Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರೂಣ ಹತ್ಯೆಯ Expert Nurse | Female Foeticide
    Viral

    ಭ್ರೂಣ ಹತ್ಯೆಯ Expert Nurse | Female Foeticide

    vartha chakraBy vartha chakraDecember 4, 202357 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.4- ರಾಜ್ಯದಲ್ಲಿ ಸಂಚಲನ‌ ಮೂಡಿಸಿ ಆತಂಕಕ್ಕೆ ಎಡೆಮಾಡಿಕೊಟ್ಟಿರುವ ಬೆಂಗಳೂರು ಸೇರಿ ಮೂರು ಜಿಲ್ಲೆಗಳಲ್ಲಿ ನಡೆದಿದ್ದ ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ (Female Foeticide) ಪ್ರಕರಣದ ಸಂಬಂಧ ಮತ್ತೊಬ್ಬ ಖತರ್ನಾಕ್  ನರ್ಸ್ ನ್ನು ನಗರ ಪೊಲೀಸರು ಬಂಧಿಸಿದ್ದಾರೆ.
    ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ ಉಷಾರಾಣಿ ಬಂಧಿತ ಆರೋಪಿಯಾಗಿದ್ದಾರೆ.ಈಕೆಯ ಬಂಧನದೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
    ಆರೋಪಿ ಉಷಾರಾಣಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಡಾ.ಚಂದನ್ ಬಲ್ಲಾಳ್ನ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದು, ಪ್ರಕರಣ ಬೆಳಕಿಗೆ ಬಂದ ಬಳಿಕ ಉಷಾರಾಣಿ ಕೆಲಸ ಬಿಟ್ಟು ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದರು.
    ನರ್ಸ್ ಉಷಾರಾಣಿ ಪ್ರಕರಣದ ಮತ್ತೊಬ್ಬ ಆರೋಪಿ ಬ್ರೋಕರ್ ಪುಟ್ಟರಾಜು ಸಂಬಂಧಿ ಕೂಡಾ ಆಗಿದ್ದು ಮೂರು ದಿನಗಳ ಹಿಂದೆ ಬಂಧಿತ ನರ್ಸ್ ನೀಡಿದ್ದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಉಷಾರಾಣಿಯನ್ನು ಬಂಧಿಸಲಾಗಿದೆ.

    ಬ್ರೋಕರ್ ಪುಟ್ಟರಾಜು ಅಣತಿ ಮೇರೆಗೆ ಆರೋಪಿ ಉಷಾರಾಣಿ ಗರ್ಭಪಾತ ಮಾಡುತ್ತಿದ್ದರು. ಗರ್ಭಪಾತಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು. ಬೈಯ್ಯಪ್ಪಹಳ್ಳಿ ಪೊಲೀಸರು ಬ್ರೋಕರ್ ಪುಟ್ಟರಾಜು ಅನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಎಲ್ಲ ವಿಚಾರಗಳು ಬಯಲಾಗಿವೆ. ಸದ್ಯ ಬ್ರೋಕರ್ ಪುಟ್ಟರಾಜು ಜಾಮೀನು ಪಡೆದಿದ್ದು, ಸಂಬಂಧಿ ಉಷಾರಾಣಿಯನ್ನು ಬಂಧಿಸಿ ವಿಚಾರಣೆ ಕೈಗೊಳ್ಳಲಾಗಿದೆ.
    ಇನ್ನು ಉಷಾರಾಣಿ ಕೆಲಸ ಮಾಡುತ್ತಿದ್ದ ಖಾಸಗಿ ಆಸ್ಪತ್ರೆ ಲಿಂಗ ಪತ್ತೆ ಮಾಡದೇ ಆರೋಗ್ಯ ಇಲಾಖೆ ನಿಯಮಾವಳಿ ಪ್ರಕಾರ ಗರ್ಭಪಾತ ಮಾಡುತಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆ ಮಾಲೀಕರನ್ನು ಬೈಯಪ್ಪನಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಗರ್ಭಪಾತ ಕಾಯ್ದೆ: ಗರ್ಭಪಾತ ಕಾಯ್ದೆಯ ಪ್ರಕಾರ ಲಿಂಗ ಪತ್ತೆ ಮಾಡದೇ, ಪತಿ-ಪತ್ನಿ ಒಪ್ಪಿಗೆ ಬಳಿಕ ಮತ್ತು ಗರ್ಭಿಣಿಗೆ ತೀವ್ರ ಆರೋಗ್ಯ ಸಮಸ್ಯೆ ಇದ್ದಲ್ಲಿ ಮಾತ್ರ ಸ್ಕ್ಯಾನಿಂಗ್ ಹಾಗೂ ವೈದ್ಯಕೀಯ ವರದಿ ಸಹಿತ ಗರ್ಭಪಾತ ಮಾಡಬೇಕು. ಇವೆಲ್ಲವೂ ಗರ್ಭಧರಿಸಿದ 24 ವಾರದ ಒಳಗಾಗಿ ಆಗಬೇಕು. ಬಳಿಕ ಸಂಬಂಧ ಪಟ್ಟ ಇಲಾಖೆಗೆ ಈ ಎಲ್ಲ ಮಾಹಿತಿ ನೀಡಬೇಕು. ಜೊತೆಗೆ ನಡೆದ ಎಲ್ಲಾ ದಾಖಲೆಗಳನ್ನು ಎರಡು ವರ್ಷದವರೆಗೆ ಆಸ್ಪತ್ರೆಯಲ್ಲಿ ಇಟ್ಟುಕೊಂಡಿರಬೇಕು.
    ಉಷಾರಾಣಿ ಕೆಲಸ ಮಾಡುತ್ತಿದ್ದ ಖಾಸಗಿ ಆಸ್ಪತ್ರೆ ಈ ನಿಯಮಗಳನ್ನು ಹೊಂದಿದೆ. ಇದನ್ನು ತಿಳಿದ ಉಷಾರಾಣಿ ಆಸ್ಪತ್ರೆಯ ಮಾಲೀಕ ಮತ್ತು ವೈದ್ಯರ ಗಮನಕ್ಕೂ ಬಾರದ ರೀತಿ, ನಕಲಿ ದಾಖಲೆ ಸೃಷ್ಟಿಸಿ ಗರ್ಭಪಾತ ಮಾಡುತ್ತಿದ್ದರು. ಬಳಿಕ ವೈದ್ಯರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದರು ಎನ್ನಲಾಗಿದೆ
    ಈ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಪೊಲೀಸರು ಉಷಾರಾಣಿಯನ್ನು ಬಂಧಿಸಿದ್ದಾರೆ ಉಷಾರಾಣಿಗೆ ಈ ಜಾಲದ ನಂಟು ಸಿಕ್ಕಿದ್ದು ಹೇಗೆ..? ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಉಷಾರಾಣಿ ನಕಲಿ ದಾಖಲೆ ಸೃಷ್ಟಿಸಿದ್ದು ಹೇಗೆ..? ಎಂಬ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Female Foeticide Karnataka m News Trending ಆರೋಗ್ಯ ಚಂದನ್
    Share. Facebook Twitter Pinterest LinkedIn Tumblr Email WhatsApp
    Previous Articleಮುಂಬೈ ಸೈಬರ್ ಪೊಲೀಸರ ಹೆಸರಲ್ಲೂ ವಂಚನೆ | Mumbai Cyber Police
    Next Article ಹೈಕಮಾಂಡ್ ಗೆ ಸವಾಲ್ ಹಾಕಿದ ಯತ್ನಾಳ್ | Yatnal
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • narkologiyavladimirvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • zapojchelyabinskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • double happiness cigarette australia on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe