Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಹೀಬ್ ಗಂಜ್ ದರೋಡೆಕೋರರ ಬಂಧನ
    ಸುದ್ದಿ

    ಸಾಹೀಬ್ ಗಂಜ್ ದರೋಡೆಕೋರರ ಬಂಧನ

    vartha chakraBy vartha chakraDecember 1, 2022Updated:December 1, 20221 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಡಿ.1-ಜ್ಯುವೆಲ್ಲರಿ ಅಂಗಡಿಯ ದರೋಡೆಗೆ ಯತ್ನಿಸಿದ್ದ ಕುಖ್ಯಾತ ಅಂತಾರಾಜ್ಯ ಸಾಹೇಬ್ ಗಂಜ್ ದರೋಡೆ ಗ್ಯಾಂಗ್​ನ 9 ಮಂದಿಯನ್ನು ಬಂಧಿಸುವಲ್ಲಿ‌ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
    ಗುಜರಾತ್​ನ ಭಾಸ್ಕರ ಬೆಳ್ಚಪಾಡ(65), ನೇಪಾಳದ ದಿನೇಶ್ ರಾವಲ್ ಯಾನೆ ಸಾಗರ್ ಯಾನೆ ದಿಲ್ಲಿ(38)‌ ಬಿಸ್ತ ರೂಪ್ ಸಿಂಗ್ (34), ಕೃಷ್ಣ ಬಹದ್ದೂರ್ ಬೋಗಟಿ (41), ಜಾರ್ಖಂಡ್​ನ ಮೊಹಮ್ಮದ್ ಜಾಮೀಲ್ ಶೇಖ್(29), ಇಂಜಮಾಮ್ ಉಲ್ ಹಕ್(27), ಇಮ್ದದುಲ್ ರಝಾಕ್ ಶೇಖ್ (32), ಬಿವುಲ್ ಶೇಖ್ (31), ಇಮ್ರಾನ್ ಶೇಖ್ (30) ಬಂಧಿತ ದರೋಡೆಕೋರರಾಗಿದ್ದಾರೆ.
    ಬಂಧಿತ ಆರೋಪಿಗಳು ನಗರದ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತ ಮೂಲದ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ವಾಸವಿತ್ತು. ಈ ಗ್ಯಾಂಗ್​ ತೊಕ್ಕೊಟ್ಟಿನ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸ್ ಇನ್​ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.ದರೋಡೆಗಾಗಿ ಸಂಗ್ರಹಿಸಿಟ್ಟಿದ್ದ ವಿವಿಧ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಜ್ಯುವೆಲ್ಲರಿ ದರೋಡೆಗೆ ಸ್ಕೆಚ್​:
    ಗ್ಯಾಂಗ್​ನ ಸದಸ್ಯರು ತೊಕ್ಕೊಟ್ಟಿನ ಸೂಪರ್ ಗೋಲ್ಡ್​ ಆ್ಯಂಡ್​ ಡೈಮಂಡ್ಸ್​ ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡುವ ಉದ್ದೇಶದಿಂದ ಸುಮಾರು 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದರು. ಬಳಿಕ ತೊಕ್ಕೊಟ್ಟು ಬಳಿಯ ಲಾಡ್ಜ್ ಹಾಗೂ ತೊಕ್ಕೊಟ್ಟು ಮಂಚಿಲ ಬಳಿಯ ವ್ಯಕ್ತಿಯೊಬ್ಬರ ಮನೆಯೊಂದನ್ನು ಬಾಡಿಗೆಗೆ ಪಡೆದು ಅಲ್ಲಿ ದರೋಡೆಗೆ ಸಂಚು ರೂಪಿಸಿದ್ದರು. ಈ ಗ್ಯಾಂಗ್​ನಲ್ಲಿ ನೇಪಾಳದ ಆರೋಪಿಗಳು ಇದ್ದು, ದರೋಡೆ ನಂತರ ಕದ್ದ ವಸ್ತುಗಳೊಂದಿಗೆ ಇವರು ನೇಪಾಳಕ್ಕೆ ಪರಾರಿಯಾಗುತ್ತಿದ್ದರು.
