ಬೆಂಗಳೂರು, ಸೆ.30- ಸಾಹಿತಿಗಳು, ವಿಚಾರವಾದಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿ ಸಿಕ್ಕಿ ಬಿದ್ದ ಬೆನ್ನಲ್ಲೇ ಒರ್ವ ಮಠಾಧೀಶ ಹಾಗೂ ಮೂವರು ಮಂತ್ರಿಗಳಿಗೆ ಬೆದರಿಕೆ ಪತ್ರ ಬಂದಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಶ್ರೀ ಗಳಿಗೆ ಬೆದರಿಕೆ ಪತ್ರ ಬಂದಿದೆ.
ಈ ಬಗ್ಗೆ ಮಾಹಿತಿ ಪಡೆದಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಎಲ್ಲರಿಗೂ ಭದ್ರತೆ ಹೆಚ್ಚಳಕ್ಕೆ ಆದೇಶಿಸಿದ್ದು ಬೆದರಿಕೆ ಪತ್ರದ ಮೂಲದ ಬಗ್ಗೆ ತ್ವರಿತ ತನಿಖೆಗೆ ಸೂಚಿಸಿದ್ದಾರೆ ಸಚಿವರಾದ ಸಚಿವ ಸತೀಶ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಅವರಿಗೆ ಬರೆದಿರುವ ಪತ್ರದಲ್ಲಿ ನೀವುಗಳು ಹಿಂದೂ ಧರ್ಮಕ್ಕೆ ಕಳಂಕ ನಿಮ್ಮಂತಹ ಧರ್ಮ ದ್ರೋಹಿಗಳು ಇರಬಾರದು ಶೀಘ್ರದಲ್ಲೇ ನಿಮ್ಮನ್ನು ಈ ಲೋಕದಿಂದ ದೂರ ಮಾಡುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆಮ ಕಳೆದ ತಿಂಗಳಷ್ಟೆ ಕಿತ್ತೂರು ತಾಲೂಕಿನ
ಬೈಲೂರು ನಿಷ್ಕಲ ಮಂಟಪದ ಶ್ರೀಗಳಿಗೆ ಜೀವ ಬೆದರಿಕೆ ಪತ್ರ ಬಂದಿದ್ದು,ಮತ್ತೆ ಸೆಪ್ಟಂಬರ್ 20 ರಂದು ಜೀವ ಬೆದರಿಕೆ ಪತ್ರ ಬಂದಿದೆ.
ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಅಂತಾದರೂ ತಿಳಿ, ಅಥವಾ ಸಾವಿನ ಪತ್ರವಂತಾದರೂ ತಿಳಿ, ನಾನು ನಿನ್ನ ಜತೆ ತಮಾಷೆ ಮಾಡುತ್ತಿಲ್ಲ, ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೇ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ. ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಹಿಂದೂ ಧರ್ಮ ದೇವತೆಗಳನ್ನು ನಿಂದಿಸುವ ನೀನು ರಾಕ್ಷಸನೇ ಸರಿ. ನಿನ್ನ ಜೀವನದ ಕೊನೆಯ ಘಟ್ಟದಲ್ಲಿ ನೀನು ನಿಂತಿದ್ದಿಯ. ನಿನ್ನ ಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲ. ನಿನ್ನಂಥ ದುಷ್ಟ ರಾಕ್ಷಸಿ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಹಲವು ವಿಚಾರವಾದಿಗಳು ಹಾಗೂ ಪ್ರಗತಿಪರರ ಹೆಸರು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದ ಸಾಹಿತಿಗಳಾದ ಎಸ್.ಜಿ. ಸಿದ್ದರಾಮಯ್ಯ, ಕೆ. ಮರುಳಸಿದ್ದಪ್ಪ, ಬರಗೂರು ರಾಮಚಂದ್ರಪ್ಪ, ಭಾಸ್ಕರ್ ಪ್ರಸಾದ್, ಪ್ರೋ.ಭಗವಾನ್, ಪ್ರೋ.ಮಹೇಶ್ ಚಂದ್ರ, ಬಿಟಿ ಲಲಿತಾನಾಯಕ್, ನಟ ಚೇತನ್, ನಟ ಪ್ರಕಾಶ ರಾಜ್, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ ದಿನೇಶ್ ಗುಂಡೂರಾವ್, ಧ್ವಾರಕಾನಾಥ, ದೇವನೂರು ಮಹದೇಪ್, ಬಿ.ಎಲ್. ವೇಣು ಅವರಿಗೆ ನೀವು ನಿಮ್ಮ ತಂದೆ ತಾಯಿಗಳಿಗೆ ಹುಟ್ಟಿದ್ದರೆ ಕೇಳುವ ಪ್ರಶ್ನೆಗೆ ಉತ್ತರ ಕೊಡಿ ಎಂದ ಅನಾಮಧೇಯ ವ್ಯಕ್ತಿಯೊಬ್ಬ ಪತ್ರದಲ್ಲಿ ಜೀವ ಬೆದರಿಕೆ ಹಾಕಿದ್ದಾನೆ.
ಮತಾಂಧ ಮುಸ್ಲಿಂಮರು, ಪಾಕಿಸ್ತಾನಿಗಳು, ಭಯೋತ್ಪಾದಕರು ಎಂದು ಹೇಳುವ ತಾಕತ್ತು ನಿಮ್ಮಲ್ಲಿದಿಯೇ?, ದೇಶದ ಒಳಗೆ ಇದ್ದುಕೊಂಡು ಪಾಕ್ ನಾಯಿಗಳು ಮಾಡುತ್ತಿರುವುದು ತಪ್ಪು ಎಂದು ಹೇಳುವ ಧೈರ್ಯ ನಿಮ್ಮಲ್ಲಿದೆಯೇ?. ಧೈರ್ಯವಿದ್ದರೆ ಹೇಳಿ ಇಲ್ಲವಾದರೆ ನಿಮ್ಮ ಕೊನೆಯ ದಿನಗಳನ್ನು ಎಣಿಸಿ ಎಂದ ಅನಾಮಿಕ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.