣ್ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
    ಇನ್ನೊಂದು ಪತ್ರ ಬಿಜೆಪಿಯ ಹಿರಿಯ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾರ್ಚ್ 15ರಂದು ಗೃಹ ಸಚಿವ ಅರಗಜ್ಞಾನೇಂದ್ರರಿಗೆ ಬರೆದಿದ್ದು ಇತ್ತೀಚೆಗೆ ನಡೆದ 545 ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಅವರ ನೇಮಕಾತಿಯಲ್ಲಿ ಭಾರೀ ಅಕ್ರಮಗಳು ನಡೆದಿದೆ ಎಂದು ಎಲ್ಲಾ ಕಡೆ ಕೇಳಿ ಬರುತ್ತಿವೆ.ಪತ್ರಿಕೆಗಳಲ್ಲಿ ಕೂಡ ವರದಿಯಾಗಿದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಬ್ಲೂಟೂಥ ಹಾಕಿಕೊಂಡು ಪರೀಕ್ಷೆ ಬರೆದಿದ್ದಾರೆ. ಇನ್ನೊಂದು ಕಡೆ ಕೆಲವರು ಪರೀಕ್ಷೆಗಳನ್ನು ಚೆನ್ನಾಗಿ ಬರೆದಿದ್ದರು ಆಯ್ಕೆಯಾಗಿಲ್ಲ ಎಂಬ ನೋವು ಬಹಳಷ್ಟು ಅಭ್ಯರ್ಥಿಗಳಿಗೆ ಆಗಿದೆ.ಅಕ್ರಮದಲ್ಲಿ ಯಾದಗಿರಿಯ ಒಬ್ಬ ವ್ಯಕ್ತಿ ಸೂತ್ರದಾರಿಯಾಗಿರುವನು ಎಂಬ ವಿಷಯ ಪತ್ರಿಕೆಗಳಲ್ಲಿ ವರದಿಯಾಗಿದೆ. ನನ್ನ ಮತ ಕ್ಷೇತ್ರದ ಹಲವು ಪದವೀಧರ ಅಭ್ಯರ್ಥಿಗಳು ಸಾಕಷ್ಟು ನೋವುಗಳನ್ನು ತೊಡಿಕೊಂಡಿದ್ದಾರೆ. ಈ ಕುರಿತು ಯೋಗ್ಯ ವ್ಯಕ್ತಿಯಿಂದ ತನಿಖೆ ನಡೆಸಿ, ಅನ್ಯಾಯವಾಗಿರುವವರಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.
    ಈ ರೀತಿ ಪತ್ರ ಬರೆದಿರುವ ಇವರಿಗೆ ನೋಟೀಸ್ ನೀಡಿಲ್ಲ ನನಗೆ ಮಾತ್ರ ನೋಟೀಸ್ ನೀಡಲಾಗಿದೆ ಎಂದು ಹೇಳಿರುವ ಖರ್ಗೆ ನನ್ನ ಮೇಲೆ ಆಸಕ್ತಿ ತೋರಿಸುವ ಬದಲು ತನಿಖೆಯಲ್ಲಿ ಆಸಕ್ತಿ ತೋರಿಸಿ. ಪರೀಕ್ಷೆ ಬರೆದ 57 ಸಾವಿರ ಅಭ್ಯರ್ಥಿಗಳಿಗೆ ಉತ್ತರಿಸಿ. ಹೆಚ್ಚಿನ ಅಭ್ಯರ್ಥಿಗಳು ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದವರಾಗಿದ್ದಾರೆ. ಪರೀಕ್ಷೆ ಬರೆಯಲು ಅವರು ಬಹಳ ಕಷ್ಟ ಪಟ್ಟಿದ್ದಾರೆ. ಅವರಿಗೆ ನ್ಯಾಯ ಕೊಡಿಸಿ ಎಂದು ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    #priyankkharge #psiselection #tweet
    Share. Facebook Twitter Pinterest LinkedIn Tumblr Email WhatsApp
    Previous Articleಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾ..
    Next Article ಗೃಹ ಸಚಿವರನ್ನು ವಜಾಗೊಳಿಸಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Atyjfy on ನಕಲಿ ಅಂಕಪಟ್ಟಿಗಳ ಕಿಂಗ್ ಪಿನ್
    • Tracymix on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.