ಬೆಂಗಳೂರು, ಮೇ.26- ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಆಧಾರದಲ್ಲಿ ದ್ವೇಷದ ಮನೋಭಾವನೆಯನ್ನು ಬಿತ್ತುತ್ತ ಶಾಂತಿ ಗೆ ಧಕ್ಕೆ ತರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯಾಗಲಿ ಅದು RSS ಆದರೂ ಕೂಡ ಅದನ್ನು ನಿಷೇಧಿಸಲಾಗುವುದು ಎಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ರಾಜ್ಯದಲ್ಲಿ ವಿವಾದವನ್ನು ಸೃಷ್ಟಿಸಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದು ಆರ್ ಎಸ್ ಎಸ್ ನಿಷೇಧಿಸಿದರೆ ದೇಶದಲ್ಲಿ ಕಾಂಗ್ರೆಸ್ ಇರುವುದಿಲ್ಲ ಎಂದು ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದಷಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾನು ಸವಾಲು ಹಾಕುತ್ತೇನೆ, ಆರ್ ಎಸ್ ಎಸ್ ಅನ್ನು ನಿಷೇಧಿಸಲಿ ನೋಡೋಣ ಎಂದು ಹೇಳಿದರು
ಯಾವುದೇ ಸಂಘ-ಸಂಸ್ಥೆಯನ್ನು ನಿಷೇಧ ಮಾಡುವ ಅಧಿಕಾರ ಇವರಿಗಿಲ್ಲ. ಒಂದು ಸಮುದಾಯದ ತುಷ್ಟೀಕರಣಕ್ಕೆ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ನಿಷೇಧ ಬಗ್ಗೆ ಸಿಎಂ ನಿಲುವು ಸ್ಪಷ್ಪಪಡಿಸಲಿ. ಸಚಿವರ ಹೇಳಿಕೆಗೆ ಸಿಎಂ ಬೆಂಬಲ ಇದೆಯಾ ಅಂತ ಜನರಿಗೆ ತಿಳಿಸಲಿ ಎಂದು ಆಗ್ರಹಿಸಿದ ಅವರುಆರ್ಎಸ್ಎಸ್ ನಿಷೇಧ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು
ಮಾಜಿ ಸಚಿವ ಆರ್ ಅಶೋಕ್ ಮಾತನಾಡಿ,
ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್‌ನ್ನು ನಿಷೇಧ ಮಾಡುವುದಾಗಿ ಹೇಳುತ್ತಿದ್ದಾರೆ. ತಾಕತ್ತಿದ್ದರೆ, ಧಂ ಇದ್ದರೆ ಆರ್‌ಎಸ್‌ಎಸ್‌ನ್ನು ನಿಷೇಧ ಮಾಡಲಿ ಆರ್‌ಎಸ್‌ಎಸ್‌ನ್ನು ನಿಷೇಧ ಮಾಡಿದರೆ ಮೂರು ತಿಂಗಳು ಈ ಸರ್ಕಾರ ಅಧಿಕಾರದಲ್ಲಿರಲ್ಲ ಎಂದು ಗುಡುಗಿದರು.
ಕಾಂಗ್ರೆಸ್ ನಾಯಕರಾದ ರಾಹುಲ್‌ಗಾಂಧಿ ಅವರ ಅಜ್ಜಿ, ಮುತ್ತಾತ ಅವರ ಕೈಯಿಂದಲೇ ಆರ್‌ಎಸ್‌ಎಸ್‌ನ್ನು ಬ್ಯಾನ್ ಮಾಡಲು ಆಗಲಿಲ್ಲ. ಈಗ ಮಾಡಲು ಆಗುತ್ತಿದೆಯೇ, ಆರ್‌ಎಸ್‌ಎಸ್ ಒಂದು ದೇಶಭಕ್ತ ಸಂಘಟನೆ, ರಾಷ್ಟ್ರಪತಿಗಳು, ಪ್ರಧಾನಿಗಳು, ಕೇಂದ್ರ ಗೃಹ ಸಚಿವರು ಎಲ್ಲರೂ ಆರ್‌ಎಸ್‌ಎಸ್‌ನವರೇ ಎಂದು ಆರ್. ಅಶೋಕ್ ಹೇಳಿದರು.
ಬಿಜೆಪಿ ನಾಯಕರ ಈ ಸರಣಿ ಹೇಳಿಕೆ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಭಾರತದಲ್ಲಿ ಆರ್ ಎಸ್ ಎಸ್ಎಂಬ ವಿಚ್ಛಿದ್ರಕಾರಿ ಸಂಘಟನೆ ಈಗಾಗಲೇ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಕಾಂಗ್ರೆಸ್ ಆಗಲೂ ಇತ್ತು, ಈಗಲೂ ಇದೆ, ಮುಂದೆಯೂ ಇರಲಿದೆ ಎಂದು ತಿರುಗೇಟು ನೀಡಿದೆ. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂದಿದ್ದರು. ಸರ್ಕಾರಿ ಹಾಗೂ ಅನುದಾನಿತ ಶಾಲಾ ಆವರಣದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ಹೇಳಿದೆ.
Previous Articleಯಾರೂ ಕರೆಂಟ್ ಬಿಲ್ ಕಟ್ಟಬೇಡಿ!
Next Article Phoneಗಾಗಿ Dam ನೀರು ಖಾಲಿ ಮಾಡಿದ ಭೂಪ