ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧಾರ್ಮಿಕ ದಂಗಲ್ ನಡೆಯುವ ಮುನ್ಸೂಚನೆಗಳು ಗೋಚರಿಸುತ್ತಿವೆ.
ರಾಜ್ಯದಲ್ಲಿ ನಡೆಯುವ ದೇವರ ಜಾತ್ರೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ Business ವಹಿವಾಟು ನಡೆಸಲು ಅವಕಾಶ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.
ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಹಿಂದೂ ಧರ್ಮದ ವ್ಯಾಪಾರಸ್ಥರಿಗೆ ಮಾತ್ರ ವ್ಯಾಪಾರ ಮಾಡಲು ಮುನ್ಸೂಚನೆಗಳು ಗೋಚರಿಸುತ್ತಿವೆ.
ರಾಜ್ಯದಲ್ಲಿ ನಡೆಯುವ ದೇವರ ಜಾತ್ರೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.
ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಹಿಂದೂ ಧರ್ಮದ ವ್ಯಾಪಾರಸ್ಥರಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್‍ಗೌಡ ಧಾರ್ಮಿಕ ದತ್ತಿ ಇಲಾಖೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಕಲ್ಪಿಸಿಕೊಡುವಂತೆ ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್‍ಗೌಡ ಧಾರ್ಮಿಕ ದತ್ತಿ ಇಲಾಖೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಇದರ ನಡುವೆಯೇ ಪ್ರಸಿದ್ದ ಯಾತ್ರಾ ಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಸಂದರ್ಭದಲ್ಲಿ ಹಿಂದೂವೇತರ ವರ್ತಕರು ವ್ಯಾಪಾರ ವಹಿವಾಟು ನಡೆಸುವುದನ್ನು ನಿಷೇಧಿಸಿ ಅಳವಡಿಸಲಾದ ಬ್ಯಾನರ್ ಕಾಣಿಸಿಕೊಂಡಿದೆ.
ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಸಂದರ್ಭದಲ್ಲಿ ಹಿಂದುವೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯ ಠಾಣೆಗೆ ಹಿಂದೂ ಜಾಗರಣೆ ವೇದಿಕೆಯ ಸುಬ್ರಹ್ಮಣ್ಯ ಘಟಕದ ವತಿಯಿಂದ ದೂರು ನೀಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದೆ. ಇಲ್ಲಿ ಇದೇ 29ರಂದು ಚಂಪಾ ಷಷ್ಠಿ ಹಾಗೂ ಬ್ರಹ್ಮರಥೋತ್ಸವ ನಡೆಯಲಿದೆ. ಈ ದೇವಸ್ಥಾನದ ಜಾತ್ರೆಗಳಲ್ಲಿ ಹಿಂದೂವೇತರ ಧರ್ಮಗಳ ವರ್ತಕರೂ ವ್ಯಾಪಾರ ನಡೆಸುತ್ತಿದ್ದರು.
ಈ ಗೊಂದಲದ ನಡುವೆಯೇ ಸಾಲು ಸಾಲು ಹಣತೆಗಳ ನಡುವೆ ಕುಕ್ಕೆ ಸುಬ್ರಹ್ಮಣ್ಯ ಲಕ್ಷದೀಪೋತ್ಸವ ಹಾಗೂ ಚಂದ್ರ ಮಂಡಲ ರಥೋತ್ಸವ ಭಕ್ತಿ-ಸಡಗರದಿಂದ ನೆರವೇರಿತು.
ಚಂದ್ರಮಂಡಲ ರಥೋತ್ಸವದ ಬಳಿಕ ಬೀದಿ ಉರುಳು ಸೇವೆಯನ್ನು ಭಕ್ತರು ಆರಂಭಿಸಿದರು. ಲಕ್ಷದೀಪೋತ್ಸವ ರಥೋತ್ಸವದ ಬಳಿಕ ಆರಂಭಗೊಳ್ಳುವ ಈ ಸೇವೆಯು ಚಂಪಾಷಷ್ಠಿ ಮಹಾರಥೋತ್ಸವದ ವರೆಗೆ ನಡೆಯುತ್ತದೆ.
Previous Articleರೌಡಿಶೀಟರ್ ಗಳಿಗೆ CCB ಶಾಕ್
Next Article ಪ್ರತೀಕಾರದ ಪ್ರತಿಜ್ಞೆ ಮಾಡಿದ್ದ ಪಾತಕಿ ಉಗ್ರ