ಬೆಂಗಳೂರು. ಫೆ,6: ರಾಜಕೀಯ ಕಾರಣಕ್ಕೆ ಮಾಧ್ಯಮಗಳಲ್ಲಿ ದೊಡ್ಡ ಜಾಹೀರಾತು ನೀಡುವ ಮೂಲಕ ರಾಜ್ಯ ಸರ್ಕಾರ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ಆಪಾದಿಸಿದೆ.
ಈ ಕುರಿತಂತೆ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ನಿಯೋಗವು ರಾಜಭವನಕ್ಕೆ ಭೇಟಿ ನೀಡಿ ರಾಜ್ಯ ಸರಕಾರದ ವಿರುದ್ಧ ದೂರು ಸಲ್ಲಿಸಿತು.
ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲು ರಾಜ್ಯದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದರು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಮತ್ತು ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಈ ಜಾಹೀರಾತಿನ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಮನವಿ ಮಾಡಿದೆ.
ನನ್ನ ತೆರಿಗೆ ನನ್ನ ಹಕ್ಕು’ ಎಂಬ ಶೀರ್ಷಿಕೆಯ ಈ ಜಾಹೀರಾತಿನ ಮೂಲಕ ಕೇಂದ್ರ ಸರಕಾರದ ವಿರುದ್ಧ ದೆಹಲಿ ಚಲೋ ನಡೆಸಲು ಕರೆ ನೀಡಿದ್ದು ಆಘಾತಕರ ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಅಂಕಿಅಂಶಗಳನ್ನು ಈ ಜಾಹೀರಾತು ಒಳಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡಲು ಈ ಜಾಹೀರಾತು ಕೊಟ್ಟಿದ್ದಾರೆ ಎಂದು ಆಪಾದಿಸಿದೆ.


1 Comment
The jackpot is hiding — make it regret that – https://xglimepiride.com , The table flips when you walk in .