Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾವೋಸ್ ನಿಂದ ಹರಿದು ಬಂದ ಬಂಡವಾಳ | Davos
    Viral

    ದಾವೋಸ್ ನಿಂದ ಹರಿದು ಬಂದ ಬಂಡವಾಳ | Davos

    vartha chakraBy vartha chakraJanuary 24, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.24- ದಾವೋಸ್ (Davos) ನಲ್ಲಿ ನಡೆದ ಜಾಗತಿಕ ಆರ್ಥಿಕ ಮೇಳದಲ್ಲಿ ರಾಜ್ಯ ಸರ್ಕಾರ ಜಾಗತಿಕ ಕಂಪನಿಗಳ ಜೊತೆಗೆ 23,000 ಕೋಟಿ ರೂ.ಮೊತ್ತದ 8 ತಿಳಿವಳಿಕೆ ಒಪ್ಪಂದಗಳಿಗೆ ಸಹಿ ಹಾಕಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿನ ಆಚೆಗೂ ಕೈಗಾರಿಕೆಗಳ ಅಭಿವೃದ್ಧಿಗೆ ಸಮಾನ ಕೊಡುಗೆ ನೀಡಲು ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮ ವಹಿವಾಟು ಆರಂಭಿಸಲು ಹಲವಾರು ಕಂಪನಿಗಳು ಆಸಕ್ತಿ ತೋರಿಸಿವೆ ಎಂದು ತಿಳಿಸಿದರು.

    ವಿಜಯಪುರ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಮತ್ತಿತರ ಸ್ಥಳಗಳಲ್ಲಿ ಕೈಗಾರಿಕೆಗಳ ಸಮಾನ ಅಭಿವೃದ್ಧಿ ಗುರಿಗೆ ಕೊಡುಗೆ ನೀಡುವ ಹಲವಾರು ಉಪಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
    ವಿಜಯಪುರದಲ್ಲಿ 300 ಕೋಟಿ ರೂ.ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸುವ ಉದ್ದೇಶಕ್ಕೆ ಬಂಡವಾಳ ಹೂಡಿಕೆ ಮಾಡಲು ಲುಲು ಸಮೂಹವು ಯೋಜಿಸಿದೆ.
    ಬಿಎಲ್ ಅಗ್ರೊ ಸಂಸ್ಥೆ ವಿಜಯಪುರದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣಾ ಘಟಕವನ್ನು ಆರಂಭಿಸಲಿದೆ. ದೇಶಿ ಮತ್ತು ರಫ್ತು ಮಾರುಕಟ್ಟೆಗಳಿಗೆ ಕಚ್ಚಾ ವಸ್ತು ಪೂರೈಸಲು ಸ್ಥಳೀಯ ಆಹಾರ ಉತ್ಪನ್ನಗಳನ್ನು ಖರೀದಿಸಿ ಅವುಗಳ ಶ್ರೇಣೀಕರಣ, ವಿಂಗಡಣೆ ಮತ್ತು ಪ್ಯಾಕೇಜಿಂಗ್ ಉದ್ದೇಶಕ್ಕೆ ಈ ಘಟಕ ನೆರವಾಗಲಿದೆ ಎಂದು ವಿವರಿಸಿದರು.

    ಬೆಂಗಳೂರಿನಲ್ಲಿ 100 ಮೆಗಾವ್ಯಾಟ್ ಸಾಮರ್ಥ್ಯದ ಬೃಹತ್ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್ ವಕ್ರ್ಸ್ 20,000 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ಪ್ರಕಟಿಸಿದೆ. ಇದರಿಂದ 1000 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ ಡಿಜಿಟಲ್ ಕೌಶಲ್ಯ ವೃದ್ಧಿ ಪ್ರಕ್ರಿಯೆ ಹಮ್ಮಿಕೊಳ್ಳಲು ಮೈಕ್ರೊಸಾಫ್ಟ್ ವಾಗ್ದಾನ ಮಾಡಿದೆ. ಗ್ರಾಮೀಣ ಪ್ರದೇಶ ಕೇಂದ್ರಿತ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಹಿಟಾಚಿ ಕಂಪನಿಯು ಎಂಒಯುಗೆ ಸಹಿ ಹಾಕಿದೆ ಎಂದರು.
    ಎಚ್‍ಪಿ ಎಂಟರ್‌ಪ್ರೈಸ್, ಬೆಂಗಳೂರಿನಲ್ಲಿರುವ ತನ್ನ ಕ್ಯಾಂಪಸ್‍ನ ಸಾಮರ್ಥ್ಯ ಹೆಚ್ಚಿಸಿ ಜಾಗತಿಕವಾಗಿ ಅತಿದೊಡ್ಡ ಎಚ್‍ಪಿ ಕ್ಯಾಂಪಸ್ ರೂಪಿಸಲು ಎರಡು ಹೊಸ ಕಟ್ಟಡಗಳನ್ನು ಪ್ರಾರಂಭಿಸಲು ಸಜ್ಜಾಗಿದೆ.

    ಎಬಿ ಇನ್‍ಬೇವ್: ಎಬಿ ಇನ್‍ಬೇವ್ ಕಂಪನಿಯು 400 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ, ಕರ್ನಾಟಕದಲ್ಲಿ ತನ್ನ ಅತ್ಯಾಧುನಿಕ ಮದ್ಯ ತಯಾರಿಕಾ ಘಟಕದ ಸಾಮಥ್ರ್ಯ ವಿಸ್ತರಿಸುವ ಗುರಿ ಹೊಂದಿದೆ.ಎಚ್‍ಸಿಎಲ್, ಎಚ್‍ಪಿ. ಸಿಸ್ಕೊ ಮತ್ತು ಸೋನಿಯಂತಹ ಕಂಪನಿಗಳ ಜೊತೆಗಿನ ಪಾಲುದಾರಿಕೆಯ ಸಮಾಲೋಚನೆಗಳಲ್ಲಿ ಕೃತಕ ಬುದ್ಧಿಮತ್ತೆ ಪ್ರಮುಖ ವಿಷಯವಾಗಿ ಹೊರಹೊಮ್ಮಿದೆ. ಸುಸ್ಥಿರತೆ ಮತ್ತು ನಾಗರೀಕ ಸೇವೆಗಳು ಸಹ ಈ ಚರ್ಚೆಗಳಲ್ಲಿ ಮಹತ್ವದ ವಿಷಯಗಳಾಗಿದ್ದವು. ವಿವಿಧ ನವೋದ್ಯಮಗಳು ಮತ್ತು ಸ್ಥಾಪಿತ ಕಂಪನಿಗಳ ಜೊತೆಗೆ ಭವಿಷ್ಯದ ನಡೆಗಳ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ವಿವರಿಸಿದರು.

    Verbattle
    Verbattle
    Verbattle
    davos davos summit ಧಾರವಾಡ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರದಿಂದ ರಾಮಮಂತ್ರ ಜಪ | Ram Mandir
    Next Article DCM ಹುದ್ದೆ ಬೇಡಿಕೆಗೆ ಸದ್ಯಕ್ಕೆ ಪುಲ್ ಸ್ಟಾಪ್
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Ytcidw on February 13, 2026 4:20 pm

      betmgm Oregon online casino betmgm play betmgm NY

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sdaswn on ಸೂರಜ್ ರೇವಣ್ಣ ಯಾಕೆ ಹೀಗೆ.?
    • LarryCax on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • LinwoodGah on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.