Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ DG&IG ಯಾರಾಗಲಿದ್ದಾರೆ ಗೊತ್ತಾ?
    Bengaluru

    ರಾಜ್ಯದ DG&IG ಯಾರಾಗಲಿದ್ದಾರೆ ಗೊತ್ತಾ?

    vartha chakraBy vartha chakraMay 15, 2023Updated:May 15, 202329 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.15- ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿ-ಐಜಿಪಿ) ಪ್ರವೀಣ್ ಸೂದ್  ಅವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಹಾಲಿ ಸಿಬಿಐ ನಿರ್ದೇಶಕರಾಗಿರುವ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಇದೇ ಮೇ. 25 ರಂದು ಮುಗಿಯಲಿದೆ. ಈ ಹಿನ್ನೆಲೆಯಲ್ಲಿ 1986ನೇ ಬ್ಯಾಚ್‌ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಸಿಬಿಐ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
    ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿರುವ ಪ್ರವೀಣ್ ಸೂದ್ ಅವರ ಅಧಿಕಾರಾವಧಿ ಇನ್ನೂ ಒಂದು ವರ್ಷ ಇತ್ತು. ಈಗ ಅವರು ಸಿಬಿಐ ಮುಖ್ಯಸ್ಥರಾಗಿ ನೇಮಕಗೊಂಡಿದ್ದು, ರಾಜ್ಯಕ್ಕೆ ಹೊಸ ಪೊಲೀಸ್ ಮಹಾ ನಿರ್ದೇಶಕರ ನೇಮಕವಾಗಬೇಕಾಗಿದ್ದು ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳಲ್ಲಿ ಪೈಪೋಟಿ ಎದುರಾಗಿದೆ.
    ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್‌ ಮೋಹನ್‌, ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್‌, ನೇಮಕಾತಿ ವಿಭಾಗದ ಡಿಜಿಪಿ ಕಮಲ್‌ಪಂತ್‌, ನಗರ ಪೊಲೀಸ್‌ ಆಯುಕ್ತ ಸಿ.ಎಚ್‌. ಪ್ರತಾಪ್‌ರೆಡ್ಡಿ ಹೆಸರು ಕೇಳಿಬಂದಿವೆ.
    ಪ್ರವೀಣ್‌ ಸೂದ್‌ ಮೇ 25ರೊಳಗೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ನಡುವೆ ಅವಧಿಯಲ್ಲಿಯೇ ನೂತನ ಸರಕಾರ ಸೂದ್‌ ಅವರ ಸ್ಥಾನಕ್ಕೆ ಮತ್ತೊಬ್ಬ ಅಧಿಕಾರಿಯನ್ನು ನೇಮಕಗೊಳಿಸಬೇಕಿದೆ. ಹೀಗಾಗಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಯಾರನ್ನು ನೇಮಕ ಮಾಡಲಿದೆ ಎನ್ನುವುದು ಸದ್ಯದ ಕುತೂಹಲವಾಗಿದೆ.
    ಸೇವಾ ಜೇಷ್ಠತೆ ಆಧಾರದಲ್ಲಿ ಡಾ. ಅಲೋಕ್‌ ಮೋಹನ್‌ ಹಾಗೂ ಪ್ರಾಮಾಣಿಕತೆ ,ದಕ್ಷತೆ ಆಧಾರದಲ್ಲಿ ಕಮಲ್ ಪಂತ್ ಅವರಲ್ಲಿ ಒಬ್ಬರನ್ನು ಸರ್ಕಾರ  ಡಿಜಿ-ಐಜಿ ಹುದ್ದೆಗೆ ಪರಿಗಣಿಸುವ ಸಾಧ್ಯತೆಗಳು ಹೆಚ್ಚಾಗಿವೆ.
    ಹಲವು ವಿವಾದಗಳಲ್ಲಿ ಸಿಲುಕಿರುವ ರವೀಂದ್ರನಾಥ್‌, ಇತ್ತೀಚೆಗಷ್ಟೇ ಡಿಜಿಪಿ ಹುದ್ದೆಗೆ ಬಡ್ತಿ ಪಡೆದಿರುವ ಪ್ರತಾಪ್‌ರೆಡ್ಡಿ, ಪ್ರಶಾಂತ್ ಕುಮಾರ್ ಠಾಕೂರ್  ಅವರ ನೇಮಕದ ಸಾಧ್ಯತೆ ಕಡಿಮೆ.
