Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಗೆ ಮತ್ತೊಂದು ಗಂಡಾಂತರ
    ರಾಜಕೀಯ

    ಶಿವಕುಮಾರ್ ಗೆ ಮತ್ತೊಂದು ಗಂಡಾಂತರ

    vartha chakraBy vartha chakraSeptember 19, 2022Updated:September 19, 20229 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.,19 – ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇದೀಗ ಮತ್ತೊಂದು ಕಂಟಕ ಎದುರಾಗಿದೆ. ಅಕ್ರಮ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ದೆಹಲಿ ಜಾರಿ ನಿರ್ದೇಶನಾಲಯದ (ಇಡಿ) ಕಚೇರಿಯಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೆ ಅವರಿಗೆ ಆಘಾತಕಾರಿ ಸುದ್ದಿಯೊಂದು ತಲುಪಿದೆ.
    ಹಣ ಅಕ್ರಮ ವಹಿವಾಟಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಇವರ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ.
    ಕಳೆದ 2017ರಲ್ಲಿ ಬಿಡದಿಯ ಈಗಲ್ಟನ್‌ ರೆಸಾರ್ಟ್ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
    ಆ ದಾಳಿಯ ಸಂದರ್ಭದಲ್ಲಿ ರೆಸಾರ್ಟ್‌ನಲ್ಲಿ ಗುಜರಾತಿನ 44 ಮಂದಿ ಕಾಂಗ್ರೆಸ್‌ ಶಾಸಕರ ಯೋಗಕ್ಷೇಮದ ಉಸ್ತುವಾರಿಯನ್ನು ಸಚಿವರಾಗಿದ್ದ ಡಿ.ಕೆ. ಶಿವಕುಮಾರ್‌ ನೋಡಿಕೊಳ್ಳುತ್ತಿದ್ದರು. ಈ ಮಾಹಿತಿ ತಿಳಿದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿ ಎಫ್​ಐಆರ್​ ದಾಖಲಿಸಿದ್ದರು.
    ಇದನ್ನು ಶಿವಕುಮಾರ್ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಐಟಿ ದಾಖಲಿಸಿದ್ದ ಎಫ್​ಐಆರ್​ ರದ್ದತಿಗೆ ಕೋರ್ಟ್​ ಆದೇಶಿಸಿತ್ತು. ಇದನ್ನು ಐಟಿ ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು, ಅಲ್ಲಿಯೂ ಅದಕ್ಕೆ ಹಿನ್ನಡೆಯಾಗಿ, ಶಿವಕುಮಾರ್ ಪರ ತೀರ್ಪು ಬಂದಿತ್ತು. ‘ಆರೋಪಿಯಿಂದ ಬರೀ ಹಣಕಾಸು ವ್ಯವಹಾರಗಳು ನಡೆದಿದ್ದರೆ ಕೇಸ್‌ ದಾಖಲಿಸಲು ಸಾಧ್ಯವಿಲ್ಲ. ಲೆಕ್ಕವಿಲ್ಲದ ವಹಿವಾಟುಗಳು ನಡೆದಿದ್ದರೂ ತೆರಿಗೆ ಅಥವಾ ದಂಡದ ಪಾವತಿಗೆ ಆರೋಪಿ ಹೊಣೆಗಾರರಾಗಿದ್ದಾರೆ ಎಂಬುದನ್ನು ನಿರ್ಧರಿಸುವವರೆಗೆ ಯಾವುದೇ ಕಾನೂನು ಕ್ರಮವನ್ನು ಆರಂಭಿಸುವಂತಿಲ್ಲ’ ಎಂದು ಹೈಕೋರ್ಟ್​ ಹೇಳಿತ್ತು.
    ಹೈಕೋರ್ಟ್​ನ ಈ ಆದೇಶವನ್ನು ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆಯು ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಪರಿಶೀಲನೆ ವೇಳೆ ಕೆಲವು ಮಹತ್ವದ ದಾಖಲೆಗಳು ತಮಗೆ ಲಭ್ಯವಾಗಿವೆ, ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ್ದು ಎನ್ನಲಾದ ದಾಖಲೆಗಳನ್ನು ಅವರು ಹರಿದು ಹಾಕಿದ್ದಾರೆ. ಆ ದಾಖಲೆಗಳಲ್ಲಿ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದ್ದ ಕೆಲವೊಂದು ಮಾಹಿತಿಗಳು ಇದ್ದವು. ಅಕ್ರಮ ವ್ಯವಹಾರ, ಡಿಜಿಟಲ್ ಕೇಬಲ್ ಜತೆಗಿನ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಇದರಲ್ಲಿ ಇದ್ದವು ಎಂದು ಐಟಿ ವಾದಿಸಿತ್ತು. ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ವಿಭಾಗೀಯ ಪೀಠವು, ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ಕೋರ್ಟ್​ ನೋಟಿಸ್​ ಜಾರಿಗೊಳಿಸಿದೆ.

    Verbattle
    Verbattle
    Verbattle
    ಇಡಿ ಕಾಂಗ್ರೆಸ್ ಕಾನೂನು ನ್ಯಾಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಣಿ ಅಂತ್ಯಕ್ರಿಯೆಗೆ ಬೆಂಗಳೂರಿನ ಡಾ. ಮಥಾಯಿ
    Next Article ಅನುರಾಗ್ ತಿವಾರಿ ಸಾವು ಪ್ರಕರಣ
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • legal canadian pharmacy online on ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Krovlyanub on ಕಾಂಗ್ರೆಸ್ ಶಾಸಕರಿಗೆ ಸಿಎಂ ಕೊಡುವ ಆಫ಼ರ್ ಏನು | Siddaramaiah
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.