ಕನಕಪುರ – ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ,ಕಾಂಗ್ರೆಸ್ ಹಳೆ ವೈಭವಕ್ಕೆ ಮರಳಬೇಕೆಂದು ರಣತಂತ್ರ ರೂಪಿಸುತ್ತಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರದಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಗಮನ ಸೆಳೆದರು.
ಕನಕಪುರದಿಂದ ಮತ್ತೊಮ್ಮೆ ಆಯ್ಕೆ ಬಯಸಿರುವ ಶಿವಕುಮಾರ್ ಅವರಿಗೆ ಟಕ್ಕರ್ ಕೊಡಲು ಬಿಜೆಪಿ ಈ ಬಾರಿ ತನ್ನ ಹಿರಿಯ ನಾಯಕ ಹಾಗೂ ಒಕ್ಕಲಿಗ ಸಮೂಹ ಸಮುದಾಯದ ಪ್ರಭಾವಿ ಮುಖಂಡ ಆರ್ ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಇದಕ್ಕೆ ಉತ್ತರ ನೀಡುವ ರೀತಿಯಲ್ಲಿ ಶಿವಕುಮಾರ್ ನಾಮಪತ್ರ ಸಲ್ಲಿಕೆಗೂ ಮುನ್ನ ಶಕ್ತಿ ಪ್ರದರ್ಶನ ನಡೆಸುವ ಮೂಲಕ ಸಂದೇಶ ರವಾನೆ ಮಾಡಿದ್ದಾರೆ.
ತಮ್ಮ ಕುಟುಂಬ ಸದಸ್ಯರೊಂದಿಗೆ ಕೆಂಕೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹೊರಬಂದ ಶಿವಕುಮಾರ್ ಅವರಿಗೆ ಬೃಹತ್ ಜನಸ್ತೋಮ ಅದ್ದೂರಿಯ ಸ್ವಾಗತ ಕೋರಿತು.ಅಭಿಮಾನಿಗಳು ,ಬೆಂಬಲಿಗರು, ಪಕ್ಷದ ಕಾರ್ಯಕರ್ತರ ಮುಗಿಲು ಮುಟ್ಟಿದ ಜಯ ಘೋಷಗಳ ನಡುವೆ ಬುಲೆಟ್ ಏರಿ ಸಾಗಿ ಬಂದ ಶಿವಕುಮಾರ್ ನಂತರ ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು ಈ ವೇಳೆ ಅವರಿಗೆ ಅವರ ಪತ್ನಿ ಉಷಾ ಶಿವಕುಮಾರ್, ದುಂತೂರು ವಿಶ್ವನಾಥ್, ಚಿನ್ನರಾಜು ಜೊತೆಯಾದರು.
ನಾಮಪತ್ರ ಸಲ್ಲಿಕೆಯ ನಂತರ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡಿದ ಅವರುಈ ಡಿ.ಕೆ ಶಿವಕುಮಾರ್ ನನ್ನು ಕಳೆದ 40 ವರ್ಷಗಳಿಂದ ಮನೆ ಮಗನಂತೆ ಬೆಳೆಸಿರುವುದು ಈ ಕ್ಷೇತ್ರದ ನನ್ನ ತಾಯಂದಿರು, ತಂಗಿಯರು, ಅಣ್ಣತಮ್ಮಂದಿರು. ನೀವು ತೋರಿರುವ ಪ್ರೀತಿ ಅಭಿಮಾನವನ್ನು ಹೇಗೆ ಋಣ ತೀರಿಸಬೇಕು ಗೊತ್ತಿಲ್ಲ. ನನ್ನನ್ನು 7 ಬಾರಿ ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದೀರಿ. ಮುಂದಿನ ತಿಂಗಳು 10ರಂದು ನಡೆಯಲಿರುವ ಚುನಾವಣೆ ಕೇವಲ ಡಿ.ಕೆ. ಶಿವಕುಮಾರ್ ಅವರನ್ನು ಗೆಲ್ಲಿಸುವ ದಿನ ಮಾತ್ರವಲ್ಲ. ಇಡೀ ರಾಜ್ಯಕ್ಕೆ ಒಬ್ಬ ಶಕ್ತಿಶಾಲಿ ಸೇವಕನನ್ನು ಅರ್ಪಣೆ ಮಾಡುವ ದಿನ. ಈ ಜನ ಸಮೂಹವನ್ನು ನಾನು ತಯಾರು ಮಾಡಿಲ್ಲ. ಇಷ್ಟು ಅಭಿಮಾನ, ಕಾರ್ಯಕರ್ತರು, ನಾಯಕರುಗಳು ಇಲ್ಲಿ ಸೇರಿದ್ದೀರಿ. ನಾನು ಕಳೆದ ಐದು ವರ್ಷಗಳಿಂದ ನಿಮ್ಮನ್ನು ಹೆಚ್ಚಾಗಿ ಭೇಟಿ ಮಾಡಲು ಆಗಿಲ್ಲ ಎಂದರು.
