ಬೆಂಗಳೂರು,ಏ.8- ಮೇ 9 ರಂದು ನಡೆಯಲಿರುವ ವಿಧಾನಸಭೆ Electionಯಲ್ಲಿ (Elections) ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ (congress) ಆಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆ ಟಿಕೆಟ್ ವಂಚಿತರ ಅಸಮಾಧಾನ ಭುಗಿಲೆದ್ದಿದ್ದು ಪ್ರಭಾವಿ ನಾಯಕರು ಇದೀಗ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪೈಪೋಟಿ ನಡೆಸಿದ್ದ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಮತ್ತು ರಘು ಆಚಾರ್ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ಹಲವು ಸುತ್ತಿನ ಸಮಾಲೋಚನೆ ನಡೆಸಿದ ರಘು ಆಚಾರ್ ಜಾತ್ಯಾತೀತ ಜನತಾದಳ ಸೇರುವುದಾಗಿ ತಿಳಿಸಿದ್ದು 14 ರಂದು ವಿದ್ಯುಕ್ತವಾಗಿ ಪಕ್ಷಕ್ಕೆ ಸೇರುತ್ತಿದ್ದಾರೆ. ಎಸ್ ಕೆ ಬಸವರಾಜನ್ ಅವರ ನಡೆ ಇನ್ನು ಗೊತ್ತಾಗಿಲ್ಲ ಹಾವೇರಿಯ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ ಮಾಜಿ ಶಾಸಕ ಮನೋಹರ ತಹಶೀಲ್ದಾರ ಇದೀಗ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನವನ್ನು ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಕಲಘಟಗಿ ವಿಧಾನಸಭಾ ಕ್ಷೇತ್ರವನ್ನು ಸ್ಪರ್ಧಿಸಲು ತಯಾರಿ ನಡೆಸಿದ ನಾಗರಾಜ ಛಬ್ಬಿ ತಮಗೆ ಕೈ ಟಿಕೆಟ್ ತಪ್ಪಿದ್ದರಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಅಳಿಯ ಮಾಜಿ ಶಾಸಕ ರಫೀಕ್ ಅಹಮದ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪ್ರಬಲ ಲಾಭಿ ನಡೆಸಿದ್ದ ಶಫಿ ಅಹಮದ್ ಇದೀಗ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ ಅಲ್ಲದೆ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾಕ್ಟರ್ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ನಾಯಕರೊಂದಿಗೆ ತೀವ್ರ ಭಿನ್ನಾಭಿಪ್ರಾಯ ಹಿನ್ನೆಲೆಯಲ್ಲಿ ಆ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ವೈ ಎಸ್ ವಿ ದತ್ತ ಅವರಿಗೆ ಟಿಕೆಟ್ ಕೈತಪ್ಪಿದೆ ಇದರಿಂದ ಆಘಾತಗೊಂಡಿರುವ ಅವರು ತಮ್ಮ ಬೆಂಬಲಿಗರೊಂದಿಗೆ ಸತತ ಆಕೆ ಸಮಲೋಚನೆ ನಡೆಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದು ತಮಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಆದರೆ ಅವರಿಂದ ಈ ಬಗ್ಗೆ ಯಾವುದೇ ಖಚಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಅವರು ಇದೀಗ ಕಡೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ.