ಬೆಂಗಳೂರು – ರಾಜ್ಯ ಜೈವಿಕ ತಂತ್ರಜ್ಞಾನ ಕಾರ್ಯ ಪಡೆ ಮುಖ್ಯಸ್ಥೆ, ಉದ್ಯಮಿ, ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಪತಿ ಹಾಗೂ ಬಯೋಕಾನ್ ಇಂಡಿಯಾದ ಮಾಜಿ ಉಪಾಧ್ಯಕ್ಷ ಜಾನ್ ಶಾ (65) ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ನಂತರ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.ಬೆಂಗಳೂರಿನ ವಿಲ್ಸನ್ ಗಾರ್ಡನ್ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ಶಾ ನಿಧನಕ್ಕೆ ಔಧ್ಯೋಗಿಕ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.