ಬೆಂಗಳೂರು, ಸೆ.1 – ಅಕ್ರಮವಾಗಿ ಚಲಿಸುತ್ತಿರುವ ರ‍್ಯಾಪಿಡೊ ಬೈಕ್‌ಟ್ಯಾಕ್ಸಿಗಳನ್ನು ನಿಷೇಧಿಸಬೇಕು. ಎಲೆಕ್ಟ್ರಿಕ್ ಆಟೊರಿಕ್ಷಾಗಳಿಗೆ ರಹದಾರಿ ನೀಡಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ,ಸೆಪ್ಟೆಂಬರ್ 11ರಂದು ಬೆಂಗಳೂರಿನಲ್ಲಿ ಸಾರಿಗೆ ಬಂದ್ ಮಾಡಲು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ನಿರ್ಧರಿಸಿದೆ.
ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್ ನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿರುವ ಶಕ್ತಿ ಯೋಜನೆ ವಿರೋಧಿಸಿ ಕಳೆದ ಜುಲೈ 27ರಂದು ಬಂದ್ ನಡೆಸಲು ಕರೆ ನೀಡಲಾಗಿತ್ತು.
ಈ ವೇಳೆ ಸಾರಿಗೆ ಮಂತ್ರಿಗಳು ಸಭೆ ಕರೆದಿದ್ದರು, ಸಭೆಯಲ್ಲಿ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು. ಇಲ್ಲವೇ ರಸ್ತೆ ತೆರಿಗೆಯನ್ನು ಸಂಪೂರ್ಣ ರದ್ದು ಮಾಡಬೇಕು ಎಂಬ ಬೇಡಿಕೆಯೂ ಸೇರಿದಂತೆ 30 ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಅದರಲ್ಲಿ 28 ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಾರಿಗೆ ಸಚಿವರು ಭರವಸೆ ನೀಡಿದ್ದರು.ಹಾಗಾಗಿ ಬಂದ್ ಕರೆ ವಾಪಸ್ ಪಡೆಯಲಾಗಿತ್ತು.
ಆದರೆ ಸಾರಿಗೆ ಸಚಿವ ರಾಮಾಲಿಂಗಾರೆಡ್ಡಿ ಅವರು ಇಲ್ಲಿಯವರೆಗೆ ಬೇಡಿಕೆ ಈಡೇರಿಸಿಲ್ಲ ಈ ಬಗ್ಗೆ ಯಾವುದೇ ಭ್ರಷ್ಟರಾಗಿ ನಮಗೆ ದ್ರೋಹ ಬಗೆದಿದ್ದಾರೆ. ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ. ಅದನ್ನು ಖಂಡಿಸಿ, ನಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೆ.11ರಂದು ಬೆಂಗಳೂರಿನಲ್ಲಿ ಸಾರಿಗೆ ಬಂದ್ ಮಾಡಲಾಗುವುದು’ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಎಸ್. ನಟರಾಜ್ ಶರ್ಮ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಟೊ, ಟ್ಯಾಕ್ಸಿ, ಏರ್‌ಪೋರ್ಟ್ ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್, ಕಾರ್ಪೊರೇಟ್ ವಾಹನಗಳು, ಸ್ಕೂಲ್ ಬಸ್, ಫ್ಯಾಕ್ಟ್ರಿ ಬಸ್, ಸ್ಟೇಜ್ ಕ್ಯಾರೇಜ್ ಬಸ್ ಚಾಲಕರ ಸಂಘಗಳು ಸೇರಿದಂತೆ 32 ಸಂಘಟನೆಗಳು ಸೇರಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. .10ರ ರಾತ್ರಿ 12ರಿಂದ ಸೆ.11ರ ರಾತ್ರಿ 12ರವರೆಗೆ ಮುಷ್ಕರ ಇರಲಿದೆ ಎಂದು ಮಾಹಿತಿ ನೀಡಿದರು

3 Comments
mcluck Montana online casino McLuck mcluck Florida
The candy chaos never stops in Sweet Bonanza — tumble after tumble builds massive win potential. Multipliers sweet bonanza strategy stack up fast during the bonus round for truly epic payouts. Spin and savor the victory!
Embark on a prairie quest for unimaginable wealth. mega power buffalo triggers massive free spin chains and major/minor jackpots with every sunset scatter. Play and prosper!