ಬೆಂಗಳೂರು, 26 – ಕುಮಾರಸ್ವಾಮಿ ರಾಜಕಾರಣದ ವಿಲನ್ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ,ಹೌದು, ನಾನು ಸಿದ್ದರಾಮಯ್ಯಗೆ (Siddaramaiah) ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿದ್ದ ವೇಳೆ ನಾನು ತಾಜ್ ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದು ತಿರುಗೇಟು ನೀಡಿದರು.
ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು
ನನ್ನ ನೇತೃತ್ವದ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಇದರಲ್ಲಿ ಎರಡು ಮಾತಿಲ್ಲ.
ಬಿಜೆಪಿಯವರು ಸರ್ಕಾರ ಬೀಳಿಸಿದ್ದರು ಅಂತ ಹೇಳಿದ್ದೆ. ಆದರೆ ಅದಕ್ಕೆ ಬಿತ್ತನೆ ಹಾಕಿದ್ದು ಇದೇ ಸಿದ್ದರಾಮಯ್ಯ (Siddaramaiah) ಎಂದ ಅವರು ರಮೇಶ್ ಜಾರಕಿಹೋಳಿ ಯಾರು? ಅವರಿಗೂ ನನಗೂ ಯಾವ ಶತ್ರುತ್ವ ಇತ್ತು? ಬೆಳಗಾವಿ ರಾಜಕೀಯ ಸರಿ ಮಾಡಿ ಎಂದು ನಾನು ಇವರಿಗೆ ಹೇಳಿದೆ. ಇವರು ಸರಕಾರ ಬಿದ್ದು ಹೋಗಲಿ ಎಂದು ಸುಮ್ಮನಿದ್ದರು. ಆಗ ಬಿಜೆಪಿ ಜತೆ ಕೈ ಜೋಡಿಸಿದ್ದು ಸಿದ್ದರಾಮಯ್ಯ. ಅದಕ್ಕೆ ಸಮ್ಮಿಶ್ರ ಸರಕಾರ ಬಿದ್ದು ಹೋಯಿತು ಎಂದು ಅವರು ನೇರ ಆರೋಪ ಮಾಡಿದರು.
ಇಬ್ಬರು ಪಕ್ಷೇತರ ಶಾಸಕರನ್ನು ಮಂತ್ರಿ ಮಾಡಿಸಿದ್ದು ಸಿದ್ದರಾಮಯ್ಯ. ಬಿ.ಸಿ.ಪಾಟೀಲ್ ಅವರನ್ನು ಮಂತ್ರಿ ಮಾಡಲು ಹೇಳಿದ್ದೆ. ಆದರೆ ಸಿದ್ದರಾಮಯ್ಯ ಮಾಡಲಿಲ್ಲ. ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಶ್ರೀಮಂತ ಪಾಟೀಲ್, ಆರ್.ಶಂಕರ್ ಅವರನ್ನು ರೆಸಾರ್ಟ್ ನಿಂದ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ಟೀಕಾ ಪ್ರಹಾರ ನಡೆಸಿದರು.
ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನ ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ. ಜನರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.
4 Comments
промокод продамус на 5000 http://www.prodamus-promokod1.ru .
Prodamus -промокод на подключение forumbar.anihub.me/viewtopic.php?id=9823#p17576-00 .
Официальная покупка диплома вуза с сокращенной программой обучения в Москве
продамус промокод [url=promokod-prod.ru]promokod-prod.ru[/url] .