ಬೆಂಗಳೂರು, ಫೆ.05 – ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ (Shakti Scheme) 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ ಸಂಸ್ಥೆ ವಿನ್ಯಾಸಗೊಳಿಸಿರುವ ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಬಸ್ಸುಗಳನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು ಈ ಸಾಧನೆ ಟೀಕಾಕಾರರಿಗೆ ಉತ್ತರ ಎಂದು ಹೇಳಿದರು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು ಇಂದು ನೂರು ಬಸ್ಸುಗಳ ಬಿಡುಗಡೆಯಾಗಿದೆ.
ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿದೆ. ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕೂಡ ಕೆಲವು 3800 ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ ಸಂಸ್ಥೆಗೆ 5800 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ಈ ರಾಜ್ಯದ ಜನರಿಗೆ ಸುರಕ್ಷಿತ ಮತ್ತು ಸರಾಗ ಪ್ರಯಾಣ ಮಾಡಲು ಅಗತ್ಯ ಅನುಕೂಲಗಳನ್ನು ಮಾಡಿಕೊಡಲಿದೆ ಎಂದರು.
ವಿಮಾ ಸೌಲಭ್ಯ:
ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯವನ್ನು 1 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕರ್ತವ್ಯದ ವೇಳೆ ಮೃತಪಡುವ ಸಿಬ್ಬಂದಿಗಳಿಗೆ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.
ಚುನಾವಣಾ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಕ.ರ.ಸಾ.ಸಂ ಮತ್ತು ಇತರೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸುತ್ತೇವೆ ಎಂದು ಹೇಳಿದ್ದೆವು. ಬೆಲೆಯೇರಿಕೆ, ಹಣದುಬ್ಬರ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವ ಪರಿಸ್ಥಿತಿಯಲ್ಲಿ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಿದ್ದೇವೆ ಎಂದರು.
7 Comments
вывод из запоя круглосуточно ростов на дону вывод из запоя круглосуточно ростов на дону .
снятие ломок snyatie-lomki-narkolog.ru .
снятие ломок https://www.snyatie-lomki-narkolog.ru .
неотложная наркологическая помощь http://skoraya-narkologicheskaya-pomoshch12.ru .
лечение отравления алкоголем [url=http://xn—–7kcablenaafvie2ajgchok2abjaz3cd3a1k2h.xn--p1ai]лечение отравления алкоголем[/url] .
Крайне советую Бюстгальтер без бретелек
https://web.snauka.ru/site/stati-tematicheskie/prostatit-u-muzhchin-prichiny-simptomy-i-lechenie