Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಜಾಬ್ ನಿಷೇಧ ಆದೇಶ ರದ್ದಾಯಿತು | Hijab Ban
    ಸುದ್ದಿ

    ಹಿಜಾಬ್ ನಿಷೇಧ ಆದೇಶ ರದ್ದಾಯಿತು | Hijab Ban

    vartha chakraBy vartha chakraDecember 22, 2023No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು – ರಾಜ್ಯದ ಉಡುಪಿಯಲ್ಲಿ ಆರಂಭಗೊಂಡು, ದೇಶಾದ್ಯಂತ ವಿವಾದ ಸೃಷ್ಟಿಸಿದ್ದಲ್ಲದೇ ಕೋರ್ಟ್ ಮೆಟ್ಟಿಲೇರಿದ್ದ ಹಿಜಾಬ್ ನಿಷೇಧ (Hijab Ban) ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
    ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲೆ ಮತ್ತು ಹೈಸ್ಕೂಲ್ ಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು.ಸರ್ಕಾರ ಅಥವಾ ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿದ ಸಮವಸ್ತ್ರ ಹೊರತು ಪಡಿಸಿ ಬೇರೆ ಯಾವುದೇ ರೀತಿಯ ವಸ್ತ್ರ ಧರಿಸುವಂತಿಲ್ಲ ಎಂದು ತಿಳಿಸಿತ್ತು. ಅದರಲ್ಲೂ ಹಿಜಾಬ್ ಧರಿಸಲು ಅವಕಾಶವೇ ಇಲ್ಲ ಎಂದು ಈ ಆದೇಶದಲ್ಲಿ ತಿಳಿಸಲಾಗಿತ್ತು.‌

    ಅಂದಿನ ಸರ್ಕಾರದ ಈ ಆದೇಶ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿತ್ತು. ಸರ್ಕಾರದ ಆದೇಶ ವಿರೋಧಿಸಿ ಮುಸ್ಲಿಂ ಸಮುದಾಯದ ಹಲವು ಪಾಲಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆ ಬಿಡಿಸಿದರೆ,ಕೆಲವರು ಆದೇಶ ಪ್ರಶ್ನಿಸಿ ಕೋರ್ಟ್ ಮೊರೆ ಹೊಕ್ಕಿದ್ದರು.
    ಇಂತಹ ವಿವಾದ ಇನ್ನೂ ಹಸಿರಾಗಿರುವಾಗಲೇ ಇದೀಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಆದೇಶ ವಾಪಸ್ ಪಡೆಯುವುದಾಗಿ ಪ್ರಕಟಿಸಿದೆ.
    ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
    ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಎಲ್ಲ ಜಾತಿ, ಎಲ್ಲಾ ಧರ್ಮದವರಿಗೆ ಮಾತ್ರವಲ್ಲ ಎಲ್ಲಾ ಪಕ್ಷದವರಿಗೂ ಅನುಕೂಲ ಆಗುವ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಬಿಜೆಪಿಯವರು 10 ಕೆಜಿ ಅಕ್ಕಿ ಪಡೆಯುತ್ತಿಲ್ಲವಾ ? ಬಿಜೆಪಿಯವರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿಲ್ಲವೇ ? ಬಿಜೆಪಿಯವರು ಗೃಹಜ್ಯೋತಿ, ಗೃಹಲಕ್ಷ್ಮಿ ಯ ಹಣ ಪಡೆಯುತ್ತಿಲ್ಲವೇ ? ನಮ್ಮ ಗ್ಯಾರಂಟಿ ಸ್ಕೀಂ ಗಳ ಲಾಭ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು.

    ಸುಳ್ಳು ಹೇಳುವವರ, ನಮ್ಮ ಸರ್ಕಾರದ ಲಾಭ ಪಡೆದೂ ನಕ್ರಾ ಆಡುವವರ ಜತೆ ಹೋಗಬೇಡಿ ಎಂದು ಮನವಿ ಮಾಡಿದ ಅವರು,ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟರು.
    ಹಣವಂತರು, ಬಲಾಡ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು ಎನ್ನುವ ಭ್ರಮೆಯಲ್ಲಿರುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು ಎಂದರು.
    ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ.ಜನರೇ ನಮ್ಮ ಮಾಲೀಕರು ಎನ್ನುವ ಭಾವನೆ ಎಲ್ಲಾ ಅಧಿಕಾರಿಗಳಲ್ಲೂ ಇರಬೇಕು ಎಂದು ಕಿವಿಮಾತು ಹೇಳಿದರು.
    ನಾಗರಿಕ ಹಕ್ಕುಗಳ ರಕ್ಷಣೆ ಪೊಲೀಸ್ ಇಲಾಖೆಯ ಕರ್ತವ್ಯ. ಕಾನೂನು ಉಲ್ಲಂಘಿಸಲು ಕೆಲವರು ಚಾಪೆ ಕೆಳಗೆ ನುಸುಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದು.ಗುಪ್ತಚರ ಇಲಾಖೆ ಹೆಚ್ಚು ಕ್ರಿಯಾಶೀಲವಾಗಿದ್ದರೆ ಅಪರಾಧ ಘಟಿಸುವುದಕ್ಕಿಂತ ಮೊದಲೇ ತಡೆಯುವುದು ಸಾಧ್ಯ. ಠಾಣೆಯ ಅಧಿಕಾರಿಗಳಿಗೆ ಗೊತ್ತಿಲ್ಲದೆ ಯಾವ ಕಾನೂನು ಬಾಹಿರ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಠಾಣೆಯಲ್ಲೇ ಕುಳಿತು ಮಹಜರ್ ಬರೆಯಬಾರದು. ಸ್ಥಳಕ್ಕೆ ಹೋಗಿ ಮಹಜರ್ ಮಾಡಬೇಕು ಎಂದು ಸೂಚಿಸಿದರು.

    Bangalore Government Hijab hijab ban Karnataka News Politics Trending Varthachakra ಉಡುಪಿ ಕಾಂಗ್ರೆಸ್ ಕಾನೂನು ಧರ್ಮ ಶಾಲೆ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ವರ್ಷ ಸ್ವಾಗತಕ್ಕೆ ತಯಾರಿ ಹೇಗಿದೆ ಗೊತ್ತಾ | New Year Celebrations
    Next Article CET ವೇಳಾಪಟ್ಟಿ ಪ್ರಕಟ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HerbertNub on ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • HunterMooda on May 3, 2023 51st Year Free Mass Marriage at Sri Kshetra Dharmasthala
    • FobertCaR on ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe