ಬೆಂಗಳೂರು-
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ನಮ್ಮ ಕ್ಲಿನಿಕ್ (Namma Clinic) ಗಳು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಾರಂಭ ಮಾಡಿವೆ. ಬಡವರು, ಮಧ್ಯಮ ವರ್ಗದವರು, ಕೂಲಿಕಾರ್ಮಿಕರು ಸೇರಿದಂತೆ ಮತ್ತಿತರರಿಗೆ ಅತಿ ಕಡಿಮೆ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಮ್ಮ ಕ್ಲಿನಿಕ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ ನೀಡಿದರು. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಕಮಲಮ್ಮನಗುಂಡಿ ಆಟದ ಮೈದಾನ ಸಮೀಪ ಇರುವ ರಾಣಿ ಅಬ್ಬಕ್ಕ ಮೈದಾನದಲ್ಲಿ ಸಚಿವರಾದ ಗೋಪಾಲಯ್ಯ (K Gopalaiah), ಡಾ.ಕೆ.ಸುಧಾಕರ್ (Dr K Sudhakar),ಸಮ್ಮುಖದಲ್ಲಿ CM ಚಾಲನೆ ನೀಡಿದರು.
ಇದೇ ವೇಳೆ ಅವರು ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ. 43ರ ವ್ಯಾಪ್ತಿಯ ಬಿಎಚ್‍ಇಎಲ್ ಬಡಾವಣೆ (BHEL Layout), ನವನಂದಿನಿ ಉದ್ಯಾನವನ (Nava Nandini Park) , ಮಾರಪ್ಪನಹಳ್ಳಿ ವಾರ್ಡ್ 44ರ ಕೃಷ್ಣಾನಂದನಗರದಲ್ಲಿ ನಿರ್ಮಿಸಿರುವ ಕರ್ನಾಟಕ ಪಬ್ಲಿಕ್ ಶಾಲಾ (Karnataka Public School) ಕಟ್ಟಡ, ವೃಷಭಾವತಿ ನಗರ ವಾರ್ಡ್ 102ರ NGOs Colony ಯಲ್ಲಿ ನಿರ್ಮಿಸಿರುವ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಕಟ್ಟಡ, ಶಕ್ತಿಗಣಪತಿ ನಗರ ವಾರ್ಡ್ 77ರ BBMP ಪ್ರೌಢಶಾಲೆ ಹಾಗೂ ಕಾಲೇಜು ಕಟ್ಟಡ, ಲಕ್ಷ್ಮಿಪುರಂನ BBMP ರೆಫರಲ್ ಆಸ್ಪತ್ರೆ (Referral Hospital) ಕಟ್ಟಡ ಹಾಗೂ ನಾಗಪುರ ವಾರ್ಡ್ 67ರ ಮಹಾಲಕ್ಷ್ಮಿಪುರಂ ಬಡಾವಣೆಯಲ್ಲಿ ನಿರ್ಮಾಣ ಮಾಡಿದ್ದ ರಾಣಿ ಅಬ್ಬಕ್ಕ ಆಟದ ಮೈದಾನವನ್ನು ಲೋಕಾರ್ಪಣೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು ನಮ್ಮ ಕ್ಲಿನಿಕ್‍ಗಳಲ್ಲಿ ರೆಫರಲ್ ಸೇವೆಗಳನ್ನು ಒದಗಿಸುವ ಮುಖಾಂತರ ದ್ವಿತೀಯ ಮತ್ತು ತೃತೀಯ ಹಂತದ ಆಸ್ಪತ್ರೆಗಳಿಗೂ ಇವು ಸಂಪರ್ಕ ಕಲ್ಪಿಸುತ್ತಿವೆ. ಆರೋಗ್ಯ ಸೇವೆಗಳನ್ನು ಪಡೆಯಲು ತಗುಲುವ ವೆಚ್ಚ ಕಡಿಮೆ ಮಾಡಲು ಸಹಕಾರಿಯಾಗಲಿದೆ. ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸಲಾಗುತ್ತಿದೆ ಎಂದು ಹೇಳಿದರು
ನಮ್ಮ ಕ್ಲಿನಿಕ್‍ಗಳಲ್ಲಿ ತಲಾ ಒಬ್ಬರು ವ್ಯೆದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ-ದರ್ಜೆ ನೌಕರರು ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಇಲ್ಲಿ ಲಭ್ಯವಿದೆ. ನಮ್ಮ ಕ್ಲಿನಿಕ್‍ಗಳು ಬೆಳಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯಾನಿರ್ವಹಿಸುತ್ತಿವೆ. ಒಬ್ಬ ಡಾಕ್ಟರ್, ಒಬ್ಬ ನರ್ಸ್, ಒಬ್ಬ ಲ್ಯಾಬ್ ಟೆಕ್ನೀಷಿಯನ್ ಹಾಗೂ ಒಬ್ಬ ಡಿ ಗ್ರೂಪ್ ಸಿಬ್ಬಂದಿ ಮಾತ್ರ ಇಲ್ಲಿ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು.
