ಬೆಂಗಳೂರು,ಜು.1- ವಿಧಾನಸಭೆ Election ಸೋಲಿನಿಂದ ತತ್ತರಿಸಿರುವ ಬಿಜೆಪಿ ಇನ್ನೂ ಆಘಾತದಿಂದ ಚೇತರಿಸಿಕೊಂಡಿಲ್ಲ ಪಕ್ಷವನ್ನು ಮುನ್ನಡೆಸಲು ಪ್ರತಿಪಕ್ಷ ನಾಯಕನ ಆಯ್ಕೆ ಸೇರಿದಂತೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.
ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು ಪೂರ್ಣಗೊಳಿಸಿ ಬಜೆಟ್ ಮಂಡಿಸಲು ಅಣಿಯಾಗುತ್ತಿದೆ ಹೀಗಿದ್ದರೂ ವಿಧಾನ ಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಪ್ರತಿಪಕ್ಷವನ್ನು ಮುನ್ನಡೆಸಲು ಸೂಕ್ತ ಸಾರಥಿ ನೇಮಕಕ್ಕೆ ಬಿಜೆಪಿಯಿಂದ ಸಾಧ್ಯವಾಗಿಲ್ಲ.
ಪ್ರತಿಪಕ್ಷ ನಾಯಕನ ಆಯ್ಕೆಯ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಪಕ್ಷದ ರಾಷ್ಟ್ರ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣಗಳ ನಡುವಿನ ಆಂತರಿಕ ಸಂಘರ್ಷ ತಾರಕಕ್ಕೇರಿದೆ ಇದು ಪಕ್ಷದ ವಿದ್ಯಮಾನಗಳ ಮೇಲೆ ಪರಿಣಾಮ ಬೀರಿದ್ದು ಯಾವುದೇ ನೇಮಕಗಳು ಸಾಧ್ಯವಾಗುತ್ತಿಲ್ಲ.
ಈ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’ ಎಂದು ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಹಂಚಿಕೊಂಡಿದೆ.
ಈ ಮೂಲಕ ವಿಧಾನಸಭೆ ಚುನಾವಣೆ ನಡೆದು ಇದುವರೆಗೆ ಬಿಜೆಪಿ ವಿರೋಧಪಕ್ಷದ ನಾಯಕನನ್ನು ನೇಮಿಸದಿದ್ದಕ್ಕೆ ವ್ಯಂಗ್ಯವಾಡಿದೆ.
ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ, ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಬರೆದುಕೊಂಡಿದೆ.
Previous Articleರಾಜ್ಯ BJPಗೆ ದಾರಿ ತೋರಿಸುವರಾರು?
Next Article ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು
3 Comments
наркологическая помощь москва skoraya-narkologicheskaya-pomoshch11.ru .
малый бизнес примеры малый бизнес примеры .
instagram tagged viewer [url=https://www.anonstoriesview.com]https://www.anonstoriesview.com[/url] .