Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರೆಡೆಲ್ ನಿಂದ ಮತ್ತೊಂದು ದಾಖಲೆ | KREDL
    ಸುದ್ದಿ

    ಕ್ರೆಡೆಲ್ ನಿಂದ ಮತ್ತೊಂದು ದಾಖಲೆ | KREDL

    vartha chakraBy vartha chakraDecember 28, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.27: ವಿವಿಧ ಕ್ಷೇತ್ರಗಳಲ್ಲಿ ಬಳಸಲಾಗುತ್ತಿರುವ ಇಂಧನದಿಂದ ಪರಿಸರ ಸಮತೋಲನ,ಉಳಿತಾಯ, ಇಂಧನ ದಕ್ಷತೆ ಮತ್ತು ಕ್ಷಮತೆ ದೊಡ್ಡ ಸವಾಲು ಇದನ್ನು ನಿಭಾಯಿಸುವ ದೃಷ್ಟಿಯಿಂದ ರಾಜ್ಯ ನವೀಕರಿಸಬಹುದಾದ ಇಂಧನ ಮೂಲಗಳ ನಿಗಮ(ಕೆಆರ್ ಇಡಿಎಲ್) ವಿನೂತನ ಕ್ರಮಕ್ಕೆ ಮುಂದಾಗಿದೆ.
    ವಿವಿಧ ಕ್ಷೇತ್ರಗಳಲ್ಲಿ ಇಂಧನ ದಕ್ಷತೆ ಹಾಗೂ ಸುಧಾರಣೆಗೆ ಮಾರ್ಗಸೂಚಿಯನ್ನು ಒದಗಿಸಲು ಮುಂದಾಗಿದೆ.ಈ ನಿಟ್ಟಿನಲ್ಲಿ ನಿಗಮವು ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಸಹಯೋಗದಲ್ಲಿ ‘ಕರ್ನಾಟಕ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ’ (ಕೆ-ಸೀಪ್)ಯನ್ನು ಬಿಡುಗಡೆ ಮಾಡಿದೆ.

    ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆಯ ವರದಿ ಬಿಡುಗಡೆ ಮಾಡಿದರು.
    ಈ ವೇಳೆ ಮಾತನಾಡಿದ ಅವರು,ಇಂಧನ ಬಳಕೆಯ ಸಮಯದಲ್ಲಿ ಅನಿಲ ಹೊರಸೂಸುವಿಕೆಯಿಂದ ಉಂಟಾಗುವ ವಾಯುಮಾಲಿನ್ಯ‌ ದೊಡ್ಡ ಸವಾಲಾಗಿದೆ. ಇದರಿಂದ ತಾಪಮಾನ ಹೆಚ್ಚುತ್ತಿರುವುದು ಆತಂಕದ ವಿಷಯವಾಗಿದೆ ಎಂದು ಹೇಳಿದರು ಜಾಗತಿಕ ತಾಪಮಾನ ತಗ್ಗಿಸುವಲ್ಲಿ ಹಸಿರು ಮನೆ ಇಂಧನ ದಕ್ಷತೆಯು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಕ್ರೆಡೆಲ್ ರೂಪಿಸಿರುವ ಕೆ- ಸೀಪ್‌ ನಿಂದ ಸಂಪನ್ಮೂಲ ಸಂರಕ್ಷಣೆ, ಆರ್ಥಿಕ ಪ್ರಯೋಜನ, ಪರಿಸರ ಸಂರಕ್ಷಣೆ, ತಾಪಮಾನ ತಗ್ಗಿಸುವಿಕೆ, ಉದ್ಯೋಗ ಸೃಷ್ಟಿ ಮತ್ತು ಇಂಧನ ಭದ್ರತೆಯಂತಹ ಹಲವಾರು ಪ್ರಯೋಜನಗಳಿವೆ. ರಾಜ್ಯಕ್ಕೆ ಇಂತಹ ಇಂಧನ ದಕ್ಷತೆಯ ಕ್ರಿಯಾ ಯೋಜನೆ ಅತ್ಯಗತ್ಯವಿತ್ತು ಅದನ್ನು ಕ್ರೆಡೆಲ್ ಸಾಕಾರ ಮಾಡಿದೆ ಎಂದು ಪ್ರಶಂಸಿಸಿದರು.
    ನವೀಕರಿಸಬಹುದಾದ ಇಂಧನ ಮೂಲಗಳಿಗೆ ಪರಿವರ್ತನೆ, ಇಂಧನ ದಕ್ಷತೆಯನ್ನು ಸುಧಾರಿಸುವುದು ಮತ್ತು ಕೈಗಾರಿಕೆಗಳಲ್ಲಿ ಸುಸ್ಥಿರ ಅಭ್ಯಾಸಗಳನ್ನು ಅನುಷ್ಠಾನಗೊಳಿಸುವುದರಿಂದ ಇಂಗಾಲದ ಹೊರಸೂಸುವಿಕೆಯನ್ನು ಗಮನಾರ್ಹವಾಗಿ ನಿಗ್ರಹಿಸಬಹುದು. ಅಲ್ಲದೇ, ಅಂತಾರಾಷ್ಟ್ರೀಯ ಸಹಯೋಗ, ಸರ್ಕಾರ, ಉದ್ದಿಮೆಗಳು ಮತ್ತು ಜನರು ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ತಾಪಮಾನ ತಗ್ಗಿಸಲು ನವೀನ ತಂತ್ರಜ್ಞಾನಗಳಲ್ಲಿ ಹೂಡಿಕೆ ಮಾಡುವುದು ಬಹಳ ಮುಖ್ಯವಾಗುತ್ತದೆ,” ಎಂದು ಹೇಳಿದರು.

    ನಿಗಮದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ ಪಿ ರುದ್ರಪ್ಪಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಇಂಧನ ದಕ್ಷತೆಯ ಕ್ರಿಯಾ ಯೋಜನೆ (ಕೆ-ಸೀಪ್) ವರದಿಯು ಸುಸ್ಥಿರ ಇಂಧನ ಅಭ್ಯಾಸಗಳ ಕಡೆಗೆ ನಾವು ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.
    ನಿಗಮದ ಈ ಉಪಕ್ರಮವು ನವೀಕರಿಸಬಹುದಾದ ಇಂಧನ ಮತ್ತು ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕದ ಸಾಮರ್ಥ್ಯವನ್ನು ಹೆಚ್ಚಿಸುವ ಸಮಗ್ರ ಮಾರ್ಗಸೂಚಿಯನ್ನು ಒದಗಿಸುತ್ತದೆ,” ಎಂದು ಹೇಳಿದರು.
    ಇಂಧನ ದಕ್ಷತೆಯ ಕ್ರಿಯಾ ಯೋಜನೆ” ವರದಿಯು ಇಂಧನ ದಕ್ಷತೆಯ ಗುರಿಗಳನ್ನು ಸಾಧಿಸಲು ಮಾರ್ಗಸೂಚಿಯನ್ನು ಒದಗಿಸುತ್ತದೆ. ಕೈಗಾರಿಕೆ, ಕಟ್ಟಡ, ಸಾರಿಗೆ ಮತ್ತು ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಇಂಧನ ಉಳಿತಾಯ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಕಡಿತದ ಅವಕಾಶಗಳ ಬಗ್ಗೆ ವರದಿ ಬೆಳಕು ಚೆಲ್ಲುತ್ತದೆ,” ಎಂದು ವಿವರಿಸಿದರು.
    ಕಾರ್ಯಕ್ರಮದಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ, ಸಿಐಐನ ಪ್ರಧಾನ ಸಲಹೆಗಾರರಾದ ನಿಶಾ ಜಯರಾಮ್ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    ED kredl ಇಡಿ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Next Article PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    1 Comment

    1. Ewcrpt on February 13, 2026 6:49 am

      betmgm Wisconsin online casino betmgm play betmgm 200 free bets

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on May 3, 2023 51st Year Free Mass Marriage at Sri Kshetra Dharmasthala
    • LeonardReawn on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • LinwoodGah on ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.