Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಡಲು ದುಡ್ಡೇ ಇಲ್ಲ, ಆದರೂ, ಸ್ಟಾರ್ ಹೋಟೆಲ್ ನಲ್ಲಿ ಮಜಾ | Delhi News
    Trending

    ಕೊಡಲು ದುಡ್ಡೇ ಇಲ್ಲ, ಆದರೂ, ಸ್ಟಾರ್ ಹೋಟೆಲ್ ನಲ್ಲಿ ಮಜಾ | Delhi News

    vartha chakraBy vartha chakraJanuary 31, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಜ.31- ಜೇಬಿನಲ್ಲಿ ‌ಹಣವಿಲ್ಲದಿದ್ದರೆ ಹೋಟೆಲ್ ನಲ್ಲಿ ಅರ್ಧ ಕಾಫಿ ಕುಡಿಯಲು ಹಿಂಜರಿಯುವ ಎಷ್ಟೋ ಉದಾಹರಣೆ ಕಂಡು,ಕೇಳಿದ್ದೇವೆ. ಅದರೆ ಇಲ್ಲೊಬ್ಬ ಮಹಿಳೆ 41 ರೂಪಾಯಿ ಇಟ್ಟುಕೊಂಡು ಪಂಚತಾರಾ ಹೋಟೆಲ್ ನಲ್ಲಿ ತಂಗಿ ಬಿಲ್ ಪಾವತಿಸದೆ ರಂಪಾಟ ಮಾಡಿದ್ದಾರೆ ರಾಜಧಾನಿ ನವದೆಹಲಿಯ ಐಷಾರಾಮಿ ಹೋಟೆಲ್ ಗೆ ಬಂದ ಆಂಧ್ರ ಮೂಲದ ಮಹಿಳೆಯೊಬ್ಬರು,ತಾವು ವ್ಯವಹಾರ ಕಾರಣಕ್ಕೆ ಬಂದಿದ್ದೇನೆ ತಮ್ಮ ಹೋಟೆಲ್ ನಲ್ಲಿ ಉಳಿದುಕೊಳ್ಳುತ್ತೇನೆ ಎಂದು ಹೇಳಿ,ಕೆಲವು ದಾಖಲೆಗಳನ್ನು ನೀಡಿ‌ ಕೊಠಡಿ ಪಡೆದುಕೊಂಡಿದ್ದಾರೆ.

    ಇಶಾ ದವೆ ಹೆಸರಿನಲ್ಲಿ ಗುರತಿನ ಚೀಟಿ‌ ಸೇರಿದಂತೆ ಹಲವು ದಾಖಲೆ ನೀಡಿದ್ದಾರೆ.
    ದೆಹಲಿಯ ಏರೋಸಿಟಿಯಲ್ಲಿರುವ ಪುಲ್‌ಮನ್ ಹೋಟೆಲ್ ನಲ್ಲಿ 15 ದಿನಗಳ ಕಾಲ ತಂಗಿದ್ದ ಈ ಮಹಿಳೆ ಹಲವಾರು ಸೇವೆ ಪಡೆದಿದ್ದಾರೆ.ಇದಕ್ಕೆ ಹೋಟೆಲ್ ಬರೋಬ್ಬರಿ 6 ಲಕ್ಷ ರೂ. ಬಿಲ್ ಮಾಡಿದೆ.
    ಈ ಹಣವನ್ನು ಐಸಿಐಸಿಐ ಬ್ಯಾಂಕ್ ಯುಪಿಐ ಆ್ಯಪ್ ಮೂಲಕ ಹಣ ಕಳುಹಿಸುತ್ತಿರುವುದಾಗಿ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾರೆ.
    ಹಣ ಪಾವತಿಯಾಗಿದೆ ಎಂದು ನಂಬಿದ ಹೋಟೆಲ್ ಸಿಬ್ಬಂದಿ ಮಹಿಳೆ ಚೆಕ್ ಔಟ್ ಮಾಡಲು‌ ನೆರವು ನೀಡಿದ್ದಾರೆ. ಅವರು ಹೋಟೆಲ್ ಬಿಟ್ಟು ಹೋದ ನಂತರ ಹೋಟೆಲ್ ನ ಖಾತೆ ನೋಡಿದಾಗ ಬ್ಯಾಂಕ್‌ಗೆ ಯಾವುದೇ ಹಣ ಪಾವತಿಯಾಗಿಲ್ಲ ಎಂದು ತಿಳಿಸಿದೆ.

    ಕೂಡಲೇ ಹೋಟೆಲ್ ಸಿಬ್ಬಂದಿ ಆಕೆಯನ್ನು ಸಂಪರ್ಕಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ, ಆಕೆ ಸಂಪರ್ಕಕ್ಕೆ ಸಿಗದ ಕಾರಣ ಪೊಲೀಸರಿಗೆ ದೂರು ನೀಡಿದ್ದಾರೆ.
    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯನ್ನು ಪತ್ತೆ ಹಚ್ಚಿ ಪರಿಶೀಲನೆಗೊಳಪಡಿಸಿದಾಗ ಎಲ್ಲರೂ ಶಾಕ್ ಆಗಿದ್ದಾರೆ.ಹೋಟೆಲ್ ಬಿಲ್ ಪಾವತಿಸದೆ ಓಡಿ ಹೋಗಿದ್ದ ಮಹಿಳೆಯ ಬ್ಯಾಂಕ್ ಖಾತೆಯಲ್ಲಿದ್ದ ಹಣ ನೋಡಿದರೆ ಆಕೆಯ ಖಾತೆಯಲ್ಲಿ ಕೇವಲ 41 ರೂ. ಇರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಇಶಾ ದವೆ ಹೆಸರಿನ ಈ ಮಹಿಳೆಯ ಹೆಸರು ಝಾನ್ಸಿ ರಾಣಿ ಸ್ಯಾಮ್ಯುಯೆಲ್.ಆದರೆ ಈಕೆ ಇಶಾ ದವೆಹೆಸರಿನಲ್ಲಿ ನಕಲಿ ಗುರುತಿನ ಚೀಟಿಯನ್ನು ಸೃಷ್ಟಿಸಿ ಹೋಟೆಲ್‌ನ ಸ್ಪಾ ಸೌಲಭ್ಯದಲ್ಲಿ 2,11,708 ರೂಪಾಯಿ ಮೌಲ್ಯದ ಸೇವೆಗಳನ್ನು ಪಡೆದಿದ್ದಾಳೆ ಎಂದು ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ.

    ಆಕೆ ಬಳಸಿರುವ ಆ್ಯಪ್ ಬಗ್ಗೆ ಸಂಶಯವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಹಿಳೆ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
    ತಾನು ವೈದ್ಯೆ ಮತ್ತು ತನ್ನ ಪತಿಯೂ ವೈದ್ಯನಾಗಿದ್ದು ನ್ಯೂಯಾರ್ಕ್‌ನಲ್ಲಿ ವಾಸವಾಗಿರುವುದಾಗಿ ಪೊಲೀಸರಿಗೆ ಆರಂಭದಲ್ಲಿ ತಿಳಿಸಿದ್ದಾಳೆ. ಆದರೆ ಆ ಮಾಹಿತಿ ಸತ್ಯವೋ, ಸುಳ್ಳೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೋಟೆಲ್ ಸಿಬ್ಬಂದಿ ಪಿಸಿಆರ್ ಕರೆ ಮಾಡಿದ ನಂತರ ಜನವರಿ 13 ರಂದು ದೆಹಲಿ ಪೊಲೀಸರು ಸ್ಯಾಮ್ಯುಯೆಲ್ ಅವರನ್ನು ಬಂಧಿಸಿದ್ದರು. ಐಪಿಸಿ ಸೆಕ್ಷನ್ 419, 468, 471 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    #delhi News Politics Trending ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಾಡಬಾರದ್ದನ್ನು ಮಾಡಿ ತಗಲಾಕ್ಕೊಂಡ | RPC Layout
    Next Article ಕರ್ನಾಟಕವನ್ನು ನಂಬರ್ ಒನ್ ಮಾಡಲು ಶ್ರಮ
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    1 Comment

    1. Ooykmo on February 12, 2026 1:59 pm

      betmgm Hawaii https://betmgm-play.com/ betmgm Indiana

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • RobertberMa on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LarryCax on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.