Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊರಟ್ಟಿ ಬಿಜೆಪಿ ಸೇರ್ಪಡೆ: ಸಭಾಪತಿ ಹುದ್ದೆಗೆ ಗುಡ್ ಬೈ
    ಸುದ್ದಿ

    ಹೊರಟ್ಟಿ ಬಿಜೆಪಿ ಸೇರ್ಪಡೆ: ಸಭಾಪತಿ ಹುದ್ದೆಗೆ ಗುಡ್ ಬೈ

    vartha chakraBy vartha chakraMay 3, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಧಾನಪರಿಷತ್ ಸಭಾಪತಿ ಜೆಡಿಎಸ್ ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ‌ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರೊಂದಿಗೆ‌ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಹೊರಟ್ಟಿ ಪಕ್ಷ ಸೇರ್ಪಡೆ ಕುರಿತು ಚರ್ಚೆ ನಡೆಸಿದರು.
    ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಹಸಿರು ನಿಶಾನೆ ತೋರಿದ ಅಮಿತ್ ಶಾ ಈ ಕುರಿತಂತೆ ರಾಜ್ಯ ನಾಯಕರೊಂದಿಗೆ ಚರ್ಚಿಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಿದರು. ಇದರೊಂದಿಗೆ ಹೊರಟ್ಟಿ ಬಿಜೆಪಿ ಸೇರ್ಪಡೆ ಕುರಿತು ಎದ್ದಿದ್ದ ಎಲ್ಲಾ ಗೊಂದಲಗಳಿಗೆ ತೆರೆಬಿದ್ದಿದೆ.
    ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, ನಾನು ಸದ್ಯದಲ್ಲೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಜೆಡಿಎಸ್‍ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಕೊಡುತ್ತೇನೆ ಎಂದು ಘೋಷಿಸಿದರು.
    ಬಿಜೆಪಿ ಸೇರ್ಪಡೆ ಕುರಿತಂತೆ ಅಮಿತ್ ಷಾ ಜೊತೆ ಮಾತುಕತೆ ನಡೆಸಲಾಗಿದೆ. ಅವರು ಸಹ ಪಕ್ಷ ಸೇರ್ಪಡೆಗೆ ಒಲವು ತೋರಿದ್ದಾರೆ. ಮೇ 11ಕ್ಕೆ ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದರು. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ರ್ಪಸುತ್ತೇನೆ. ನಾನು ಪಕ್ಷ ಸೇರುತ್ತಿರುವುದಕ್ಕೆ ಯಾರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ.ಎಲ್ಲರೂ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
    ರಾಜಕೀಯದಲ್ಲಿ ಸಿದ್ದಾಂತಗಳ ಬಗ್ಗೆ ಮಾತನಾಡುವುದೇ ವ್ಯರ್ಥ. ನಾನು ಜೆಡಿಎಸ್ ಬಿಡುತ್ತಿದ್ದೇನೆಂದರೆ ಅದಕ್ಕೆ ಬೇರೆ ಅರ್ಥಗಳನ್ನು ಕಲ್ಪಿಸಬಾರದು. ನನಗೆ ಈಗಲೂ ಆ ಪಕ್ಷದ ಬಗ್ಗೆ ಅಪಾರವಾದ ಗೌರವವಿದೆ. ಪಕ್ಷ ಬಿಟ್ಟ ತಕ್ಷಣ ನಾವು ಹಗುರವಾಗಿ ಮಾತನಾಡಬಾರದು ಎಂದು ಹೊರಟ್ಟಿ ಹೇಳಿದರು.
    ಬದಲಾದ ವ್ಯವಸ್ಥೆಯಲ್ಲಿ ಮತದಾರರ ಅಭಿಪ್ರಾಯದಂತೆ ನಾನು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ. ಬಹುತೇಕ ಮತದಾರರು ಬಿಜೆಪಿ ಸೇರ್ಪಡೆಯಾಗಬೇಕೆಂದು ಒತ್ತಡ ಹೇರಿದ್ದರು. ಹಾಗಾಗಿ ಈ ತೀರ್ಮಾನಕ್ಕೆ ಬಂದಿದ್ದೇನೆ ಎಂದು ಸ್ಪಷ್ಟ ಪಡಿಸಿದರು.

    Verbattle
    Verbattle
    Verbattle
    basavaraj horatti bavaraj horatti joined horatti ಬಸವರಾಜ ಹೊರಟ್ಟಿ
    Share. Facebook Twitter Pinterest LinkedIn Tumblr Email WhatsApp
    Previous Articleಮಾಜಿಯಾಗುತ್ತಾರಾ ಬೊಮ್ಮಾಯಿ..!
    Next Article ಕಮಿಷನರ್ ಕಚೇರಿಯಲ್ಲಿದ್ದ ಆರೋಪಿ..
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Tracymix on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Tracymix on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.