    ಐವರು ಅಧಿಕಾರಿಗಳ ಸೇವಾ ಜೇಷ್ಠತೆ, ಕಾರ್ಯವೈಖರಿ, ಸೇವಾ ಅನುಭವ ಆಧರಿಸಿ ಒಬ್ಬರ ಹೆಸರನ್ನು ನೂತನ ಸರ್ಕಾರ ಅಂತಿಮಗೊಳಿಸಲಿದೆ.
    ಅಲೋಕ್‌ ಮೋಹನ್‌ ಹಿನ್ನಲೆ:
    ,ಬಿಹಾರ ಮೂಲದ ಡಾ. ಅಲೋಕ್‌ ಮೋಹನ್‌, 1987ನೇ ಬ್ಯಾಚ್‌ನ ರಾಜ್ಯ ಕೇಡರ್‌ ಐಪಿಎಸ್‌ ಅಧಿಕಾರಿ. 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ಅವರು, ಹಾಲಿ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದಾರೆ.
    ಈ ಹಿಂದೆ ಕಾರಾಗೃಹ ಇಲಾಖೆ ಡಿಜಿಪಿ, ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಲಿ ತರಬೇತಿ ವಿಭಾಗದ ಡಿಜಿಪಿಯಾಗಿದ್ದಾರೆ. ಈ ವರ್ಷ ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದು, ಅಲೋಕ್‌ ಮೋಹನ್‌ ನಂತರದ ಸ್ಥಾನದಲ್ಲಿ ಡಿಜಿ-ಐಜಿ ಹುದ್ದೆಯ ರೇಸ್‌ನಲ್ಲಿದ್ದಾರೆ.
    ಎಡಿಜಿಪಿ ತರಬೇತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬರುವ ಸೆಪ್ಟೆಂಬರ್ ಗೆ ನಿವೃತ್ತರಾಗುವ ಹಾಗೂ ಸೇವಾವಧಿಯಲ್ಲಿ ಹಲವು ವಿವಾದಗಳಿಗೆ ಎಡೆಮಾಡಿಕೊಟ್ಟಿರುವ  ರವೀಂದ್ರನಾಥ್ ಅವರನ್ನು ಡಿಜಿ-ಐಜಿಪಿ ಹುದ್ದೆಗೆ ನೇಮಕ‌ ಮಾಡುವ ಸಾಧ್ಯತೆ ಕಡಿಮೆ.
    ಕಮಲ್‌ ಪಂಥ್‌ ಅವರು ಹಿಂದೆ ನಗರ ಪೊಲೀಸ್‌ ಆಯುಕ್ತರಾಗಿದ್ದು ಹಾಲಿ ತರಬೇತಿ ನೇಮಕಾತಿ ವಿಭಾಗದ ಡಿಜಿಪಿಯಾಗಿದ್ದಾರೆ.
    ನಗರ ಪೊಲೀಸ್‌ ಆಯುಕ್ತ ಸಿ.ಎಚ್‌. ಪ್ರತಾಪ್‌ರೆಡ್ಡಿ ಕೂಡ ಡಿಜಿ-ಐಜಿ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.
    2020ರಲ್ಲಿ ಭಾಸ್ಕರ್‌ ರಾವ್‌ ಅವರನ್ನು ವರ್ಗಾವಣೆ ಮಾಡಿ ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ 1990ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿರುವ ಕಮಲ್ ಪಂಥ್ ಅವರನ್ನು ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಸದ್ಯ ಕಮಲ್  ಪಂಥ್ ಎಡಿಜಿಪಿ ಸಿಐಡಿ ನೇಮಕಾತಿ ವಿಭಾಗದಲ್ಲಿದ್ದಾರೆ.
    ಒಟ್ಟಿನಲ್ಲಿ ಈ ನಾಲ್ವರಲ್ಲಿ ಯಾರು ಕರ್ನಾಟಕ ಮಹಾ ಪೊಲೀಸ್ ನಿರ್ದೇಶಕರಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಶ್ರಮಜೀವಿಗಳಿಗೆ ಮಂತ್ರಿಮಂಡಲದಲ್ಲಿ ಸ್ಥಾನ
    Next Article ಪರಮೇಶ್ವರ್ ಆಗುತ್ತಾರಂತೆ CM!
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • LeonardReawn on ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.