    ಜ್ಯುವೆಲ್ಲರಿ ಗುರುತಿಸಿಕೊಂಡು ದರೋಡೆಗೆ ಬೇಕಾದ ಗ್ಯಾಸ್ ಕಟ್ಟರ್, ಆಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟಿಂಗ್ ನೋಝಲ್, ಕಟ್ಟಿಂಗ್ ಹೋಸ್ ಪೈಪ್, ಲೆದರ್ ಹ್ಯಾಂಡ್ ಗ್ಲೌಸ್, ಕಬ್ಬಿಣದ ರಾಡ್, ತಲವಾರು, ಆ್ಯಕ್ಸೋ ಬ್ಲೇಡ್, ಹ್ಯಾಮರ್, ಸ್ಕ್ರೂ ಡ್ರೈವರ್, ಮೆಣಸಿನ ಹುಡಿ, ನೈಲಾನ್ ಹಗ್ಗ ಹಾಗೂ ಇತರ ಹಲವಾರು ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು. ಇದರ ಒಟ್ಟು ಮೌಲ್ಯ ರೂ. 2,90,000 ಆಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರೋಡೆ ಪ್ರಕರಣ ದಾಖಲು:
    ಇತ್ತೀಚೆಗೆ ಮಂಗಳೂರು ನಗರದ ಹೊರವಲಯದ ನಾಟೆಕಲ್, ಆಂಬಿಕಾ ರೋಡ್, ಉಚ್ಚಿಲ ಬಳಿಯಿಂದ ರಾತ್ರಿ ವೇಳೆಯಲ್ಲಿ ಮೂರು ದ್ವಿಚಕ್ರ ಸವಾರರನ್ನು ಅಡ್ಡಗಟ್ಟಿ ಹಿಂದಿ ಭಾಷೆಯಲ್ಲಿ ಬೈದು ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿ ಅವರಿಂದ ಸ್ಕೂಟರ್​ಗಳನ್ನು ಬಲವಂತವಾಗಿ ಸುಲಿಗೆ ಮಾಡಿದ ಪ್ರಕರಣ ದಾಖಲಾಗಿತ್ತು. ಸಾಹೇಜ್ ಗಂಜ್ ದರೋಡೆ ಗ್ಯಾಂಗ್​ ಆರೋಪಿಗಳು ಜ್ಯುವೆಲ್ಲರಿ ದರೋಡೆಗಾಗಿ ಸುಲಿಗೆ ಮಾಡಿದ್ದ ಮೂರು ಸ್ಕೂಟರ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.
    ಆರೋಪಿಗಳ ಪೈಕಿ ಭಾಸ್ಕರ ಬೆಳ್ಚಡ, ದಿನೇಶ್ ರಾವಲ್, ಇಂಜಮಾಮ್ ಉಲ್ ಹಕ್, ಬಿಸ್ತ ರೂಪ್ ಸಿಂಗ್, ಕೃಷ್ಣ ಬಹದ್ದೂರ್ ಬೋಗಟಿ ಎಂಬವರ ವಿರುದ್ಧ ಮುಂಬೈ, ಪುಣೆ, ಸೂರತ್, ಮಧ್ಯಪ್ರದೇಶದ ಮಾಧವ ನಗರ, ಕೇರಳದ ತ್ರಿಶೂರ್, ಪಂಜಾಬ್ ರಾಜ್ಯಗಳಲ್ಲಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಬ್ಯಾಂಕ್ ದರೋಡೆ, ಜ್ಯುವೆಲ್ಲರಿ ದರೋಡೆ ಪ್ರಕರಣಗಳು ದಾಖಲಾಗಿದೆ.
    ಈ ಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್​ನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಮತ್ತವರ ಸಿಬ್ಬಂದಿ ಪಾಲ್ಗೊಂಡಿದ್ದರು

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಸಂಸದ-ಶಾಸಕರೇ ಹೀಗಾದರೆ ಪೊಲೀಸರೇನು ಮಾಡಬೇಕು?
    Next Article Next Post
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gregghet on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • https://md.chaospott.de/s/MsmsFntaWH on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • BrandonNeefe on ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.