Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಂ. ಬಿ. ಪಾಟೀಲ್ ಅವರೇ ಹುಷಾರ್…
    ಸುದ್ದಿ

    ಎಂ. ಬಿ. ಪಾಟೀಲ್ ಅವರೇ ಹುಷಾರ್…

    vartha chakraBy vartha chakraMarch 13, 2023Updated:March 15, 202326 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ,ಮಾ.13-

    ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಕೆಲವು ಅಪರೂಪ ಅನಿರೀಕ್ಷಿತ ಹಾಗೂ ಅಚ್ಚರಿಯ ಘಟನೆಗಳು ನಡೆಯುತ್ತಿವೆ.ಇದರ ಸಾಲಿಗೆ ಇದೀಗ ಪ್ರಮುಖ ನಾಯಕರ ಚಲನ ವಲನಗಳ ಮೇಲೆ ಕಣ್ಣಿಡುವ ಕೆಲಸ ಆರಂಭಗೊಂಡಿದೆ.

    ಸದ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರ ಚಲನವಲನಗಳ ಮೇಲೆ ನಿಗಾವಹಿಸಿರುವ ಬಗ್ಗೆ ಅವರಿಗೆ ಮಾಹಿತಿ ಲಭ್ಯವಾಗಿವೆ. ಯಾರು,ಯಾವ ಕಾರಣಕ್ಕಾಗಿ ಈ ಮಾಹಿತಿ ಸಂಗ್ತಹಿಸುತ್ತಿದ್ದಾರೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.ಅದರೆ ಎಂ.ಬಿ‌.ಪಾಟೀಲ್ ಹಾಗೂ ಅವರ ಕುಟುಂಬ ಸದಸ್ಯರು ಮತ್ತು ಆಪ್ತರ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ. ಈ ಬಗ್ಗೆ ಸ್ವತಃ ಎಂ.ಬಿ.ಪಾಟೀಲ್ ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ನನ್ನ ಹಾಗೂ ನನ್ನ ಕುಟುಂಬ, ಆಪ್ತರ ದೂರವಾಣಿ ಕರೆಗಳ ವಿವರ( ಕಾಲ್ ಡಿಟೈಲ್ಸ್) ಸಂಗ್ರಹ ಮಾಡಲಾಗುತ್ತಿದೆ ಎಂದು ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.

    ನನ್ನ ಹಾಗೂ ನನ್ನ ಕುಟುಂಬ ಮತ್ತು ಆಪ್ತರ ಕಾಲ್ ಡಿಟೇಲ್ಸ್ ಯಾರಿಗೂ ನೀಡಬಾರದೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

    ನನ್ನ ಕ್ಷೇತ್ರ ಬಬಲೇಶ್ವರದಲ್ಲಿ ಕೆಲವರು ದುರುದ್ದೇಶದಿಂದ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾಲ್ ಹಿಸ್ಟರಿ ತೆಗೆಸುತ್ತಿದ್ದಾರೆ. ಬೆಳಗಾವಿ, ಬಾಗಲಕೋಟೆ, ಕಲಬುರಗಿ ಹಾಗೂ ಇತರೆ ಜಿಲ್ಲೆಗಳಲ್ಲಿ ಕಾಲ್ ಹಿಸ್ಟರಿ ತೆಗೆಸಲಾಗುತ್ತಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಮ್ಮ ವಿರೋಧಿಗಳು ಈ ಕೃತ್ಯ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ನನ್ನ ಮೊಬೈಲ್ ಕರೆ ಮಾಹಿತಿ, ನನ್ನ ಪತ್ನಿ ಆಶಾ ಪಾಟೀಲ್, ಸಹೋದರ ಹಾಗೂ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ್, ಪುತ್ರ ಬಸನಗೌಡ ಪಾಟೀಲ್, ಹಾಗೂ ಬಿಎಲ್ಡಿಇ ಪ್ರಚಾರ ಅಧಿಕಾರಿ ಮಹಾಂತೇಶ ಬಿರಾದಾರ ಕಾಲ್ ಹಿಸ್ಟರಿ ತೆಗೆಸುತ್ತಿದ್ದಾರೆ. ಇದು ವೈಯಕ್ತಿಕ ಮಾಹಿತಿ ಕಸಿಯುವ ಯತ್ನವಾಗಿರುತ್ತದೆ. ಈ ಕಾರಣ ನಮ್ಮೆಲ್ಲರ ಕಾಲ್ ಹಿಸ್ಟರಿಗಳನ್ನ ಯಾರಿಗೂ ನೀಡದಂತೆ ಮನವಿ. ನಮ್ಮೆಲ್ಲರ ಕಾಲ ಹಿಸ್ಟರಿಗಳನ್ನ ಯಾರಿಗೂ ನೀಡದಂತೆ ಸಂಬಂಧಿಸಿದ ಸಿಮ್ ಏಜೆನ್ಸಿ ಹಾಗೂ ಪೊಲೀಸ್ ಇಲಾಖೆಯವರಿಗೆ ಕಟ್ಟುನಿಟ್ಟಾಗಿ ಸೂಚಿಸಲು ದೂರಿನಲ್ಲಿ ಎಂಬಿ ಪಾಟೀಲ್ ಉಲ್ಲೇಖ ಮಾಡಿದ್ದಾರೆ.

    ಒಂದು ವೇಳೆ ನಮ್ಮೆಲ್ಲರ ಕಾಲ್ ಹಿಸ್ಟರಿ ನೀಡಿದರೆ ಅದಕ್ಕೆ ಎಜೆನ್ಸಿ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಹೊಣೆಯಾಗುತ್ತದೆ ಎಂದು ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂಬಿ ಪಾಟೀಲ್ ದೂರು ದಾಖಲಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಸಂಬಳ ಜಾಸ್ತಿ ಮಾಡದಿದ್ದರೆ ಕರೆಂಟ್ ಕಟ್
    Next Article ನಿದ್ರೆಯ ಕಾಟದಿಂದ ಮುಕ್ತಗೊಳಿಸಿ- ಪೊಲೀಸರಿಗೆ ದೂರು
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Glennhof on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • casino cz_jiEl on ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.