ಬೆಂಗಳೂರು, ಸೆ. 16 – ರಾಜ್ಯದಲ್ಲಿ ಮಳೆ ಅಭಾವದಿಂದ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಇದನ್ನು ಸರಿದೂಗಿಸಲು ಹೆಚ್ಚಿನ ವಿದ್ಯುತ್ ಉತ್ಪಾದನೆಗೆ ಅಗತ್ಯವಿರುವ ಯೋಜನೆ ಗಳನ್ನು ರೂಪಿಸಲಾಗುತ್ತಿದೆ
ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.
ಸರ್ ಎಂ.ವಿಶ್ವೇಶ್ವರಯ್ಯ ಅವರ 163ನೇ ಜನ್ಮದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನದ ಪ್ರಯುಕ್ತ ಕರ್ನಾಟಕ ವಿದ್ಯುತ್ ಮಂಡಳಿ ಇಂಜಿನಿಯರುಗಳ ಸಂಘದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾನತಾಡಿದ ಅವರು
ಮಳೆ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಇದೆ.ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಜಲವಿದ್ಯುತ್ ಉತ್ಪಾದನೆ ಕಷ್ಟ ಹೀಗಾಗಿ ನವೀಕರಿಸ ಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ಈ ಹಿನ್ನಲೆಯಲ್ಲಿ ಸೋಲಾರ್ ಮತ್ತು ವಿಂಡ್ ಎನರ್ಜಿಯ ಮೂಲಕ ವಿದ್ಯುತ್ ಉತ್ಪಾದನೆಗೆ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಸೋಲಾರ್ ಮತ್ತು ವಿಂಡ್ ಎನರ್ಜಿ ಉಪಯೋಗಿಸಿಕೋಂಡರೆ ಇನ್ನೂ ಉತ್ಪಾದನೆ ಆಗುತ್ತದೆ ಎಂದರು.
ಸಬ್ ಸ್ಟೇಷನ್ ಗಳ ಪಕ್ಕದಲ್ಲಿ ಸೋಲಾರ್ ಎನರ್ಜಿ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ಯೋಜನೆಗಳು ಪ್ರಾರಂಭವಾಗಿವೆ. 2500 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆಗಳನ್ನು ಸಚಿವ ಸಂಪುಟ ಸಭೆಗೆ ತರಲು ಸಿದ್ದವಾಗಿದೆ. ಈ ಎಲ್ಲಾ ಯೋಜನೆಗಳನ್ನು ಪ್ರಾರಂಭಿಸಿದರೆ ಮುಂದಿನ ವಿದ್ಯುತ್ ಬೇಡಿಕೆಗೆ ಸಜಾ್ಜಗಲಿದ್ದೇವೆ ಎಂದರು.
ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳು ಇದ್ದಾರೆ. ಇದರಿಂದಾಗಿ ಇಲಾಖೆಯ ಮೂಲಕ ಬಹಳಷ್ಟು ಒಳ್ಳೆಯ ಕೆಲಸಗಳನ್ನು ಮಾಡಲಾಗುತ್ತಿದೆ. ಈ ಬಾರಿ ಅತ್ಯುತ್ತಮ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಮಳೆಯ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಕೋವಿಡ್ ಇದ್ದ ಕಾರಣ ವಿದ್ಯುತ್ಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಈಗ ಆರ್ಥಿಕ ಚಟುವಟಿಕೆ ಗರಿಗೆದರಿದ್ದು, ವಿದ್ಯುತ್ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದರು.