ಬೆಂಗಳೂರು, ಅ.20- ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಕೆ.ಪೂರ್ಣಿಮಾ ತಮ್ಮ ಪತಿ ಬಿಜೆಪಿ ಮುಖಂಡ ಶ್ರೀನಿವಾಸ್ ಸೇರಿದಂತೆ ಹಲವು ಪ್ರಮುಖರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಮುಂಬರುವ ಲೋಕಸಭಾ Electionಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಬಿಜೆಪಿ ಮತ್ತು ಜೆಡಿಎಸ್ ರಣ ತಂತ್ರ ರೂಪಿಸುತ್ತಿರುವಾಗಲೇ ಯಾದವ ಸಮುದಾಯದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೆಳೆದ ‘ಕೈ’ ಪಾಳೆಯ ರಾಜಕೀಯ ದಾಳ ಉರುಳಿಸುವಲ್ಲಿ ಯಶಸ್ವಿಯಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂರ್ಣಿಮಾ ಹಾಗೂ ಇತರರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಪಕ್ಷಕ್ಕೆ ಮರಳಿರುವ ಪೂರ್ಣಿಮಾ ಮತ್ತು ಶ್ರೀನಿವಾಸ್ (Poornima Srinivas) ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು ಎಂದು ಹೇಳಿದರು
ಅತ್ಯಂತ ಹಿಂದುಳಿದ ವರ್ಗ ಗೊಲ್ಲ ಸಮುದಾಯದ ಹಿರಿಯ ಕಾಂಗ್ರೆಸ್ ಮುಖಂಡರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಕೃಷ್ಣಪ್ಪ ಅವರ ಅಳಿಯ ಶ್ರೀನಿವಾಸ್, ಕೆ.ನರಸಿಂಹನಾಯಕ್ ಸೇರಿದಂತೆ 750 ಕ್ಕೂ ಹೆಚ್ಚು ಬಿಜೆಪಿಯ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ ಈ ಎಲ್ಲರನ್ನೂ ಪಕ್ಷ ಗೌರವದಿಂದ ನಡೆಸಿಕೊಳ್ಳಲಿದೆ ಎಂದರು.
ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.
ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿ ಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ ಎಂದರು. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಬೆಸೆದಕೊಂಡಿ:
ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ,
ಇಂದು ನನಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬಹಳ ಸಂತೋಷದ ದಿನ. ನಾವು ಎ.ಕೃಷ್ಣಪ್ಪ ಅವರ ಜತೆಯಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ಒಟ್ಟಾಗಿ ರಾಜಕಾರಣ ಮಾಡಿದವರು. ವೀರಪ್ಪ ಮೋಯ್ಲಿ ಅವರು ಟಿಕೆಟ್ ನೀಡಿ ಅವರ ಬೆಳವಣಿಗೆಗೆ ಪ್ರೋತ್ಸಾಹ ನೀಡಿದ್ದರು ಎಂದು ಹೇಳಿದರು
ನಮ್ಮ ತಪ್ಪುಗಳಿಂದ ಅವರ ಜತೆಗಿನ ಕೊಂಡಿ ಕಳಚಿತ್ತು. ಕೃಷ್ಣಪ್ಪ ಅವರ ಪುತ್ರಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಇಂದು ಮತ್ತೆ ಆ ಕೊಂಡಿ ಬೆಸೆದುಕೊಂಡಿದೆ ಎಂದು ಬಣ್ಣಿಸಿದರು.
ನಾನು ಬಹಳ ದಿನಗಳಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಗಾಳ ಹಾಕುತ್ತಿದ್ದೆ. ಪೂರ್ಣಿಮಾ ಅವರು ಪಕ್ಷಕ್ಕೆ ಬಾರದಿದ್ದಾಗ, ಅವರ ಪತಿ ಶ್ರೀನಿವಾಸ್ ಅವರಿಗೆ ಗಾಳ ಹಾಕಿದ್ದೆ. ಬೇರೆ ಲೆಕ್ಕಾಚಾರದಿಂದ ಇಷ್ಟು ದಿನ ಅವರು ಪಕ್ಷ ಸೇರಿರಲಿಲ್ಲ. ಇಂದು ಅವರು ತೀರ್ಮಾನ ಮಾಡಿ ನಿಮ್ಮೆಲ್ಲರ ಸಮ್ಮುಖದಲ್ಲಿ ನಮ್ಮ ಪಕ್ಷ ಸೇರುತ್ತಿದ್ದಾರೆ. ಇಂದು ಕೇವಲ ಪೂರ್ಣಿಮಾ ಅವರು ಹಾಗೂ ಶ್ರೀನಿವಾಸ್ ಇವರಿಬ್ಬರು ಮಾತ್ರ ಪಕ್ಷ ಸೇರುತ್ತಿಲ್ಲ. ಕರ್ನಾಟಕ ರಾಜ್ಯದ ಪ್ರವರ್ಗ 1ರ ಜಾತಿಯ ಒಕ್ಕೂಟ, ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘ ಸೇರಿದಂತೆ ಅನೇಕ ಸಂಘಟನೆಗಳ 4-5 ಸಾವಿರ ಕಾರ್ಯಕರ್ತರು ಪಕ್ಷ ಸೇರುತ್ತಿದ್ದಾರೆ. ನಾನು ಎಲ್ಲಾ ನಾಯಕರ ಜೊತೆ ಮಾತನಾಡಿ ಇವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ. ಇವರೆಲ್ಲರನ್ನು ಪಕ್ಷದ ಪರವಾಗಿ ಕಾಂಗ್ರೆಸ್ ಗೆ ತುಂಬು ಹೃದಯದಿಂದ ಸ್ವಾಗತಿಸಿತ್ತೇನೆ ಎಂದು ಹೇಳಿದರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು. ರಾಜಕೀಯದಲ್ಲಿ ಭಿನ್ನಾಭಿಪ್ರಾಯ ಸಹಜ. ಆದರೆ ಪಕ್ಷದ ಸಿದ್ಧಾಂತಕ್ಕಾಗಿ ಎಲ್ಲಾ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
1 Comment
Пошаговая инструкция по официальной покупке диплома о высшем образовании