Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಸ್ತಕ್ಷೇಪಕ್ಕೆ ಬಲಿಯಾದ ನಿಗಮ-ಮಂಡಳಿ, ಕಾರ್ಯಕರ್ತರು ವಿಲವಿಲ | Nigama Mandali
    ಪ್ರಚಲಿತ

    ಹಸ್ತಕ್ಷೇಪಕ್ಕೆ ಬಲಿಯಾದ ನಿಗಮ-ಮಂಡಳಿ, ಕಾರ್ಯಕರ್ತರು ವಿಲವಿಲ | Nigama Mandali

    vartha chakraBy vartha chakraJanuary 22, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಜ, 22: ಲೋಕಸಭೆ ಚುನಾವಣೆಗೆ ಮುನ್ನ ನಿಗಮ ಮಂಡಳಿಗಳ (Nigama Mandali) ನೇಮಕಾತಿ ಆದೇಶ ಹೊರಡಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಬಹುದಿನದ ಕನಸು ನನಸಾಗಲಿದೆ ಎಂದು ಭಾವಿಸಿದವರಿಗೆ ಇದೀಗ ಕಾಣದ ಕೈಗಳ ಹಸ್ತಕ್ಷೇಪ ನಿರಾಸೆ ತಂದೊಡ್ಡಿದೆ.
    ವಿಧಾನಸಭೆಗೆ ಸತತವಾಗಿ ಆಯ್ಕೆಯಾಗುತ್ತಿರುವ ಕೆಲವು ಪ್ರಭಾವಿ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರನ್ನು ಪ್ರಭಾವಿ ನಿಗಮ ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಮೂಲಕ ಸಮಾಧಾನ ಪಡಿಸಲು ತೀರ್ಮಾನಿಸಲಾಗಿತ್ತು.

    ಇದರ ಜೊತೆಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನಿವಾರ್ಯ ಕಾರಣಗಳಿಂದ ಸ್ಪರ್ಧಿಸಲಾಗದೆ ಹೈಕಮಾಂಡ್ ಆದೇಶವನ್ನು ಪಾಲಿಸಿದ್ದ ಕೆಲವು ನಾಯಕರು ಮತ್ತು ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ನೀಡುವ ಮೂಲಕ ಅವರನ್ನು ಗುರುತಿಸುವ ಕೆಲಸ ಮಾಡಲು ತೀರ್ಮಾನಿಸಲಾಗಿತ್ತು.
    ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಹಲವು ನಾಯಕರ ಜೊತೆ ಸತತ ಸಮಾಲೋಚನೆ ನಡೆಸಿ ಪಟ್ಟಿ ಒಂದನ್ನು ಸಿದ್ಧಪಡಿಸಿದ್ದರು.
    ನಿಗಮ– ಮಂಡಳಿಗಳಿಗೆ 37 ಶಾಸಕರು, 39 ಕಾರ್ಯಕರ್ತರ ಪಟ್ಟಿ ಸಿದ್ಧಪಡಿಸಿ,ಹೈಕಮಾಂಡ್‌ ಅನುಮೋದನೆ ನೀಡಲಾಗಿತ್ತು.ಈ ಪಟ್ಟಿಯ ಬಗ್ಗೆ ಹಲವು ಸುತ್ತಿನ ಸಮಾಲೋಚನೆ ನಡೆಸಿದ ಹೈಕಮಾಂಡ್ ಅನುಮೋದನೆ ನೀಡಿತ್ತು.‌‌ಇದಾದ ನಂತರ ಇನ್ನೇನು ಅಧಿಕೃತವಾಗಿ ಆದೇಶದ ಮೂಲಕ ನೇಮಕಾತಿ ನಿರ್ಧಾರ ಹೊರಬೀಳಲಿದೆ ಎಂದು ಹೇಳಲಾಗಿತ್ತು.

    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಂತೂ‌ ಕೆಲವೇ ಸೆಕೆಂಡ್ ಗಳಲ್ಲಿ ನೇಮಕಾತಿ ಆದೇಶ ಹೊರಬೀಳಲಿದೆ ಎಂದು ಹೇಳಿದರು. ಈ ಹೇಳಿಕೆ ಹೊರಬಿದ್ದು ನಾಲ್ಕು ದಿನಗಳಾದರೂ ನೇಮಕಾತಿ ಆದೇಶ ಹೊರಬೀಳಲಿಲ್ಲ.ಈಗ-ಆಗ ನೇಮಕ ಆದೇಶ ಬರಲಿದೆ ಎಂದು ಕಾದು ಕುಳಿತಿದ್ದ ಆಕಾಂಕ್ಷಿಗಳು ಕಾದು ಕುಳಿತದ್ದಷ್ಟೇ ಬಂತು ಆದೇಶ ಹೊರಬೀಳಲಿಲ್ಲ.
    ರಾಜ್ಯ ನಾಯಕರು ಹೈಕಮಾಂಡ್ ಗೆ ಮಾಡಿದ್ದ ಶಿಫಾರಸಸ್ಸಿನ ಪಟ್ಟಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರ ಸಹಿ ಹಾಕಿ ರವಾನಿಸಿದ್ದರು.ಅವರ ಸಹಿ ಹೊಂದಿದ್ದ ಪಟ್ಟಿ ಬಿಡುಗಡೆ ಆಗುವ ಮೊದಲೇ ಪಕ್ಷದ ವಲಯದಲ್ಲಿ ಬಹಿರಂಗವಾಗಿತ್ತು.

    ಆದರೆ, ಇನ್ನೇನು ಪಟ್ಟಿ ಪ್ರಕಟ ಸರ್ಕಾರದ ಆದೇಶದೊಂದಿಗೆ ಹೊರ ಬರಲಿದೆ ಎನ್ನುತ್ತಿರುವಾಗ ಅದು ಹೊರಬರಲಿಲ್ಲ.ಇದಕ್ಕೆ ಪ್ರಮುಖ ಕಾರಣ ಕಾಣದ ಕೈಗಳ ಹಸ್ತಕ್ಷೇಪ ಎನ್ನಲಾಗಿದೆ. ಎಐಸಿಸಿ ಅನುಮೋದಿಸಿ ವೇಣುಗೋಪಾಲ್ ಅವರು ರವಾನಿಸಿದ್ದ ಪಟ್ಟಿಯಲ್ಲಿ ಕೆಲವು ‌ಹೆಸರುಗಳು ನುಸುಳಿದ್ದವು.
    ಕಲಬುರಗಿ ಭಾಗದ ಲಲಿತ್ ರಾಘವ್, ಸಿ. ನರೇಂದ್ರ, ಮಝರ್ ಖಾನ್, ಜಗದೇವ ಗುತ್ತೆದಾರ ಅವರು ಹೆಸರು ನಿಗಮ ಮಂಡಳಿ ಪಟ್ಟಿಯಲ್ಲಿತ್ತು. ತಾವು‌ ಪಟ್ಟಿ ರಚನೆ ಸಮಯದಲ್ಲಿ ಹೈಕಮಾಂಡ್ ಜೊತೆ ನಡೆದ ಚರ್ಚೆಯಲ್ಲಿ ಈ ಹೆಸರುಗಳ ಪ್ರಸ್ತಾಪವಾಗಲಿಲ್ಲ. ರಾಜ್ಯದ ನಾಯಕರ ಚರ್ಚೆ ಸಮಯದಲ್ಲೂ ಇವುಗಳು ಇರಲಿಲ್ಲ ಈಗ ಏಕಾಏಕಿ ಯಾವುದೇ ಮಾಹಿತಿಯನ್ನೇ ನೀಡದೆ ಕೆಲವು ಕಾರ್ಯಕರ್ತರ ಹೆಸರನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದು ಅಸಮಾಧಾನಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಲು ನಿರಾಕರಿಸಿದ್ದಾರೆ.ಇದಕ್ಕೆ ಡಿ.ಕೆ.ಶಿವಕುಮಾರ್ ಕೂಡ ಸಹಮತ ವ್ಯಕ್ತಪಡಿಸಿದರು ಎನ್ನಲಾಗಿದ್ದು, ಇದೀಗ ಪಟ್ಟಿ ಗೊಂದಲವಾಗಿ ಶೈತ್ಯಾಗಾರ ಸೇರಿದೆ.

    Verbattle
    Verbattle
    Verbattle
    Government Karnataka m NDA News Nigama Mandali ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ? | Karnataka Police
    Next Article ರಾಮಭಕ್ತರಿಗೆ ಅರಣ್ಯ ಮಂತ್ರಿ ಖಂಡ್ರೆ ಕಿವಿಮಾತು | Eshwar Khandre
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Exeluw on February 13, 2026 5:45 am

      betmgm РђРљ betmgm Missouri mgm sportsbook promo

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಮಕ್ಕಳ ಮಾರಾಟ ಜಾಲ ಪತ್ತೆ.
    • playboy888_ptpl on ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    • 1win_dySi on ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.