Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಸಸ್ಪೆಂಡ್
    Trending

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಸಸ್ಪೆಂಡ್

    vartha chakraBy vartha chakraDecember 20, 202319 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾಗಿ ಈ ಹಿಂದೆ ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ವಿರುದ್ಧ ಜಿಲ್ಲಾ ಕಚೇರಿ ಸಿಬ್ಬಂದಿಗಳಿಗೆ ಹಾಗೂ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಿರುಕುಳ, ಮಾನಸಿಕ ಹಿಂಸೆ, ಮಹಿಳಾ ಸಿಬ್ಬಂದಿಗಳ ಜೊತೆ ದುರ್ನಡತೆ, ದಬ್ಬಾಳಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿಬಂದಿದ್ದು, ಸಾರ್ವಜನಿಕರ ಮುಂದೆ ಸಿಬ್ಬಂದಿಗಳನ್ನು ಅವಮಾನಿಸುತ್ತಿದ್ದರು ಎನ್ನುವ ಆರೋಪಗಳಿವೆ.

    ಅಲ್ಲದೇ ಕಚೇರಿ ಸಮಯ ಮುಗಿದ ನಂತರವೂ ಅವಶ್ಯಕತೆ ಇಲ್ಲದಿದ್ದರೂ ಮಹಿಳಾ ಸಿಬ್ಬಂದಿಗಳನ್ನು ರಾತ್ರಿ 8-9 ಗಂಟೆವರೆಗೆ ಕಚೇರಿಯಲ್ಲಿ ಉಳಿಯುವಂತೆ ಆದೇಶಿಸಿದ್ದರು. ಮನೆಗೆ ಹೋದ ಬಳಿಕವೂ ಸಿಬ್ಬಂದಿಗಳಿಗೆ ರಾತ್ರಿ 10-11 ಗಂಟೆಗೆ ಕರೆ ಮಾಡಿ ಕೆಲಸ ಹೇಳುತ್ತಿದ್ದರು. ಇಲಾಖೆಯ ಕಾರ್ಯಕ್ರಮ ನಡೆಯುತ್ತಿದ್ದಾಗ ಬೇರೆ ಇಲಾಖೆ ಅಧಿಕಾರಿಗಳ ಎದುರಿಗೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳನ್ನು ಕೆಟ್ಟ ಶಬ್ದಗಳಿಂದ ಬೈದು ಅವಮಾನಿಸುತ್ತಿದ್ದರು.

    ಸಿಬ್ಬಂದಿಗಳಿಗೆ ಯೋಗ್ಯತೆ ಇಲ್ಲ, ದನ ಕಾಯೋನು, ಯೂಸ್ ಲೆಸ್ ಫೆಲೋ, ಕತ್ತೆ ಮೇಯಿಸೋಕೆ ಹೋಗಿ ಎಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಕಾಲಕಾಲಕ್ಕೆ ಕಡತಗಳನ್ನು ಸಿಬ್ಬದಿಗಳು ತಯಾರಿಸಿಕೊಟ್ಟರೂ ಮೇಲಧಿಕಾರಿಗಳ ಬಳಿ ಹೋಗಿ ಕಡತಕ್ಕೆ ಸಹಿ ಹಾಕಿಸಿಕೊಂಡು ಬರದೇ ಕೆಲಸದಲ್ಲಿ ವಿಳಂಬ ಧೋರಣೆ ಅನುಸರಿಸುತ್ತ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಗಳು ಬಸವರಾಜು ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದರು.

    ಅಲ್ಲದೇ ಚಿಕ್ಕೋಡಿ ಸಂಸದ ಅಣ್ಣಸಾಹೇಬ ಜೊಲ್ಲೆ ಸೇರಿದಂತೆ ಹಲವರು ಎ.ಎಂ.ಬಸವರಾಜು ವಿರುದ್ಧ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದರು. ಮಾತ್ರವಲ್ಲ ಬಸವರಾಜು ಅವರನ್ನು ಬೆಳಗಾವಿ ಜಿಲ್ಲೆಯಿಂದ ಬೇರೆಕಡೆಗೆ ವರ್ಗಾವಣೆ ಮಾಡಬಹುದಾಗಿದೆ ಅಥವಾ ಚುನಾವಣಾ ಕರ್ತವ್ಯದಿಂದ ನಿರ್ಭಂದಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದರು.

    ಇತ್ತೀಚೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಮತ್ತೆ ಬೆಳಗಾವಿಗೆ ಆಗಮಿಸಿ ಹಾಲಿ ಉಪನಿರ್ದೇಶಕ ನಾಗರಾಜ ಅವರು ಸುವರ್ಣ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತನಗೆ ನ್ಯಾಯಾಲಯದಿಂದ ಆದೇಶವಾಗಿದೆ ಎಂದು ಹೇಳಿ ಕಚೇರಿಗೆ ಹಾಜರಾಗಿ ಸಿಬ್ಬಂದಿಯನ್ನು ಅವಾಚ್ಯವಾಗಿ ಬೈದು, ಅನುಚಿತವಾಗಿ ವರ್ತಿಸಿದ್ದರು ಎನ್ನುವ ಆರೋಪ ಬಸವರಾಜು ಮೇಲಿದೆ.

    ಪರಿಶಿಷ್ಟ ಜಾತಿಯ ನೌಕರರಿಗೆ ಜಾತಿ ನಿಂದನೆ ಮಾಡಿದ ಆರೋಪ, ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಮೊದಲಾದ ಆರೋಪಗಳು ಸಹ ಇವರ ಮೇಲಿದೆ.

    ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್ ಬಸವರಾಜು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

    Verbattle
    Verbattle
    Verbattle
    Karnataka News Politics Trending ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Next Article ಉಗ್ರಂ ನೆರಳಿನಲ್ಲಿ ‌ಸಲಾರ್ | Salaar
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    February 9, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • LinwoodGah on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • StellaHewly on ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.