ಚಿತ್ರದುರ್ಗ,ನ.16- ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದಿರುವ ಮುರುಘಾ ಶರಣರು (Murugha Sharanaru) ಇಂದು ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.
ಮಠದ ಹಾಸ್ಟೆಲ್‌ನಲ್ಲಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿ, ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಜೈಲುಸೇರಿದ್ದ ಮುರುಘಾ ಶರಣರಿಗೆ (Murugha Sharanaru) ಹೈಕೋರ್ಟ್,ಕಳೆದ ನ. 8ರಂದು ಜಾಮೀನು ನೀಡಿತ್ತು ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಮಠದ ಹಾಸ್ಟೆಲ್‌ನಲ್ಲಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮುರುಘಾಶ್ರೀಗಳ ವಿರುದ್ಧ ವಿರುದ್ಧ ಎರಡು ಪೋಕ್ಸೋ ಪ್ರಕರಣಗಗಳು ದಾಖಲಾಗಿದ್ದವು. ಈ ಪೈಕಿ ಒಂದೇ ಕೇಸ್ನಲ್ಲಿ ಮಾತ್ರ ಮುರುಘಾಶ್ರೀಗಳನ್ನು ಬಂಧಿಸಲಾಗಿತ್ತು. ಇದೇ ಒಂದನೇ ಪ್ರಕರಣರದಲ್ಲಿ ನವೆಂಬರ್ 8ರಂದು ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಇಂದು ಮುರುಘಾಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ.
ದಾವಣಗೆರೆಯತ್ತ:
ಚಿತ್ರದುರ್ಗದಲ್ಲಿ ನೆಲೆಸುವಂತಿಲ್ಲ ಎಂದು ಕೋರ್ಟ್ ಷರತ್ತು ವಿಧಿಸಿದ ಹಿನ್ನಲೆಯಲ್ಲಿ ಶ್ರೀಗಳು ಜೈಲಿನಿಂದ ನೇರವಾಗಿ ದಾವಣಗೆರೆ ಕಡೆ ಹೊರಟಿದ್ದಾರೆ. ದಾವಣಗೆರೆ ನಗರದ ಜಯದೇವ ವೃತ್ತದ ಬಳಿ ಇರುವ ಶಿವಯೋಗಿ ಮಂದಿರಕ್ಕೆ ತೆರಳಿ ಜಯದೇವ ಸ್ವಾಮೀಜಿ ಗದ್ದುಗೆಗೆ ನಮಸ್ಕರಿಸಲಿದ್ದಾರೆ. ಚಿತ್ರದುರ್ಗ ಪ್ರವೇಶ ಇಲ್ಲದಿರುವುದರಿಂದ ಮುರುಘಾಶ್ರೀಗಳು ಶಿವಯೋಗಿ ಮಂದಿರದಲ್ಲೇ ಉಳಿದುಕೊಳ್ಳುವ ಸಾಧ್ಯತೆಗಳಿವೆ.


4 Comments
buspar online pharmacy online pharmacy flovent best online non prescription pharmacy
online pharmacy no prescription adipex pharmacy rx online legitimate online pharmacy cialis
https://sportium.net.co/
Sportium Colombia constitui um cassino e uma casa de apostas esportivas pela internet que funciona com plena legalidade sob a licenca da Coljuegos, fruto da parceria entre CIRSA e Ladbrokes desde 2007. Disponibiliza uma plataforma completa e confiavel onde os usuarios da Colombia tem acesso desde apostas ao futebol ate slots e cassino em tempo real com dealers reais, tudo no mesmo site.
percocet online us pharmacy voltaren emulgel online pharmacy online pharmacy ambien no prescription