Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೆಲ್ಲುವ ಕುದುರೆಗಳಿಗಾಗಿ ಬಿಜೆಪಿ ಹುಡುಕಾಟ | BJP
    ಸುದ್ದಿ

    ಗೆಲ್ಲುವ ಕುದುರೆಗಳಿಗಾಗಿ ಬಿಜೆಪಿ ಹುಡುಕಾಟ | BJP

    vartha chakraBy vartha chakraJanuary 15, 20243 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.15- ವಿಧಾನಸಭೆ ಚುನಾವಣೆಯ ಸೋಲಿನ ನಂತರ ಎಚ್ಚೆತ್ತುಕೊಂಡಿರುವ ಬಿಜೆಪಿ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಿಂಗಳ ಅಂತ್ಯಕ್ಕೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಮುಂದಾಗಿದೆ.
    ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣೆ ರಣತಂತ್ರದ ಕುರಿತು ರಾಜ್ಯ ನಾಯಕರೊಂದಿಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಹಾಗೂ ಚುನಾವಣೆ ನಿಪುಣ ಅಮಿತ್ ಶಾ ಬೆಂಗಳೂರಿಗೆ ಬರುತ್ತಿದ್ದು,ಅಷ್ಟರೊಳಗೆ
    ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಹಾಲಿ ಸದಸ್ಯರೂ ಸೇರಿದಂತೆ ಆಕಾಂಕ್ಷಿಗಳ ಪಟ್ಟಿಯನ್ನು
    ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಮಾಡಿದ ಎಡವಟ್ಟು ಈ ಬಾರಿ ಪುನರಾವರ್ತನೆ ಆಗಬಾರದು ಗೆಲುವು ಒಂದೇ ಮಾನದಂಡವಾಗಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಮಾಡಬೇಕು ಎಂದು ಸೂಚಿಸಿರುವುದಾಗಿ ಗೊತ್ತಾಗಿದೆ.
    ಕಳೆದ 2019 ರ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿಯ ಚುನಾವಣೆಯಲ್ಲಿ ಕೆಲವು ಸದಸ್ಯರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಯಿದೆ.ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ವಯಸ್ಸಿನ ಕಾರಣದಿಂದ ಕೆಲವು ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗಿರುವುದರಿಂದ ಒಂದೊಂದು ಕ್ಷೇತ್ರಕ್ಕೆ 5 ಕ್ಕೂ ಹೆಚ್ಚು ಸಂಭವನೀಯರ ಪಟ್ಟಿಯನ್ನು ಕಳುಹಿಸುವ ನಿರೀಕ್ಷೆಯಿದೆ.
    ಚಿಕ್ಕಬಳ್ಳಾಪುರದಿಂದ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ಈ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಗಳನ್ನು ಹುಡುಕಬೇಕಾಗಿದೆ. ಮಾಜಿ ಸಚಿವ ಡಾ.ಕೆ.ಸುಧಾಕರ್, ಎಂ.ಟಿ.ಬಿ.ನಾಗರಾಜ್ ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿವೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟರೂ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದಲೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

    ತುಮಕೂರಿನಲ್ಲಿ ಹಾಲಿ ಸಂಸದ ಬಸವರಾಜು ನಿವೃತ್ತಿ ಘೋಷಿಸಿದ್ದು,ಮಾಜಿ ಮಂತ್ರಿ ಜೆ.ಸಿ.ಮಾಧುಸ್ವಾಮಿ, ಹೆಬ್ಬಾಕ ರವಿ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ
    ಬಳ್ಳಾರಿಯಲ್ಲೂ ಹಾಲಿ ಸಂಸದ ದೇವೇಂದ್ರಪ್ಪ, ದಾವಣಗೆರೆಯ ಜಿ.ಎಂ.ಸಿದ್ದೇಶ್ವರ್, ಹಾವೇರಿಯ ಶಿವಕುಮಾರ್ ಉದಾಸಿ, ಬೆಳಗಾವಿಯ ಮಂಗಳ ಅಂಗಡಿ, ಚಾಮರಾಜನಗರದಿಂದ ವಿ.ಶ್ರೀನಿವಾಸ ಪ್ರಸಾದ್ ಸ್ರ್ಪಧಿಸುವುದಿಲ್ಲ ಎಂದು ಹೇಳಿರುವುದರಿಂದ ಸುಮಾರು 8 ರಿಂದ 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆಯಿದೆ
    ಬೆಂಗಳೂರು ಉತ್ತರದಿಂದ ಡಿ.ವಿ.ಸದಾನಂದಗೌಡ ಈ ಮೊದಲು ಸ್ರ್ಪಸುವುದಿಲ್ಲ ಎಂದು ಹೇಳಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೊನೆ ಕ್ಷಣದವರೆಗೂ ಇಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

