Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದೇಶಿಯರ ಅಕ್ರಮ ವಾಸ್ತವ್ಯದ ಕೇಂದ್ರವಾದ Bengaluru!
    ರಾಜ್ಯ

    ವಿದೇಶಿಯರ ಅಕ್ರಮ ವಾಸ್ತವ್ಯದ ಕೇಂದ್ರವಾದ Bengaluru!

    vartha chakraBy vartha chakraFebruary 22, 2023109 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.22-

    ಸಿಲಿಕಾನ್ ಸಿಟಿ, ನಿವೃತ್ತರ ಸ್ವರ್ಗ ಎಂದೇ ಪರಿಗಣಿಸಲ್ಪಡುತ್ತಿರುವ ಮಹಾ ನಗರಿ ಬೆಂಗಳೂರು (Bengaluru) ಇತ್ತೀಚೆಗೆ ವಿದೇಶಿಯರ ಅಕ್ರಮ ವಾಸಕ್ಕೆ (Illegal immigrants) ಅವಾಸ ತಾಣವಾಗುತ್ತಿದೆಯಾ? ಹೌದು ಎನ್ನುತ್ತದೆ ಪೊಲೀಸ್ ಇಲಾಖೆಯ ಮಾಹಿತಿ.

    ರಾಜಧಾನಿಯ ಹಲವೆಡೆ ಆಫ್ರಿಕಾ (Africa), ನೈಜೀರಿಯಾ (Nigeria), ಬಾಂಗ್ಲಾದೇಶ (Bangladesh) ಸೇರಿದಂತೆ ವಿವಿಧ ದೇಶಗಳ ಸುಮಾರು 600 ಮಂದಿ ಅಕ್ರಮವಾಗಿ ವಾಸ್ತವ್ಯ ಹೂಡಿರುವುದನ್ನು ನಗರದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇತ್ತೀಚೆಗೆ ಉತ್ತರಪ್ರದೇಶ (Uttar Pradesh) ಮೂಲದ ಯುವಕನನ್ನು ಮದುವೆಯಾಗಿ ಅಕ್ರಮವಾಗಿ ನೆಲೆಸಿದ್ದ ಪಾಕ್‌ (Pakistan) ಯುವತಿಯನ್ನು ಪತ್ತೆ ಹಚ್ಚಿ ಗಡಿಪಾರು ಮಾಡಲಾಗಿತ್ತು. ಆ ಯುವತಿ ಗಡಿಪಾರಾದ ಬೆನ್ನಲ್ಲೇ ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆಗೆ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿತ್ತು.

    ಪ್ರವಾಸ, ವ್ಯಾಪಾರ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕಾರಣದಿಂದ ಬೆಂಗಳೂರಿಗೆ ಬಂದ ವಿದೇಶಿಯರು ವೀಸಾ (VISA) ಅವಧಿಯೊಳಗೆ ತಮ್ಮ ಕೆಲಸ ಮುಗಿಸಿಕೊಂಡು ತಮ್ಮ ದೇಶಕ್ಕೆ ತೆರಳಬೇಕು. ಆದರೆ ಅನೇಕ ಮಂದಿ ವೀಸಾ ಅವಧಿ ಮುಗಿದರೂ ತಮ್ಮ ದೇಶಕ್ಕೆ ತೆರಳದೆ ಇಲ್ಲಿಯೇ ಅಕ್ರಮವಾಗಿ ನೆಲೆಸಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಈ ರೀತಿಯಲ್ಲಿ ಒಟ್ಟು 600 ಮಂದಿ ನೆಲೆಸಿದ್ದು, ಇವರ ಪೈಕಿ 34 ಮಂದಿಯನ್ನು ಅವರ ದೇಶಗಳಿಗೆ ಗಡಿಪಾರು ಮಾಡಲಾಗಿದೆ. 50 ಮಂದಿಯನ್ನು ನೆಲಮಂಗಲದ ಸೊಂಡೆಕೊಪ್ಪದ ಡಿಟೆನ್ಷನ್‌ ಸೆಂಟರ್‌ (Detention Centre, Sondekoppa Nelamangala ) ನಲ್ಲಿ ಇಡಲಾಗಿದ್ದು ಅವರನ್ನು ಶೀಘ್ರವೇ ಗಡಿಪಾರು ಮಾಡುವ ಪ್ರಕ್ರಿಯೆ ನಡೆಯುತ್ತಿದೆ.

    ನೈಜೀರಿಯಾ ಪ್ರಜೆಗಳು ಸೇರಿದಂತೆ ಆಫ್ರಿಕಾ ದೇಶದ ಕೆಲವರು ಇಲ್ಲಿ ಅಕ್ರಮವಾಗಿ ನೆಲೆಸಿದ್ದು, ಮಾದಕವಸ್ತು ಮಾರಾಟ, ವೇಶ್ಯಾವಾಟಿಕೆ, ಸುಲಿಗೆ ಸೇರಿದಂತೆ ಇನ್ನಿತರೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪೊಲೀಸ್ ಇಲಾಖೆಯ ಅಂಕಿಅಂಶಗಳು ತಿಳಿಸಿವೆ. ಕ್ರಮವಾಗಿ ನೆಲೆಸಿರುವ 400ಕ್ಕೂ ಅಧಿಕ ಮಂದಿ ವಿರುದ್ಧ ಇಂತಹ ಕ್ರಿಮಿನಲ್‌ ಪ್ರಕರಣಗಳಿವೆ. ಈ ಪೈಕಿ ಕೆಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಮತ್ತೆ ಕೆಲವರು ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ.

    ವಿದ್ಯಾಭ್ಯಾಸ, ಪ್ರವಾಸ, ವ್ಯಾಪಾರ ವೀಸಾ ಅಡಿ ನಗರಕ್ಕೆ ಬರುವ ವಿದೇಶಿಯರು ವೀಸಾ ಅವಧಿ ಮುಗಿದ ಬಳಿಕವೂ ಇಲ್ಲಿಯೇ ಠಿಕಾಣಿ ಹೂಡಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಿದೇಶಿಯರ ಮೇಲೆ ನಿಗಾ ವಹಿಸಿ ಮಾಹಿತಿ ಸಂಗ್ರಹಿಸಿದ್ದು ಅವರ ಚಟುವಟಿಕೆಗಳ ಮೇಲೂ ಕಣ್ಗಾವಲು ಇರಿಸಲಾಗಿದೆ. ಪೂರ್ವ ವಿಭಾಗದ ಹೆಣ್ಣೂರು, ಬಾಣಸವಾಡಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನೈಜೀರಿಯಾ ಪ್ರಜೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈಶಾನ್ಯ ವಿಭಾಗದ ಕೊತ್ತನೂರು, ಸಂಪಿಗೆಹಳ್ಳಿ ಭಾಗದಲ್ಲೂ ಅಕ್ರಮ ವಿದೇಶಿಯರು ಇದ್ದಾರೆ. ಈಶಾನ್ಯ ವಿಭಾಗದ ಪೊಲೀಸರು ಕಳೆದ ವರ್ಷ ಅಕ್ರಮವಾಗಿ ನೆಲೆಸಿದ್ದ 40ಕ್ಕೂ ಹೆಚ್ಚು ವಿದೇಶಿಯರನ್ನು ಪತ್ತೆ ಹಚ್ಚಿದ್ದರು.

    ಸುದೀರ್ಘ ಪ್ರಕ್ರಿಯೆ 

    ಅಕ್ರಮ ವಿದೇಶಿಯರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಅತ್ಯಂತ ಸುದೀರ್ಘವಾಗಿದೆ. ಅವರ ದೇಶದ ರಾಯಭಾರ ಕಚೇರಿ ಮೂಲಕ ಪತ್ರ ವ್ಯವಹಾರ ನಡೆಸಬೇಕು. ಅವರನ್ನು ತವರು ದೇಶಗಳು ವಾಪಸ್‌ ಕರೆಸಿಕೊಳ್ಳಲು ಸಿದ್ಧವಿರಬೇಕು. ಕ್ರಿಮಿನಲ್‌ ಪ್ರಕರಣಗಳು ಇತ್ಯರ್ಥಗೊಂಡಿರಬೇಕು. ಜೊತೆಗೆ, ಅವರನ್ನು ವಿಮಾನದಲ್ಲಿ ಕಳುಹಿಸಿ ಕೊಡುವ ವ್ಯವಸ್ಥೆಯಾಗಬೇಕು. ಪ್ರತಿ ಪ್ರಕ್ರಿಯೆಯೂ ಎರಡೂ ದೇಶಗಳ ರಾಜತಾಂತ್ರಿಕ ವ್ಯವಹಾರದಡಿ ನಡೆಯಬೇಕು. ಹೀಗಾಗಿ, ವಿದೇಶಿಯರ ಗಡಿಪಾರು ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

    ಸೊಂಡೆಕೊಪ್ಪದ ಡಿಟೆನ್ಷನ್‌ ಸೆಂಟರ್‌ನಲ್ಲಿ 50 ಮಂದಿಯನ್ನು ಇಡಬಹುದು. ಹೀಗಾಗಿ, ಅಕ್ರಮ ವಾಸದ ವಿದೇಶಿ ಮಹಿಳೆಯರನ್ನು ತುಮಕೂರಿನಲ್ಲಿರಿಸಲು ಒಂದು ಕೇಂದ್ರ ಹಾಗೂ ಬೆಂಗಳೂರು ನಗರ ಭಾಗದಲ್ಲಿ ಮತ್ತೊಂದು ಕೇಂದ್ರ ತೆರೆಯಲು ಸರಕಾರ ಹಾಗೂ ವಿದೇಶಿಯರ ನೋಂದಣಿ ಪ್ರಾದೇಶಿಕ ಕಚೇರಿ ಅಧಿಕಾರಿಗಳ (FRRO) ಜೊತೆ ಚರ್ಚೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    Africa Bangalore Bengaluru CEN Detention Centre illegal immigrants Karnataka m mi MiG nelamangala Nigeria NRI Uttar pradesh ಆರೋಗ್ಯ ನ್ಯಾಯ ಮದುವೆ ವ್ಯವಹಾರ Business ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleBus ನಲ್ಲಿ ಯುವತಿ ಮೇಲೆ ಮೂತ್ರ ವಿಸರ್ಜಿಸಿದ Mechanical Engineer
    Next Article ಕೋಮು ಗಲಭೆಗೆ Siddaramaiah ಪ್ರಚೋದನೆ?
    vartha chakra
    • Website

    Related Posts

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    December 21, 2025

    ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

    December 21, 2025

    ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

    December 20, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_pqMt on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • 1win_snma on ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.
    • elektricheskie jaluzi_akot on ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe