ಬೆಂಗಳೂರು,ಜ.20- ಅಕ್ರಮದ ಕಾರಣಕ್ಕೆ ರದ್ದುಗೊಂಡಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆಯಾಗಿದೆ.ಇದಷ್ಟೇ ಅಲ್ಲ,ಇದರ ಜೊತೆಗೆ ನಡೆಯುತ್ತಿರುವ ಆದಾಯ ತೆರಿಗೆ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ನಡೆಸುತ್ತಿರುವ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದೆ ಎಂಬ ಸುದ್ದಿಗಳು ಹರಡಿವೆ.
ಅದರೆ,ಈ ಬಗ್ಗೆ ಖಚಿತ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಆದರೆ ಪ್ರಶ್ನ ಪತ್ರಿಕೆ ಸೋರಿಕೆಯಾಗಿದೆ ಎಂದು ಅದನ್ನು ಮಾರಾಟ ಮಾಡಲು ಯತ್ನಿಸಿದ ಗುಪ್ತದಳದ ಪಿ.ಎಸ್.ಐ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿರಬಹುದೆಂಬ ಶಂಕೆ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪರೀಕ್ಷೆಗೆ ಸಂಬಂಧಪಟ್ಟಂತೆ ಗುಪ್ತದಳದ ಸಬ್ ಇನ್ಸ್‍ಪೆಕ್ಟರ್‍ರೊಬ್ಬರು ಪ್ರಶ್ನೆಪತ್ರಿಕೆನೀಡುವುದಾಗಿ ಪರೀಕ್ಷಾರ್ಥಿಗಳಿಗೆ ಆಮಿಷವೊಡ್ಡುವ ಆಡಿಯೋ ವೈರಲ್ ಆಗಿತ್ತು. ಆಡಿಯೋ ಗಮನಿಸಿದ ಪರೀಕ್ಷಾರ್ಥಿಗಳು ಹಾಗೂ ಕೆಲವು ಪೋಷಕರು ನಿನ್ನೆ ರಾತ್ರಿ ಬೆಂಗಳೂರಿನ ಚಂದ್ರಾ ಲೇ ಔಟ್ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ಪಿಎಸ್‍ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದರು.
ಆ ದೂರನ್ನು ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾಯಿಸಿದ್ದಾರೆ.
ಆಡಿಯೋ ವೈರಲ್ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ಪಿಎಸ್‍ಐಯನ್ನು ವಶಕ್ಕೆ ಪಡೆದು ಆಡಿಯೋ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆಯೇ ಅಥವಾ ಯಾವುದಾರೂ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವೈರಲ್ ಆಗಿರುವ ಆಡಿಯೋದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಅಲ್ಲದೆ ಪ್ರಶ್ನೆಪತ್ರಿಕೆ ಖುದ್ದಾಗಿ ಕೊಡುವುದಾಗಿ ಹೇಳಿರುವುದು, ಪೋಸ್ಟಿಂಗ್ ಕೊಡಿಸುವುದಾಗಿಯೂ ಪಿಎಸ್‍ಐ ಆಮಿಷವೊಡ್ಡಿರುವುದು ಅಭ್ಯರ್ಥಿಗಳಲ್ಲಿ ಆತಂಕವುಂಟು ಮಾಡಿದೆ.
ತನಿಖೆ ನಡೆದಿದಿ:
ಈ ಬಗ್ಗೆ ಸ್ಪಷ್ಟನೆ ನೀಡಿರುವ ಗೃಹ ಸಚಿವ ಡಾ. ಪರಮೇಶ್ವರ, ‘ಆರೋಪದ ಹಿನ್ನೆಲೆಯಲ್ಲಿ ಸಿಸಿಬಿಯವರು ಪಿಎಸ್‌ಐ ಅನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಅಕ್ರಮದ ಬಗ್ಗೆ ಮಾಹಿತಿ ಸಂಗ್ರಹಿಸಲು ನಕಲಿ ಕರೆ ಮಾಡಿರುವುದಾಗಿ ಆರೋಪಿತ ಹೇಳಿಕೆ ನೀಡಿದ್ದಾನೆ. ಸತ್ಯಾಸತ್ಯತೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಆತಂಕಪಡುವುದು ಬೇಡ’ ಎಂದರು.
3 Comments
анонимный. вывод. из. запоя. ростов. http://vyvod-iz-zapoya-rostov111.ru .
снять ломку снять ломку .
семена купить недорого семена купить недорого .