ಬೆಂಗಳೂರು,ನ.15- ವಿದ್ಯುತ್ ಕಳವು ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದ ಕಾಪೌಂಡ್ ಗೋಡೆಗೆ ʼಕರೆಂಟ್ ಕಳ್ಳ ಕುಮಾರಸ್ವಾಮಿ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್ ಅಂಟಿಸಲಾಗಿದೆ.
ಈ ರೀತಿಯ ಪೋಸ್ಟರ್ ಅಂಟಿಸಿರುವುದಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಪೋಸ್ಟರ್ ತೆರವುಗೊಳಿಸಿದರು.

ಕುಮಾರಸ್ವಾಮಿ (HD Kumaraswamy) ಅವರು ಜೆಪಿನಗರದ ಮನೆ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದಲ್ಲಿ ನಿನ್ನೆ ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಜಾಗೃತ ದಳ ಪ್ರಕರಣದ ದಾಖಲಿಸಿಕೊಂಡಿತ್ತು. ಹೀಗಾಗಿ ಎಚ್‌ಡಿಕೆ ಅವರನ್ನು ವ್ಯಂಗ್ಯವಾಡಲು ಕಿಡಿಗೇಡಿಗಳು ಪೋಸ್ಟರ್ ಅಂಟಿಸಿದ್ದಾರೆ.
ಕುಮಾರಸ್ವಾಮಿ ಕರೆಂಟ್ 200 ಯುನಿಟ್ ಮಾತ್ರ ಉಚಿತ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ. ಕರೆಂಟ್ ಕದ್ದರೂ ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ.
ಕುಮಾರಸ್ವಾಮಿ ವಿರುದ್ಧ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್‌ಐಆರ್ ದಾಖಲಾಗಿದೆ.


1 Comment
Luck finally blocked everyone who isn’t you – http://ropinirolec.com/mostbet-%d0%ba%d0%b0%d0%b7%d0%b8%d0%bd%d0%be-%d0%b1%d1%8a%d0%bb%d0%b3%d0%b0%d1%80%d0%b8%d1%8f-2026-%d0%b1%d0%be%d0%bd%d1%83%d1%81%d0%b8-%d0%b8-%d0%be%d1%82%d0%b7%d0%b8%d0%b2%d0%b8-%d0%be/ , Where the house edge is just clickbait .