Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಸ್ತಿ ವಿವರ ಸಲ್ಲಿಸಲು ಶಾಸಕ, ಸಚಿವರು ರೆಡಿ ಇಲ್ಲ | Karnataka Lokayukta
    ಸುದ್ದಿ

    ಆಸ್ತಿ ವಿವರ ಸಲ್ಲಿಸಲು ಶಾಸಕ, ಸಚಿವರು ರೆಡಿ ಇಲ್ಲ | Karnataka Lokayukta

    vartha chakraBy vartha chakraDecember 1, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.30- ಸಚಿವರಾದ ರಾಮಲಿಂಗ ರೆಡ್ಡಿ, ಕೆ ಎಚ್ ಮುನಿಯಪ್ಪ ರಹೀಂ ಖಾನ್, ಕೆ ಎನ್ ರಾಜಣ್ಣ, ಜಮೀರ್ ಅಹಮದ್ ಖಾನ್, ಸೇರಿದಂತೆ 72 ಮಂದಿ ಶಾಸಕರು ನಿಗಧಿತ ಸಮಯದಲ್ಲಿ ನಿಗದಿಪಡಿಸಿದ ನಿಯಮಾನುಸಾರ ಲೋಕಾಯುಕ್ತಕ್ಕೆ (Karnataka Lokayukta) ತಮ್ಮ ಆಸ್ತಿಪಾಸ್ತಿಗಳ ವಿವರ ಸಲ್ಲಿಸಿಲ್ಲ.

    ಭ್ರಷ್ಟಾಚಾರ ನಿಯಂತ್ರಿಸುವ ದೃಷ್ಟಿಯಿಂದ ಶಾಸನಸಭೆಗೆ ಆಯ್ಕೆಯಾದವರ ಆಸ್ತಿ ವಿವರಗಳ ಮೇಲೆ ನಿಗಾ ವಹಿಸುವ ಸಲುವಾಗಿ ಅವರ ವಿವರ ಲೋಕಾಯುಕ್ತಕ್ಕೆ ಸಲ್ಲಿಸಬೇಕು.

    ಶಾಸನ ಸಭೆಗೆ ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು  ಸಲ್ಲಿಸಬೇಕಾದ ನಿಯಮ‌ ಉಲ್ಲಂಘಿಸಿರುವ ರಾಜ್ಯದ ವಿಧಾನ ಸಭಾ ಹಾಗೂ ವಿಧಾನಪರಿಷತ್ ನ 72 ಮಂದಿ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ  ಬಹಿರಂಗಪಡಿಸಿದೆ.

    ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮವಿದ್ದರೂ ಕೆಲವು ಶಾಸಕರು ಹಾಗೂ ಪರಿಷತ್ ಸದಸ್ಯರು ಇದುವರೆಗೂ ಲೋಕಾಯುಕ್ತ ಕಚೇರಿಗೆ ಆಸ್ತಿ ವಿವರವನ್ನು ಸಲ್ಲಿಸಿಲ್ಲ.ಇದರಿಂದಾಗಿ ಆಸ್ತಿ ವಿವರ ಸಲ್ಲಿಸದ ಶಾಸಕರುಗಳ ಪಟ್ಟಿಯನ್ನು ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.

    ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆಸಿ ನಾರಾಯಣಗೌಡ, ಎಸ್ ಅಂಗಾರ ಆಸ್ತಿ ವಿವರ ಸಲ್ಲಿಸದೇ ನಿಮಯ ಉಲ್ಲಂಘಿಸಿದ್ದರು. ಈ ಬಾರಿ ರಹೀಂ ಖಾನ್, ಕೆ ಎನ್ ರಾಜಣ್ಣ, ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ, ಕೆ ಎಚ್ ಮುನಿಯಪ್ಪ ಅವರು ಸಹ ಆಸ್ತಿ ವಿವರ ಸಲ್ಲಿಸಿಲ್ಲ.

    ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರು ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದು,ಈ ವಿಧಾನಸಭೆ ಅವಧಿಯ 51 ಮಂದಿ ಶಾಸಕರ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ.

    ಹಾಗಯೇ 21 ವಿಧಾನ ಪರಿಷತ್ ಸದಸ್ಯರು ಸಹ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ. ಇನ್ನುಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವರು ಗಡುವು ಮುಗಿದ ಅಂದರೆ ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅವಧಿ ಮುಗಿದ ಬಳಿಕ 10 ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯ ಆಸ್ತಿ ವಿವರ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    ಲೋಕಾ ಗಡುವು:

    ರಾಜ್ಯದ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಅವರು ಜೂ.30ರ ಗಡುವು ನೀಡಿದ್ದರು. ಈ ಅವಧಿಯಲ್ಲಿ ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸೂಚನೆ ನೀಡಿದ್ದರು.ಅದರಂತೆ ಮುಖ್ಯ ಕಾರ್ಯದರ್ಶಿ ಎಲ್ಲರಿಗೂ ಪತ್ರ ರವಾನಿಸಿದ್ದರು.

    ಲೋಕಾಯುಕ್ತ ನಿಯಮಗಳ ಪ್ರಕಾರ ಚುನಾಯಿತ ಪ್ರತಿನಿಧಿಗಳು ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮ ಜರುಗಿಸಬಹುದಾಗಿದೆ.

    ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದ್ದು ಅದು ಕಡ್ಡಾಯವಾಗಿದೆ.

    ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

    Verbattle
    Verbattle
    Verbattle
    Government Karnataka karnataka lokayukta lokayukta News Politics Trending ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸೋನಿಯಾ ಗಾಂಧಿ ನಿಲುವಿಗೆ ವಿರುದ್ಧವಾ ಕಾಂಗ್ರೆಸ್ ಸರ್ಕಾರ? | Sonia Gandhi
    Next Article ಬೆಂಗಳೂರಿಗೆ ಮತ್ತಷ್ಟು ಇಂದಿರಾ ಕ್ಯಾಂಟೀನ್ | Indira Canteen
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    1 Comment

    1. Ydjwjv on February 12, 2026 6:22 pm

      mgm sports betmgm-play betmgm CT

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • MichaelCah on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • StellaHewly on ಮತಗಳ್ಳತನದ ವಿರುದ್ಧ ಹೋರಾಟಕ್ಕೆ ಕರೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.