    ಬೆಂಗಳೂರು ಸೆಂಟ್ರಲ್‍ನಿಂದ ಹಾಲಿ ಸಂಸದ ಪಿ.ಸಿ.ಮೋಹನ್‍ಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದಲ್ಲೇ ವಿರೋಧವಿದೆ. ಆದರೆ ಈಗ ಬಿಜೆಪಿ ಸಂಪೂರ್ಣವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿಯಂತ್ರಣಕ್ಕೆ ಬಂದಿರುವುದರಿಂದ ಮತ್ತೊಮ್ಮೆ ಅವರಿಗೆ ಟಿಕೆಟ್ ಸಿಕ್ಕರೂ ಅಚ್ಚರಿಯಿಲ್ಲ.
    ಮಂಗಳೂರು ಕ್ಷೇತ್ರದಿಂದ ನಳಿನ್‍ಕುಮಾರ್ ಕಟೀಲ್‍ಗೂ ಟಿಕೆಟ್ ಕೈತಪ್ಪುವ ಸಾಧ್ಯತೆಗಳೇ ಹೆಚ್ಚಾಗಿವೆ. ಮಾಜಿ ಸಚಿವ ನಾಗರಾಜ್ ಶೆಟ್ಟಿ ಹಾಗೂ ಸಂಘ ಪರಿವಾರದ ಅರುಣ್ ಕುಮಾರ್ ಪುತ್ತಿಲ ಹೆಸರುಗಳು ಚಾಲ್ತಿಯಲ್ಲಿವೆ. ಹಾಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ, ಚಿಕ್ಕಮಗಳೂರು ಕ್ಷೇತ್ರವನ್ನು ಬದಲಾಯಿಸಲಿದ್ದಾರೆ ಎಂಬ ವದಂತಿ ಹಬ್ಬಿದೆ.
    ಉತ್ತರ ಕನ್ನಡದಿಂದ ಅನಂತಕುಮಾರ್ ಹೆಗ್ಡೆಗೆ ಟಿಕೆಟ್ ಕೊಡುವ ಬಗ್ಗೆಯೂ ಭಾರೀ ವಿರೋಧವಿದೆ. ಹಿಂದೂ ಫೈಯರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಅವರಿಗೆ ಟಿಕೆಟ್ ನಿರಾಕರಿಸಿದರೆ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕವೂ ಇದೆ. ಬಾಗಲಕೋಟೆಯಿಂದ ಗದ್ದಿಗೌಡರ್, ನನಗೆ ಟಿಕೆಟ್ ಬೇಡ ಎಂದು ತಮ್ಮ ಆಪ್ತ ವಲಯದಲ್ಲಿ ಹೇಳಿಕೊಂಡಿದ್ದಾರೆ. ಹೀಗೆ ಹಲವು ಕ್ಷೇತ್ರಗಳಲ್ಲಿ ಒಂದಿಲ್ಲೊಂದು ಕಾರಣಗಳಿಂದ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಹೀಗಾಗಿ ಹೊಸ ಮುಖಗಳನ್ನು ಕಣಕ್ಕಿಳಿಸುವ ಅನಿವಾರ್ಯತೆ ಬಿಜೆಪಿಗಿದೆ.

    Verbattle
    Verbattle
    Verbattle
    BJP ಉಡುಪಿ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಧಾರ್ಮಿಕ ಸಂಸ್ಥೆಯ ಆಡಳಿತ ಮಂಡಳಿಯಾದ ಕೇಂದ್ರ ಸರ್ಕಾರ | HC Mahadevappa
    Next Article ರಾಜ್ಯಸಭಾ ಸದಸ್ಯತ್ವಕ್ಕೆ ಸೋಮಣ್ಣ ಲಾಬಿ | Somanna
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    3 Comments

    1. Lyvfkr on February 13, 2026 5:10 pm

      betmgm FL betmgm-play pa bet mgm

      Reply
    2. Fsnedc on February 20, 2026 10:28 am

      Uncover hidden treasures in a sea of engaging casino titles. crowns coin casino log in offers affiliate programs for extra earnings. Play, refer, and prosper!

      Reply
    3. Tbdiqi on February 23, 2026 5:29 pm

      Get lost in the delicious world of Sweet Bonanza, where every match explodes into more wins! Ante sweet bonanza casino bet boosts your chances, bonus buy delivers instant action. Sweet riches are just a spin away!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diegotup on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • auto 155 on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • Stephendex on ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    Latest Kannada News

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.