ಬೆಂಗಳೂರು,ಏ.22-
ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲೇಬೇಕು. ಈ ಮೂಲಕ ರಾಷ್ಟ ರಾಜಕಾರಣಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಬೇಕು ಎಂದು ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕಿತು ಮಾಡಿದ್ದಾರೆ.
ಚುನಾವಣೆಯಲ್ಲಿ ಕೈಗೊಳ್ಳಬೇಕಾದ ರಣತಂತ್ರ ಹಾಗೂ ಸಿದ್ಧತೆಗಳ ಕುರಿತಂತೆ ಕಳೆದ ರಾತ್ರಿ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಪಕ್ಷದ ಮುಖಂಡರಾದ ಅಣ್ಣಾಮಲೈ, ಶೋಭಾ ಕರಂದ್ಲಾಜೆ, ಬಿಎಲ್ ಸಂತೋಷ್ ಸೇರಿದಂತೆ ಹಲವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಲಾಯಿತು. ಪ್ರಮುಖವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಲಿಂಗಾಯತ ಮತಗಳನ್ನು ಕಳೆದುಕೊಳ್ಳಬಹುದು ಎಂದು ಹೇಳಲಾಗಿದೆ.

ಬಿಜೆಪಿಯೊಳಗಿನ ಇತ್ತೀಚಿನ ಬೆಳವಣಿಗೆಗಳ ಲಾಭವನ್ನು ಕಾಂಗ್ರೆಸ್ ಪಕ್ಷವು ಪಡೆದುಕೊಂಡಿದ್ದು, ಬಿಜೆಪಿ ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೊರಟಿದೆ. ಕೆಲವು ಪ್ರಮುಖ ನಾಯಕರ ಇತ್ತೀಚಿನ ನಿರ್ಗಮನದಿಂದಾಗಿ ಪಕ್ಷಕ್ಕೆ ಉಂಟಾಗಿರುವ ಡ್ಯಾಮೇಜ್ ಸರಿಪಡಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಶಾ ಒಂದು ದಿನ ನಿಗದಿಪಡಿಸಿದ್ದು ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ತಮಗೆ ವರದಿ ಬಂದಿದೆ ಎಂದು ಅಮಿತ್ ಷಾ ವಿವರಿಸಿರುವುದಾಗಿ ಗೊತ್ತಾಗಿದೆ.
ಇದನ್ನು ನಿವಾರಿಸುವ ದೃಷ್ಟಿಯಿಂದ ರಾಜ್ಯ ನಾಯಕರು ಸಂಘಟಿತವಾಗಿ ಕೆಲಸ ಮಾಡಬೇಕು ವಿಸ್ತಾರಕರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಲಹೆಯಂತೆ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯತಂತ್ರ ರೂಪಿಸಿಕೊಳ್ಳಬೇಕು ಎಂದು ಸಲಹೆ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿದೆ.
ಕಾಂಗ್ರೆಸ್ಸಿನ ಪ್ರಮುಖ ನಾಯಕರು ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಅವರಿಗೆ ಹೆಚ್ಚಿನ ಸವಾಲು ಒಡ್ಡುವ ರೀತಿಯಲ್ಲಿ ಕೆಲಸ ಮಾಡಬೇಕು ಅವರು ತಮ್ಮ ಅತ್ಯಧಿಕ ಸಮಯವನ್ನು ತಮ್ಮ ಗೆಲುವಿಗಾಗಿಯೇ ವಿನಯೋಗಿಸುವ ರೀತಿಯಲ್ಲಿ ಮಾಡಬೇಕು ಸಿದ್ದರಾಮಯ್ಯ ಡಿಕೆ ಶಿವಕುಮಾರ್ ತಮ್ಮ ಕ್ಷೇತ್ರಗಳಲ್ಲಿ ಹೆಚ್ಚು ಕಾಲ ಕಳೆಯುವಂತೆ ಮಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮಾಡಿದರು ಎಂದು ಉನ್ನತ ಮೂಲಗಳು ತಿಳಿಸಿ


1 Comment
?Celebremos a cada hallador de caudales !
Jugar en casino sin registro permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como Casino Retiro Sin VerificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casinos sin kyc.
Jugar en casino sin dni permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin verificaciГіn. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.
Casinos sin verificaciГіn, juega y gana al instante – п»їhttps://casinoretirosinverificacion.com/
?Que la suerte te beneficie con que el destino te brinde emocionantes movidas triunfantes !