Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀರಾವರಿ ನಿಗಮ ಕೊರೆಯುತ್ತಿರುವ ಗುಂಗೆ-ಸಾವಿರಾರು ಕೋಟಿ ಗೋಲ್ ಮಾಲ್?
    ರಾಜ್ಯ

    ನೀರಾವರಿ ನಿಗಮ ಕೊರೆಯುತ್ತಿರುವ ಗುಂಗೆ-ಸಾವಿರಾರು ಕೋಟಿ ಗೋಲ್ ಮಾಲ್?

    vartha chakraBy vartha chakraMarch 5, 2023Updated:March 5, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಗುತ್ತಿಗೆ ಕಾರ್ಯಾದೇಶ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬೆನ್ನಲ್ಲೇ ಇವರ ಮತ್ತಷ್ಟು ಅಕ್ರಮಗಳು ಬೆಳಕಿಗೆ ಬರತೊಡಗಿವೆ.
    ಕೇವಲ ಪ್ರಶಾಂತ್ ಮಾಡಾಳು ಮಾತ್ರವಲ್ಲ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮತ್ತೊಬ್ಬ ಪುತ್ರ ಮಲ್ಲಿಕಾರ್ಜುನ ಮಾಡಾಳು ಕೂಡ ಇಂತಹ ಅಕ್ರಮದಲ್ಲಿ‌ ನಿರತವಾಗಿರುವ ಅಂಶ ಬೆಳಕಿಗೆ ಬಂದಿದೆ.
    ಲಂಚ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ತಂಡಕ್ಕೆ ಅದರ ಜೊತೆಗೆ ಮತ್ತೊಂದು ಅಕ್ರಮದ ಕೆಲವು ದಾಖಲೆಗಳು ಲಭ್ಯವಾಗಿವೆ. ಇದರಲ್ಲಿ ನೀರಾವರಿ ಇಲಾಖೆಗೆ ಸೇರಿದ ದಾಖಲೆಗಳು ಹೆಚ್ಚಿನ ಪ್ರಮಾಣದಲ್ಲಿವೆ ಅದರಲ್ಲೂ ಕರ್ನಾಟಕ ನೀರಾವರಿ ನಿಗಮ ವ್ಯಾಪ್ತಿಯಲ್ಲಿ ನೂರಾರು ಕೋಟಿ ರೂಪಾಯಿಗಳ ಅಕ್ರಮದ ದಾಖಲೆಗಳು ಸಿಕ್ಕಿವೆ ಎನ್ನಲಾಗಿದೆ.
    ಶಾಸಕ ಮಾಡಾಳು ಅವರ ಮತ್ತೊಬ್ಬ ಪುತ್ರ ಮಲ್ಲಿಕಾರ್ಜುನ ಮಾಡಾಳು ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಈ ಅಕ್ರಮದಲ್ಲಿ ಶಾಮೀಲಾಗಿರುವ ದಾಖಲೆಗಳು ಸಿಕ್ಕಿವೆ ಎನ್ನಲಾಗುತ್ತಿದೆ.
    ಮಲ್ಲಿಕಾರ್ಜುನ ಗುಂಗೆ‌ ಕಳೆದ 2017 ರಿಂದ ರಾಜ್ಯ
    ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದು ಶಾಸಕ ಮಾಡಾಳು ಪುತ್ರನೊಂದಿಗೆ‌ ಸೇರಿ ಸುಮಾರು ಎರಡು ಸಾವಿರ ಕೋಟಿ ರೂಪಾಯಿಗಳಷ್ಟು ‌ಅಕ್ರಮವೆಸಗಿದ್ದಾರೆ ಎನ್ನಲಾಗಿದೆ.
    ಲೋಕಾಯುಕ್ತ ಪೊಲೀಸರು ಮಾಡಾಳು ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ವೇಳೆ ಇವುಗಳ ಪತ್ತೆಯಾಗಿವೆ.ಆದರೆ ಇವುಗಳ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದು ,
    ನೀರಾವರಿ ನಿಗಮದಲ್ಲಿ ನಕಲಿ ಬಿಲ್ ಸೃಷ್ಟಿಸಿ ಅಧಿಕಾರಿಗಳು, ಗುತ್ತಿಗೆದಾರರು ಹಣ ದುರ್ಬಳಕೆ ಮಾಡಿಕೊಂಡ ದಾಖಲೆಗಳು ಲೋಕಾಯುಕ್ತ ಪೊಲೀಸರನ್ನು ಬೆಚ್ಚಿ ಬೀಳಿಸಿವೆ.
    ಈ ಅಕ್ರಮದ ಬಗ್ಗೆ ಹಿಂದೆಯೇ ವಿಶೇಷ ಆಡಿಟ್ ಗೆ ಒಳಪಡಿಸಿದ್ದು,ನೂರಾರು ಕೋಟಿ ಅಕ್ರಮ ಪತ್ತೆಯಾಗಿದೆ.ನೇರವಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೇ ಶಾಮೀಲಾಗಿರುವ ಈ ಪ್ರಕರಣದ ಬಗ್ಗೆ ಯಾವುದೇ ತನಿಖೆಗೆ ಆದೇಶಿಸದಿರುವುದು ಅಚ್ಚರಿ ಮೂಡಿಸಿದೆ.
    ಜಲಸಂಪನ್ಮೂಲ ಇಲಾಖೆಗೆ ಪ್ರತಿ ಬಜೆಟ್‍ನಲ್ಲಿ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆಯಾಗುತ್ತದೆ. ಈ ಸಾವಿರಾರು ಕೋಟಿ ರೂ. ಅನುದಾನದಲ್ಲಿ ಪ್ರಮುಖ ನಾಲೆ, ಕಾಲುವೆ, ಇನ್ನಿತರ ನೀರಾವರಿ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುತ್ತದೆ. ಸರ್ಕಾರವೇ ಸಾವಿರಾರು ಕೋಟಿ ಸಾಲ ಮಾಡಿ ಕೊಡುತ್ತದೆ.
    ಆದರೆ, ನಿಗಮಗಳಲ್ಲಿನ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಶಾಮೀಲಾಗಿ ಹಣ ದುರುಪಯೋಗ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದೆ.
    ಶಾಸಕ ಮಾಡಳು ವಿರೂಪಾಕ್ಷಪ್ಪ ಅವರ ಪುತ್ರ ಮಲ್ಲಿಕಾರ್ಜುನ ಮಾಡಾಳು ಅವರ ‌ಕಚೇರಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಅಧಿಕೃತ ನಿವಾಸದ ಎದುರುಗಡೆಯೇ ಇದ್ದು, ಇದೊಂದು ರೀತಿಯಲ್ಲಿ ನೀರಾವರಿ ನಿಗಮದ ಬೇನಾಮಿ ಕಚೇರಿಯ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎನ್ನಲಾಗಿದೆ.
    ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸಚಿವರ ನಿವಾಸಕ್ಕೆ ಬರುವ ರೀತಿಯಲ್ಲಿ ಬಂದು ಈ ಬೇನಾಮಿ ಕಚೇರಿಯಲ್ಲಿ ಕುಳಿತು ಟೆಂಡರ್ ಪ್ರಕ್ರಿಯೆ ನಡೆಸುತ್ತಾರೆ. ಮಲ್ಲಿಕಾರ್ಜುನ ಮಾಡಾಳು ಅವರೊಂದಿಗೆ ಸೇರಿ ಕಾಮಗಾರಿ, ಗುತ್ತಿಗೆದಾರರನ್ನು ನಿಗದಿಪಡಿಸಿದ ನಂತರ ಕಾಮಗಾರಿಗೆ ಮೊತ್ತ ಅಂದಾಜಿಸಲಾಗುತ್ತದೆ ಆ ಬಳಿಕವಷ್ಟೇ ಟೆಂಡರ್. ಕರ್ನಾಟಕ ಪಾರದರ್ಶಕ ಕಾಯಿದೆ ಅನ್ವಯ ಟೆಂಡರ್ ಕರೆಯುವ ಪ್ರಾಧಿಕಾರ ತನ್ನ ಪ್ರಕ್ರಿಯೆಯಲ್ಲಿ ಸಾಕಷ್ಟು ಬದಲಾವಣೆ ಮಾಡುವ ಅಧಿಕಾರ ಹೊಂದಿದೆ. ಬಿಡ್ ಪೂರ್ವ ಸಭೆಯ ನಂತರ ಇದಕ್ಕೆ ಕಾಯಿದೆಯಲ್ಲಿ ಅವಕಾಶವಿದೆ.