Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕಿತ ಉಗ್ರ ಜುನೈದ್ ಸಹಚರ Arrested | Junaid
    Viral

    ಶಂಕಿತ ಉಗ್ರ ಜುನೈದ್ ಸಹಚರ Arrested | Junaid

    vartha chakraBy vartha chakraAugust 29, 2023Updated:August 29, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.29 – ರಾಜ್ಯ- ಹೊರರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣದ ತಲೆಮರೆಸಿಕೊಂಡಿರುವ ಎರಡನೇ ಆರೋಪಿ‌ ಜುನೈದ್ ​​ಸಹಚರನನ್ನು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಆರ್​ಟಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
    ಜುನೈದ್ ​​(Junaid) ಸಹಚರ ಕುಖ್ಯಾತ ರೌಡಿ ಮೊಹಮ್ಮದ್ ಅರ್ಷದ್ ಖಾನ್‌ ಬಂಧಿತ ಆರೋಪಿಯಾಗಿದ್ದು, ಆತನನ್ನು ತೀವ್ರ ವಿಚಾರಣೆ ನಡೆಸಿ‌ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

    ಬಂಧಿತ ಅರ್ಷದ್ ಖಾನ್‌ ಶಂಕಿತ ಉಗ್ರ ಜುನೈದ್ ಅಹ್ಮದ್‌ನ ಸಹಚರನ ಅಲ್ಲದೇ ಆಪ್ತ ಸ್ನೇಹಿತನಾಗಿದ್ದು,ರಾಜ್ಯದಲ್ಲಿ ಭಯೋತ್ಪಾದನಾ ಘಟಕವನ್ನು ಸಕ್ರಿಯಗೊಳಿಸಿರುವ ಶಂಕೆ ವ್ಯಕ್ತವಾಗಿದೆ.
    ಸೆರೆಸಿಕ್ಕಿರುವ ಮೊಹಮ್ಮದ್ ಅರ್ಷದ್ ಖಾನ್ 2017 ರಲ್ಲಿ ನೂರ್ ಅಹಮ್ಮದ್ ಎಂಬಾತನ ಅಪಹರಿಸಿ ಕೊಲೆಗೈದ ಪ್ರಕಣದ ಆರೋಪಿಯಾಗಿ ನಾಲ್ಕು ವರ್ಷದಿಂದ ತಲೆ ಕರೆಸಿಕೊಂಡು ಓಡಾಡುತ್ತಿದ್ದ ವೇಳೆ ಜುನೈದ್ ನ ಸಂಪರ್ಕಕ್ಕೆ ಬಂದು ಸಾಕಷ್ಟು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದನು.
    ಖಚಿತವಾದ ಮಾಹಿತಿಯನ್ನು ‌ಆಧರಿಸಿ ಎರಡು ದಿನಗಳ ಹಿಂದೆ ಆರ್‌ಟಿ ನಗರದ ಮನೆಯೊಂದರ ಮೇಲೆ ದಾಳಿ ನಡೆಸಿದಾಗ ಅರ್ಷದ್ ಖಾನ್ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

    ಕೂಡಲೇ ಪೊಲೀಸರು ಆತನನ್ನು ಸಮಾಧಾನಪಡಿಸಲು ಮುಂದಾದರೂ ಚಾಕುವನ್ನು ಎಸೆದು ತಪ್ಪಿಸಿಕೊಳ್ಳಲು ಎರಡನೇ ಅಂತಸ್ತಿನ ಮನೆಯಿಂದ ಜಿಗಿದಿದ್ದಾನೆ. ಎಚ್ಚೆತ್ತ ಪೊಲೀಸರು ಆತನನ್ನು ಬಂಧಿಸಿದ್ದು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ. 2017ರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ನೂರ್ ಅಹ್ಮದ್ ಕೊಲೆ ಪ್ರಕರಣದಲ್ಲಿ ಅರ್ಷದ್ ಖಾನ್ ಭಾಗಿಯಾಗಿದ್ದ. ಐವರು ಶಂಕಿತ ಭಯೋತ್ಪಾದಕರು ಮತ್ತು ಜುನೈದ್ ಕೂಡ ಅದೇ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು.
    ಕೊಲೆ ಪ್ರಕರಣದ ಆರೋಪ ಹೊತ್ತಾಗ ಅರ್ಷದ್ ಖಾನ್ 17 ವರ್ಷದ ಯುವಕನಾಗಿದ್ದು ಜಾಮೀನಿನ ಮೇಲೆ ಹೊರಬಂದ ನಂತರ ಕೊಲೆ ಯತ್ನ, ದರೋಡೆ ಮುಂತಾದ ಹಲವಾರು ಅಪರಾಧಗಳನ್ನು ಎಸಗಿದ್ದಾನೆ. ಈತನ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 17 ಪ್ರಕರಣಗಳು ಬಾಕಿ ಇವೆ.