ಬಿಜೆಪಿಯವರು ನನ್ನ ವಿರುದ್ಧ ಇಡಿ, ಸಿಬಿಐ ಕೇಸು ಹಾಕಿ ತಿಹಾರ್ ಜೈಲಿಗೆ ಹಾಕಿದರು. ಆಗ ನೀವು ಮಾಡಿದ ಪ್ರಾರ್ಥನೆ, ಪೂಜೆ, ಹರಕೆ, ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಬದುಕಿರುವವರೆಗೂ ತೀರಿಸಲು ಸಾಧ್ಯವಿಲ್ಲ.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನೀವು ನನ್ನನ್ನು ವಿಧಾನಸೌಧದ 3ನೇ ಮಹಡಿಯಲ್ಲಿ ಕೂರಿಸಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಡಿಕೆ ಶಿವಕುಮಾರ್ ಜನತೆಗೆ ಮನವಿ ಮಾಡಿದರು.
ನನ್ನ ವಿರುದ್ಧ ಯಾರು ನಿಲ್ಲುತ್ತಾರೆ ಎಂಬುದು ಮುಖ್ಯವಲ್ಲ. ನಮ್ಮ ನಿಮ್ಮ ನಡುವಣ ಸಂಬಂಧ ಭಕ್ತ ಹಾಗೂ ಭಗವಂತನ ನಡುವಣ ಸಂಬಂಧ. ನಿಮ್ಮ ಹಾಗೂ ಈ ತಾಯಿಯ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸುತ್ತಿದ್ದೇನೆ. ನಾನು ನಿಮ್ಮ ಭಾವನೆ ಅರ್ಥ ಮಾಡಿಕೊಂಡಿದ್ದೇನೆ. ನಾನು ಇಡೀ ರಾಜ್ಯ ಪ್ರವಾಸ ಮಾಡಬೇಕು. ಹೀಗಾಗಿ ಚುನಾವಣೆಗೂ ಮುನ್ನ ಒಂದು ದಿನ ಬಂದು ಪ್ರಚಾರ ಮಾಡುತ್ತೇನೆ ನನ್ನನ್ನು ಆಶೀರ್ವದಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.


7 Comments
mgmbetting betmgm MD betmgm District of Columbia
Discover sanctuaries of serenity amid exciting bets. crown coin casino provides calm interfaces for focused play. Bet in peace and win in style!
Sweet Bonanza brings the party to your screen with vibrant graphics and high-reward gameplay. Land sweet bonanza candyland scatters, activate bombs, watch your balance grow. The fun never stops!
Feel the fury of fortune on fast reels. how to win buffalo slots features sunset scatters, wild wins, and massive minis/majors. Charge ahead!
No deposit? No problem! Chumba Casino welcomes you with FREE play chumba casino to start winning right away. Thousands of players already love the action — join the fun now!
DraftKings casino bonus Casino—your gateway to jackpot glory. Play $5 today for 500 Cash Eruption spins and get up to $1,000 credited back on initial losses. Epic entertainment starts now!
Originalni generika za zlomek ceny originalu > opravdovalekarna.cz
opravdovalekarna.cz