Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Mandya ಕಾಂಗ್ರೆಸ್ ನಲ್ಲಿ ಧಗಧಗಿಸುತ್ತಿರುವ ಭಿನ್ನಮತ #mandya #congress
    ರಾಜ್ಯ

    Mandya ಕಾಂಗ್ರೆಸ್ ನಲ್ಲಿ ಧಗಧಗಿಸುತ್ತಿರುವ ಭಿನ್ನಮತ #mandya #congress

    vartha chakraBy vartha chakraMarch 7, 202326 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯದಲ್ಲಿ ‌ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ಹಗಲಿರುಳು ಶ್ರಮಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರ ‌ವೈಮಸಸ್ಸು ಬಗೆಹರಿಸಲಾಗದ ಬಿಕ್ಕಟ್ಟಾಗಿ ಪರಿಣಮಿಸಿದೆ.
    ಜಾತ್ಯಾತೀತ ಜನತಾದಳದ ಭದ್ರ ಕೋಟೆಯನ್ನು ಈ ಬಾರಿ ಬೇಧಿಸಬೇಕೆಂದು ಪಣ ತೊಟ್ಟು ತಂತ್ರಗಾರಿಕೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಲ್ಲಾ ನಾಯಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗಲು ನಡೆಸುತ್ತಿರುವ ಪ್ರಯತ್ನ ನಿರೀಕ್ಷಿತ ಫಲಿತಾಂಶ ನೀಡುತ್ತಿಲ್ಲ.
    ಜಿಲ್ಲೆಯಲ್ಲಿ ‌ಪ್ರಭಾವ ಬೀರುವಂತಹ ನಾಯಕತ್ವದ ಕೊರತೆಯಿಂದಾಗಿ ಯಾರ ಮಾತನ್ನು ಯಾರೂ ಕೇಳದಂತಹ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಪ್ರತಿಯೊಬ್ಬ ನಾಯಕರದ್ದೂ ಒಂದೊಂದು ಬಣ.ಯಾರೂ ಯಾರಿಗೂ ಉತ್ತರದಾಯಿಲ್ಲ ಎಂಬ ಸ್ಥಿತಿ, ಎಲ್ಲರೂ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ ಇದರಿಂದಾಗಿ ಎಲ್ಲೆಡೆ ಗೊಂದಲವೋ ಗೊಂದಲ
    ಈ ಗೊಂದಲ ಸರಿಪಡಿಸಿ, ಭಿನ್ನಮತಕ್ಕೆ ಬೆಣೆ ಹೊಡೆಯಲು‌ ಸತತ ಪ್ರಯತ್ನ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳೆದ ಕೆಲ ದಿನಗಳ ಹಿಂದೆ ಮಂಡ್ಯ ಮತ್ತು ಮೈಸೂರಿನಲ್ಲಿ ಪ್ರಮುಖರ ಸಭೆ ನಡೆಸಿ, ಕೆಲವು ಸಲಹೆ ಸೂತ್ರ ನೀಡಿ ಎಲ್ಲರಿಗೂ ಪಾಲಿಸುವಂತೆ ಹೇಳಿದ್ದರು.ಇದರಿಂದ ಬಿಕ್ಕಟ್ಟು ಬಗೆಹರಿಯಬಹುದೆಂದುಕೊಂಡಿದ್ದರು.ಆದರೆ,ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ಮತ್ತೆ ಸಂಧಾನದ ಅಖಾಡಕ್ಕೆ ಧುಮುಕಿದ್ದಾರೆ.
    ಅಲ್ಲಿನ ಬಿಕ್ಕಟ್ಟು ಹೇಗಿದೆಯೆಂದರೆ, ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ ಕೋರಿ 15 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಟಿಕೆಟ್‌ ಹಂಚಿಕೆ ಮಾಡುವ ಜವಾಬ್ದಾರಿ ವರಿಷ್ಠರ ಮೇಲಿದೆ. ಸ್ಥಳೀಯ ಕಾಂಗ್ರೆಸ್‌ ನಾಯಕರು ಹಾಗೂ ಟಿಕೆಟ್‌ ಆಕಾಂಕ್ಷಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ.
    ಕಳೆದ ಬಾರಿ ‌ಸ್ಪರ್ಧಿಸಿದ ಗಣಿಗ ರವಿ ಈಗಾಗಲೇ ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ ಮಾಡುತ್ತಿದ್ದು,ಸಭೆ, ಸಮಾರಂಭಗಳಲ್ಲಿ ನಿರತರಾಗಿದ್ದಾರೆ. ಕಳೆದ ಬಾರಿ ಸೋತಿರುವ ತಮಗೆ‌ ಮತದಾರರು ಅನುಕಂಪ ತೋರಲಿದ್ದಾರೆ ಎಂದು ಭಾವಿಸಿ ಕ್ಷೇತ್ರಾದ್ಯಂತ ವಾಲಿಬಾಲ್, ಕ್ರಿಕೆಟ್ ಟೂರ್ನಮೆಂಟ್,ದೇವರ ಉತ್ಸವ ಸೇರಿದಂತೆ ಹಲವು ಕಾರ್ಯಕ್ರಮ ಸಂಘಟನೆಯಲ್ಲಿ ತೊಡಗಿದ್ದು ತಾವೇ‌ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ.ಮತ್ತೊಂದೆಡೆ ಡಾ.ಮಹೇಶ್ ಕೂಡಾ ನಾನೇ ಅಭ್ಯರ್ಥಿ ಪಕ್ಷದ ಅಧ್ಯಕ್ಷ ಶಿವಕುಮಾರ್ ಅವರ ಆಶೀರ್ವಾದ ತಮ್ಮ ಮೇಲಿದೆ ಎನ್ನುತ್ತಿದ್ದಾರೆ.
    ಇಂತಹ ಗೊಂದಲದ ನಡುವೆ ಇದೀಗ ಮಾಜಿ ಸಚಿವ ಚಲುವರಾಯಸ್ವಾಮಿ ಅವರ‌ ಪ್ರವೇಶವಾಗಿದೆ. ಇವರು ಪ್ರತಿನಿಧಿಸುವ ನಾಗಮಂಗಲ ಕ್ಷೇತ್ರದಲ್ಲಿ ಪರಿಸ್ಥಿತಿ ಅಷ್ಟು ಅನುಕೂಲಕರವಾಗಿಲ್ಲ ಎಂಬ ವರದಿಗಳ ಹಿನ್ನೆಲೆಯಲ್ಲಿ ಇದೀಗ ಚಲುವರಾಯಸ್ವಾಮಿ ಮಂಡ್ಯ‌ ಕ್ಷೇತ್ರದತ್ತ ಒಲವು ವ್ಯಕ್ತಪಡಿಸಿದ್ದಾರೆ.
    ನಾಗಮಂಗಲಕ್ಕೆ ಬದಲಾಗಿ ತಮಗೆ‌ ಮಂಡ್ಯದಲ್ಲಿ ಅವಕಾಶ ಕೊಡುವಂತೆ ವರಿಷ್ಠರಲ್ಲಿ ಮನವಿ‌ ಮಾಡಿದ್ದು ಆಕಾಂಕ್ಷೆಗಳ ನಿದ್ದೆಗೆಡಿಸಿದೆ.
    ಇದರ ನಡುವೆ ಸಚಿವ ನಾರಾಯಣ ಗೌಡ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದು, ಕೆ.ಆರ್.ಪೇಟೆಯಿಂದ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದಾರೆ. ನಾರಾಯಣ ಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರೇ ಅದು ತಮಗೆ ಅನುಕೂಲ ಎಂದು ಕೆಪಿಸಿಸಿ ಭಾವಿಸಿದೆ‌.ಆದರೆ, ಕೆ.ಆರ್‌.ಪೇಟೆ ಕ್ಷೇತ್ರದಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್‌ ಅವರು ಟಿಕೆಟ್‌ಗೆ ಪಟ್ಟು ಹಿಡಿದಿದ್ದಾರೆ. ಅವರು ಇಲ್ಲಿಬ3 ಬಾರಿ ಸೋತಿದ್ದಾರೆ.ಈ ಸೋಲಿನ ಅನುಕಂಪ ಈ ಬಾರಿ ತಮ್ಮ ಕೈ‌ಹಿಡಿಯಲಿದೆ ಎನ್ನುತ್ತೊರುವ ಅವರು ಟಿಕೆಟ್ ಕೊಡದೆ ಹೋದರೆ ಬಂಡಾಯ ಸಾರುವ ಬೆದರಿಕೆ ಹಾಕಿದ್ದಾರೆ.
    ಮಳವಳ್ಳಿ ,‌ಶ್ರೀರಂಗಪಟ್ಟಣ ಹೊರತು ಪಡಿಸಿ ಎಲ್ಲಾ ಕ್ಷೇತ್ರಗಳಲ್ಲೂ ಇಂತಹದೆ ವಾತಾವರಣವಿದ್ದು ನಾಯಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
    ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಸೋಮವಾರ ರಾತ್ರಿ ನಡೆದ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಸಂಸದ ಡಿ.ಕೆ. ಸುರೇಶ್ , ರಾಜ್ಯಸಭೆ ಸದಸ್ಯ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಹೊನ್ನಲಗೆರೆ ರಾಮಕೃಷ್ಣ, ಮದ್ದೂರಿನ ಕಾಂಗ್ರೆಸ್ ಮುಖಂಡರಾದ ಎಸ್. ಗುರುಚರಣ್ ಮತ್ತು ಉದಯ್ ಅವರ ಜತೆ ಸಮಾಲೋಚನೆ ನಡೆಸಿದರು.
    ಈ ವೇಳೆ ಹಲವಾರು ವಿಷಯ ಚರ್ಚಿಸಿ‌ ರಾಜಿ ಸೂತ್ರ ಮಂಡಿಸಿದ ಶಿವಕುಮಾರ್ ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಎಲ್ಲಾ ಆಕಾಂಕ್ಷಿಗಳು ಒಗ್ಗಟ್ಟಿನಿಂದ ಅವರ ಗೆಲುವಿಗೆ ಸಹಕಾರ ನೀಡಬೇಕು’ ಎಂದು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
    ಆದರೆ‌ ಇದು ಎಷ್ಟರಮಟ್ಟಿಗೆ ಕಾರ್ಯಸಾಧುವಾಗಲಿದೆ ಎಂಬುದನ್ನು ಕಾದು ನೋಡಬೇಕು.

    Verbattle
    Verbattle
    Verbattle
    #Mandya Congress m ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಕಾಫಿ-ತಿಂಡಿಗಾಗಿ ಖರ್ಚು ಮಾಡಿದ್ದು‌ 200 ಕೋಟಿ! #siddaramaiah
    Next Article ಚನ್ನಗಿರಿಯಲ್ಲಿ‌ ಸಾಮಾನ್ಯರ ಮನೇಲೂ ನಾಲ್ಕೈದು ಕೋಟಿ ಇರುತ್ತೆ!
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kiafek on ಪಂಚಾಯಿತಿಗಳಲ್ಲಿ ಜನನ- ಮರಣ ಪ್ರಮಾಣ ಪತ್ರ.
    • LinwoodGah on ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • LarryCax on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.