ಬೆಂಗಳೂರು.ಜ,16: ರಾಜ್ಯದಲ್ಲಿ ಲೋಕಸಭಾ Electionಯ ಕಾವು ನಿಧಾನವಾಗಿ ತೀವ್ರಗೊಳ್ಳುತ್ತಾ ಸಾಗುತ್ತಿದೆ .ಈ ನಿಟ್ಟಿನಲ್ಲಿ ಕಾಂಗ್ರೆಸ್, ಕನಿಷ್ಠ 20 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕೆಂದು ರಣತಂತ್ರ ರೂಪಿಸುತ್ತಿದೆ.
ರಾಜ್ಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಅವರು ತವರು ರಾಜ್ಯ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ಸಂಸದರು ಹೊಂದಿರಬೇಕು ಎಂಬ ನಿಟ್ಟಿನಲ್ಲಿ ಕಾರ್ಯತಂತ್ರ ನಡೆದಿದೆ ಹೀಗಾಗಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಆಳಿತು ತೂಗಿ ಲೆಕ್ಕಾಚಾರ ಹಾಕಲಾಗುತ್ತಿದೆ.
ಕಲಬುರಗಿ ಜಿಲ್ಲೆಯ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಸೋಲು ಕಂಡರು.
ನಂತರದಲ್ಲಿ ಹೈಕಮಾಂಡ್ ಅವರನ್ನು ರಾಜ್ಯಸಭೆಯ ಸದಸ್ಯರನ್ನಾಗಿ ನೇಮಿಸಿತು.
ಈ ಬಾರಿ ಅವರು ಮತ್ತೆ ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ಸೋಲಿನ ಅಪವಾದದಿಂದ ಹೊರ ಬರಲಿದ್ದಾರೆ ಎಂದು ಹೇಳಲಾಗಿತ್ತು
ಆದರೆ, ಹೈಕಮಾಂಡ್ ಅವರ ಸ್ಪರ್ಧೆಗೆ ಸಮ್ಮತಿಸಿಲ್ಲ ಎನ್ನಲಾಗಿದೆ ಎಐಸಿಸಿ ಅಧ್ಯಕ್ಷರಾಗಿರುವ ಅವರು ದೇಶಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಬೇಕಾಗಿದೆ ಈ ಹಿನ್ನೆಲೆಯಲ್ಲಿ ಅವರು ಕಲಬುರ್ಗಿಯಿಂದ ಕಣಕ್ಕಿಳಿದಿದ್ದೆ ಆದಲ್ಲಿ ಹೆಚ್ಚಿನ ಸಮಯವನ್ನು ತಮ್ಮ ಕ್ಷೇತ್ರದಲ್ಲೇ ವಿನಿಯೋಗಿಸಬೇಕು ಹೀಗಾಗಿ ಖರ್ಗೆ ಅವರು ಚುನಾವಣೆ ಕಣಕ್ಕೆ ಇಳಿಯುವುದು ಬೇಡ ಎಂಬ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸದ್ಯ ಖರ್ಗೆ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ 2026 ರವರೆಗೆ ಇದೆ.ಈ ಹಿನ್ನೆಲೆಯಲ್ಲಿ ಅವರು ರಾಜ್ಯ ಸಭೆಯ ಸದಸ್ಯರಾಗಿ ಮುಂದುವರೆಯುವುದು ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಸೂಕ್ತ ಅಭ್ಯರ್ಥಿಗಾಗಿ ಕಾಂಗ್ರೆಸ್ ಹುಡುಕಾಟ ನಡೆಸಿದೆ. ಇದರ ನಡುವೆ ಖರ್ಗೆ ಅವರು ಅಥವಾ ಅವರ ಕುಟುಂಬ ಸದಸ್ಯರು ಈ ಕ್ಷೇತ್ರದಿಂದ ಕಣಕ್ಕಿಳಿಯುವುದು ಸೂಕ್ತ ಎಂಬ ಮಾತುಗಳು ಕೇಳಿಬರುತ್ತಿವೆ.
ಇಂತಹ ಅಭಿಪ್ರಾಯ ಕೇಳುತ್ತಿರುವ ನಡುವೆ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸಲು ಕುಟುಂಬ ಸದಸ್ಯರು ಉತ್ಸುಕರಾಗಿದ್ದಾರೆ. ರಾಧಾಕೃಷ್ಣ ಅವರೂ ಕೂಡಾ ಈ ಕುರಿತಂತೆ ಕಾರ್ಯಕರ್ತರ ಸಭೆ ನಡೆಸುತ್ತಿದ್ದು ಕ್ಷೇತ್ರದ ಹಲವೆಡೆ ಪ್ರವಾಸ ಮಾಡುತ್ತಿದ್ದಾರೆ ಆದರೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಪ್ರಮುಖ ನಾಯಕರು ರಾಧಾಕೃಷ್ಣ ಅವರ ಸ್ಪರ್ಧೆಗೆ ಒಲವು ಹೊಂದಿಲ್ಲ ಅವರು ಕಣಕ್ಕಿಳಿದಿದ್ದೆ ಆದಲ್ಲಿ ಮತದಾರರ ಮೇಲೆ ಬೇರೆ ರೀತಿಯ ಪರಿಣಾಮ ಉಂಟಾಗಲಿದೆ ಹೀಗಾಗಿ ಅದು ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಹೇಳತೊಡಗಿದ್ದಾರೆ. ಅಲ್ಲದೆ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸುವ ಕುರಿತಂತೆ ಈಗಾಗಲೇ ಎರಡು ಬಾರಿ ಆಂತರಿಕ ಸಮೀಕ್ಷೆ ನಡೆಸಲಾಗಿದೆ.ಈ ಎರಡೂ ವರದಿಗಳು ಕೂಡ ಅವರಿಗೆ ಪೂರಕವಾದ ಮಾಹಿತಿಯನ್ನು ನೀಡಿಲ್ಲ ಹೀಗಾಗಿ ಸ್ಥಳೀಯ ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಂಡಿದ್ದಾರೆ.
ಒಂದು ವೇಳೆ ಕಲಬುರ್ಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡರೆ ಅದು ಖರ್ಗೆ ಅವರ ಹಿನ್ನಡೆ ಎಂದು ಭಾವಿಸಬೇಕಾಗುತ್ತದೆ ಹೀಗಾಗಿ ಇದೊಂದು ಪ್ರತಿಷ್ಠೆಯ ವಿಷಯವಾಗಿ ಪರಿಣಮಿಸಿದೆ.ಹೀಗಾಗಿ ಖರ್ಗೆ ಅವರನ್ನೇ ಕಣಕ್ಕಿಳಿಸಲು ಸ್ಥಳೀಯ ನಾಯಕರು ಒತ್ತಾಯಿಸುತ್ತಿದ್ದಾರೆ ಆದರೆ ಖರ್ಗೆ ಅವರು ಇನ್ನೂ ಈ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಇನ್ನೊಂದು ಮೂಲಗಳ ಪ್ರಕಾರ ಸ್ವತಃ ಖರ್ಗೆ ಅವರೇ ರಾಧಾಕೃಷ್ಣ ಅವರ ಸ್ಪರ್ಧೆಗೆ ಒಲವು ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಅದು ಅನುಕೂಲಕರ ಅಲ್ಲ ಎಂಬ ವರದಿಗಳು ಅವರನ್ನು ತಲುಪಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬ ಚಿಂತೆಯಲ್ಲಿ ಬಿದ್ದಿದ್ದಾರೆ.