    ಜುನೈದ್ ಸಂಪರ್ಕ:

    ಜುನೈದ್ ಸಕ್ರಿಯಗೊಳಿಸಿದ ಭಯೋತ್ಪಾದನಾ ಘಟಕದಲ್ಲಿ ಅರ್ಷದ್ ಖಾನ್ ಪಾತ್ರ ಇನ್ನೂ ಸ್ಪಷ್ಟವಾಗಿಲ್ಲ. ಅರ್ಷದ್ ಖಾನ್ ಜುನೈದ್ ಜೊತೆ ಸಂಪರ್ಕದಲ್ಲಿದ್ದುದ್ದರ ಬಗ್ಗೆ ಮಾಹಿತಿಯಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
    ಕುಖ್ಯಾತ ರೌಡಿಯಾಗಿದ್ದ ಜುನೈದ್ ಖಾನ್, 2008ರ ಬೆಂಗಳೂರು ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ಟಿ ನಜೀರ್ ಎಂಬಾತ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದಾಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬ್ರೈನ್ ವಾಶ್ ಮಾಡಿದ್ದ.
    ಭಯೋತ್ಪಾದನಾ ಘಟಕ:
    ಈತ ಇತರ ಐವರ ಜೊತೆ ಜಾಮೀನಿನ ಮೇಲೆ ಹೊರಬಂದ ನಂತರ ನಗರದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಭಯೋತ್ಪಾದನಾ ಘಟಕವನ್ನು ಸಕ್ರಿಯಗೊಳಿಸಿದ್ದ ಎನ್ನಲಾಗಿದೆ.
    ನಗರದಲ್ಲಿ ಇತ್ತೀಚೆಗಷ್ಟೇ ಸಿಸಿಬಿ‌ ಪೊಲೀಸರು ಐವರು ಶಂಕಿತ ಉಗ್ರರನ್ನು ಬಂಧಸಿದ್ದರು. ಈ ಐವರಿಗೆ ಶಂಕಿತ ಉಗ್ರ ಜುನೈದ್​​ ವಿದೇಶದಿಂದ ಐವರಿಗೆ ಗ್ರೆನೇಡ್​​ ಕಳಿಸಿದ್ದನು. ಸದ್ಯ ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.
    ಆರೋಪಿ ಜುನೈದ್ ಅಹ್ಮದ್ ಪತ್ತೆಗೆ ಸಿಸಿಬಿ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿ ಪತ್ತೆ ಕಾರ್ಯ ತೀವ್ರಗೊಳಿಸಲಾಗಿದೆ ಎಂದು ಜಂಟಿ‌ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.

    Verbattle
    Verbattle
    Verbattle
    arrest Bangalore Bengaluru ED junaid terror plot ಉಗ್ರ ಕೊಲೆ ಭಯೋತ್ಪಾದಕರು
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದ ವಿರುದ್ಧ BJP Charge Sheet | Karnataka BJP
    Next Article ಎಲ್ಲೂ ಹೋಗೋಲ್ಲಾ… ನಾನು ಎಲ್ಲೂ ಹೋಗೋಲ್ಲಾ | Karnataka News
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • 777bet_asen on ಬೆಂಗಳೂರು PG ಗಳಿಗೆ ಮೂಗುದಾರ | BBMP
    • Tracymix on ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.