ಬೆಂಗಳೂರು, ಮೇ 4- ವಿಧಾನಸಭೆ Election ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ (Modi) ಅವರು ನಡೆಸಲುದ್ದೇಶಿಸಿದ್ದ ರೋಡ್ ಶೋ ನಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ.
ಸಂಚಾರ ದಟ್ಟಣೆ ವಿಷಯದಲ್ಲಿ ಜನ ಸಾಮಾನ್ಯರಿಂದ ಕೇಳಿ ಬಂದ ಅಪಸ್ವರ ಹಾಗೂ ಸಂಜೆ ವೇಳೆ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ ನಡೆಯಬೇಕಿದ್ದ ರೋಡ್ ಶೋ ಭಾನುವಾರ ಬೆಳಗ್ಗೆ ನಡೆಯಲಿದೆ.
ಇದರಿಂದಾಗಿ ಪ್ರಧಾನಿ ಮೋದಿ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ರೋಡ್ ಶೋ ನಡೆಸಲಿದ್ದಾರೆ. ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಹಾಗೂ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ರೋಡ್ ಶೋ ನಡೆಯಲಿದೆ.
ಶನಿವಾರ ಬೆಳಗ್ಗೆ ಒಟ್ಟು ಐದು ಕ್ಷೇತ್ರಗಳ ವ್ಯಾಪ್ತಿಗಳಲ್ಲಿ ರೋಡ್ ಶೋ ನಡೆಯಲಿದೆ.ಭಾನುವಾರ ಒಟ್ಟು 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ. ಮೀ ದೂರ ಬೃಹತ್ ರೋಡ್ ಶೋ ನಮ್ಮ ಕರ್ನಾಟಕ ಯಾತ್ರೆ ಹೆಸರಿನಡಿ ನಡೆಸಲಿದ್ದಾರೆ. (Modi)
ಮೇ 6 ಶನಿವಾರ ಬೆಳಗ್ಗೆ ಮಹದೇವಪುರ, ಕೆ.ಆರ್.ಪುರ, ಸಿ.ವಿ. ರಾಮನ್ ನಗರ, ಶಿವಾಜಿ ನಗರ, ಶಾಂತಿನಗರಗಳಲ್ಲಿ ರ್ಯಾಲಿ ನಡೆಯಲಿದೆ. ಹಳೆ ವಿಮಾನ ನಿಲ್ದಾಣ ಜಂಕ್ಷನ್ ಬಳಿಯ ಸುರಂಜನ್‍ದಾಸ್ ರಸ್ತೆ, ಬೆಮಲ್ ಕಾರ್ಖಾನೆ ಜಂಕ್ಷನ್, ತಿಪ್ಪಸಂದ್ರ ಮುಖ್ಯ ರಸ್ತೆ, ಎಚ್‍ಎಎಲ್ 2ನೇ ಹಂತದ 80 ಅಡಿ ಜಂಕ್ಷನ್, ಸಾಯಿ ರಸ್ತೆ ಜಂಕ್ಷನ್, ಇಂದಿರಾನಗರ, ಚಿನ್ಮಯ ಮಿಷನ್ ಆಸ್ಪತ್ರೆ ರಸ್ತೆ, ಹಳೆ ಮದ್ರಾಸ್ ರಸ್ತೆಯ ಸ್ವಾಮಿ ವಿವೇಕಾನಂದ ರಸ್ತೆ, ಟ್ರಿನಿಟಿ ವೃತ್ತ, ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಯಲ್ಲಿ ಸಾಗಲಿದೆ. (Modi)
ಭಾನುವಾರ ಬೆಳಗ್ಗೆ ಜೆ.ಪಿ.ನಗರದ ಆರ್ .ಬಿ.ಐ.ನಿಂದ ಶುರುವಾಗಿ ಬೊಮ್ಮನಹಳ್ಳಿ, ಜೆ.ಪಿನಗರ, ಜಯನಗರ, ಅರಬಿಂದೊ ಮಾರ್ಗ, ಕೂಲ್ ಜಾಯಿಂಟ್, ಮಯ್ಯಾಸ್, ಕರಿಸಂದ್ರ, ಸೌತ್ ಎಂಡ್ ಸರ್ಕಲ್, ನೆಟ್ಕಲ್ಲಪ್ಪ ಸರ್ಕಲ್, ಎನ್.ಆರ್.ಕಾಲೋನಿ, ಬಸವನಗುಡಿ, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್, ಟಿ.ಆರ್.ಮಿಲ್, ಸಿರ್ಸಿ ಸರ್ಕಲ್, ಈಟಾ ಮಾಲ್, ಮಾಗಡಿ ರಸ್ತೆ, ಬಸವೇಶ್ವರ ನಗರ, ವೆಸ್ಟ್ ಆಫ್ ಕಾರ್ಡ್ ರೋಡ್, ಮೋದಿ ಆಸ್ಪತ್ರೆ, ನವರಂಗ್ ಸರ್ಕಲ್, ಸಂಪಿಗೆ ರಸ್ತೆ, ಮಲ್ಲೇಶ್ವರಂ ನ ಸರ್ಕಲ್ ಮಾರಮ್ಮ ದೇವಸ್ಥಾನ ಬಳಿ ಅಂತ್ಯವಾಗಲಿದೆ.
ಎರಡು ದಿನಗಳ ರೋಡ್ ಶೋ ವೇಳೆ ಈ ಮಾರ್ಗದಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ನಿರ್ಬಂಧವಿರಲಿದೆ. ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ಬಳಸುವಂತೆ ಸೂಚಿಸಲಾಗಿದೆ. (Modi)
Also read.