ಚಿತ್ರದುರ್ಗ, ಅ.11- ಕೋಟೆನಾಡು ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಯಾತ್ರೆ ವೇಳೆ ಗೋಡ್ಸೆ (Godse) ಚಿತ್ರ ಪ್ರದರ್ಶನ ಮಾಡಿರುವ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಳೆದ ಅಕ್ಟೋಬರ್ 8ರಂದು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಯಾತ್ರೆ ನಡೆಯಿತು.
ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಗೆ ಜನಸಾಗರವೇ ಹರಿದುಬಂದಿತ್ತು. ಶೋಭಾಯಾತ್ರೆಯ ವೇಳೆ ಯುವ ಸಮೂಹ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿತ್ತು.ಹಾಗೆಯೇ ಮೆರವಣಿಗೆಯಲ್ಲಿ ಕೆಲವರು ಸಾವರ್ಕರ್ ಚಿತ್ರ ಪ್ರದರ್ಶಿಸಿದರೆ, ಮತ್ತೆ ಕೆಲವರು ಕೋಮು ಘರ್ಷಣೆಯಲ್ಲಿ ಹತ್ಯೆಯಾದ ಶರತ್ ಮಡಿವಾಳ್ ಶಿವಮೊಗ್ಗದ ಮೃತ ಹರ್ಷನ ಭಾವಚಿತ್ರ ಪ್ರದರ್ಶಿಸಿದ್ದರು.ಇವುಗಳ ನಡುವೆ ನಾಥೂರಾಮ್ ಗೋಡ್ಸೆ ಭಾವಚಿತ್ರ ಹಿಡಿದ ಕೆಲವರು ಕುಣಿದು ಕುಪ್ಪಳಿಸಿದ್ದರು.ಇದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ. ಅದರಂತೆ ನಗರದ ಜೋಗಿಮಟ್ಟಿ ರಸ್ತೆ ನಿವಾಸಿ ಹನುಮಂತಪ್ಪ ಎಂಬುವರು ಪೊಲೀಸರಿಗೆ ದೂರು ನೀಡಿದ್ದಾರೆ.
ಶಾಂತಿ ಭಂಗ, ಕೋಮು ಸೌಹಾರ್ದತೆಗೆ ಧಕ್ಕೆ ತರಲು ಫೋಟೋ ಪ್ರದರ್ಶನ ಮಾಡಲಾಗಿದ್ದು, ಗೋಡ್ಸೆ ಚಿತ್ರ ಪ್ರದರ್ಶಿಸಿದವರ ಪತ್ತೆ ಮಾಡಿ ಕಾನೂನು ಕ್ರಮಕ್ಕೆ ಒತ್ತಾಯಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಈ ದೂರಿನ ಮೇರೆಗೆ ಐಪಿಸಿ ಕಲಂ 505/1(ಸಿ), 505/1(ಬಿ) ಅಡಿಯಲ್ಲಿ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
3 Comments
электрокарниз акция электрокарниз акция .
вывод из запоя стационарно ростов https://vyvod-iz-zapoya-rostov111.ru .
снятие ломки наркомана снятие ломки наркомана .