ಇದನ್ನು ಬಳಸಿಕೊಂಡ ವ್ಯವಸ್ಥಾಪಕ ನಿರ್ದೇಶಕರು ಮಾಡಾಳು ಮಲ್ಲಿಕಾರ್ಜುನ ಅವರೊಂದಿಗೆ ಸೇರಿ ಬಿಡ್ ಪೂರ್ವ ಸಭೆ ಹೆಸರಲ್ಲಿ ಅಕ್ರಮವೆಸಗುತ್ತಿದ್ದರು ಎನ್ನಲಾಗಿದೆ ಈ ರೀತಿಯಲ್ಲಿ ಸುಮಾರು ಎರಡು ಸಾವಿರ ಕೋಟಿ ಗೂ ಅಧಿಕ ಅಕ್ರಮವೆಸಗಿದ್ದು,ಇಲ್ಲಿಯವರೆಗೆ ಇದರ ಬಗ್ಗೆ ಪ್ರತಿಪಕ್ಷಗಳೂ ಯಾರೂ ಕೂಡ ಚಕಾರ ಎತ್ತದಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
    ಇದೊಂದು ಕಡೆಯಾದರೆ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಾರ್ಯ ವೈಖರಿ ಹಲವು ಅನುಮಾನಗಳಿಗೆ ಕಾರಣವಾಗಿದೆ.ಶಾಸಕರು ಸೇರಿ‌ ಜನಪ್ರತಿನಿಧಿಗಳಿಗೆ ಯಾವುದೇ ಗೌರವ ನೀಡುವುದಿಲ್ಲ. ಇವರ ಭೇಟಿಗಾಗಿ ಶಾಸಕರು ತಾಸುಗಟ್ಟಲೆ ಇವರ ಕಚೇರಿ ಮುಂದೆ ಕಾಯಬೇಕು. ಆದರೆ ಇವರು ಮಾತ್ರ ಮಾಡಾಳು ಪುತ್ರನ ಕಚೇರಿಯಲ್ಲಿ ಠಳಾಯಿಸಿರುತ್ತಾರೆ ಎಂಬ ದೂರು ಸಾಮಾನ್ಯವಾಗಿದೆ.
    ಬರುವ ಆಗಸ್ಟ್ ನಲ್ಲಿ ಸೇವೆಯಿಂದ ನಿವೃತ್ತರಾಗುತ್ತಿರುವ ನಿರ್ದೇಶಕರು ಅದಕ್ಕೂ‌ ಮುನ್ನವೇ ಸರ್ಕಾರಿ ಉದ್ಯೋಗಕ್ಕೆ ಗುಡ್ ಬೈ ಹೇಳಿ ರಾಜಕಾರಣ ಪ್ರವೇಶದ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಲ್ಲವೂ ಅಂದುಕೊಂಡಂತಾದರೆ ಮುಂಬರುವ ಚುನಾವಣೆಯಲ್ಲಿ ಅಖಾಡಕ್ಕಿಳಿದರೂ‌ ಅಚ್ಚರಿಯಿಲ್ಲ.

    Verbattle
    Verbattle
    Verbattle
    Election ಲಂಚ
    Share. Facebook Twitter Pinterest LinkedIn Tumblr Email WhatsApp
    Previous ArticlePayCM ಫಲಾನುಭವಿ!
    Next Article ಪ್ರವೀಣ್ ನೆಟ್ಟಾರು‌ ಹಂತಕ ಬೆಂಗಳೂರಲ್ಲಿ ಸೆರೆಸಿಕ್ಕ
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. Spcksj on February 12, 2026 1:55 am

      mgmbets betmgm-play betmgm UT

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • JoshuaAborn on ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ
    • Glennhof on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.