Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್
    Trending

    ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಹುಷಾರ್

    vartha chakraBy vartha chakraFebruary 7, 202426 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.7- ಕೌಟುಂಬಿಕ ಕಾರಣ, ಶೈಕ್ಷಣಿಕ ಒತ್ತಡ, ಬದಲಾದ ಜೀವನ ಶೈಲಿ ಸೇರಿದಂತೆ ಹಲವು ಕಾರಣಗಳಿಂದ ಬೆಂಗಳೂರು ನಗರದಲ್ಲಿ  ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತಾಗಿ ಹೊರಬಿದ್ದಿರುವ ಅಂಕಿ ಅಂಶಗಳು ಆತಂಕ ಮೂಡಿಸುತ್ತವೆ.
    ಅದರಲ್ಲೂ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಮನೆ ಬಿಟ್ಟು ಓಡಿ ಹೋಗುತ್ತಿರುವುದು ಆತಂಕಕಾರಿ ವಿದ್ಯಮಾನವಾಗಿದೆ.

    ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈ ಕುರಿತಂತೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
    ಟಿವಿ ನೋಡಲು ರಿಮೋಟ್ ಕೊಡಲಿಲ್ಲ,ಮೊಬೈಲ್ ಕೊಡಿಸಿಲ್ಲ, ಶಾಲೆಯಲ್ಲಿ ಒಳ್ಳೆಯ ಅಂಕ ಬಂದಿಲ್ಲ, ತಂದೆ-ತಾಯಿ ಜಗಳ, ಕೌಟುಂಬಿಕ ಕಿರಿಕಿರಿಯಿಂದ ಬೇಸತ್ತು ಮಕ್ಕಳು ಮನೆ ಬಿಟ್ಟು ಹೋಗುವಂತಹ ನಿರ್ಧಾರಗಳನ್ನು ಮಾಡುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
    ಕಳೆದ ಒಂದು ವರ್ಷದಲ್ಲಿ ಮಕ್ಕಳು ಕಾಣೆಯಾಗುತ್ತಿರುವ ಪ್ರಕರಣಗಳಲ್ಲಿ ಶೇ 34% ರಷ್ಟು ಏರಿಕೆಯಾಗಿದೆ.‌ 2020ರಲ್ಲಿ 421 ಗಂಡು ಮಕ್ಕಳು ನಾಪತ್ತೆಯಾಗಿದ್ದರೆ 1136 ಹೆಣ್ಣು ಮಕ್ಕಳು ಮನೆ ಬಿಟ್ಟು ಹೋಗಿದ್ದರು. ಈಮಕ್ಕಳ ಪೈಕಿ 21 ಗಂಡು, 37 ಹೆಣ್ಣು ಮಕ್ಕಳನ್ನು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ.

    2021ರಲ್ಲಿ 488 ಗಂಡು, 1630 ಹೆಣ್ಣುಮಕ್ಕಳು ನಾಪತ್ತೆಯಾಗಿದ್ದರು.ಈ ಪೈಕಿ 28 ಗಂಡು, 64 ಹೆಣ್ಣು ಮಕ್ಕಳು ಪತ್ತೆ ಇನ್ನೂ ಆಗಿಲ್ಲ ಎಂದು ಚೈಲ್ಡ್ ರೈಟ್ ಸಂಸ್ಥೆಯು ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.
    2022 – 23 ರ ಸಾಲಿನಲ್ಲಿ ನಾಪತ್ತೆಯಾಗಿರುವ 5,144 ಮಕ್ಕಳ ಪೈಕಿ 934 ಮಕ್ಕಳನ್ನ ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ.ಈ ಮೂಲಕ 347 ಗಂಡು ಹಾಗೂ 853 ಹೆಣ್ಣು ಮಕ್ಕಳು ಸೇರಿ ಒಟ್ಟು 1200 ನಾಪತ್ತೆ ಪ್ರಕರಣಗಳಲ್ಲಿ ಮಕ್ಕಳನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ.
    ಮಕ್ಕಳ ನಾಪತ್ತೆಗೆ ಕೌಟುಂಬಿಕ ಒತ್ತಡವೇ ಕಾರಣ ಎಂದು ಚೈಲ್ಡ್ ರೈಟ್ ಸಂಸ್ಥೆ ತಿಳಿಸಿದೆ.

    ಕೌಟುಂಬಿಕ ಕಾರಣಗಳು ಶೈಕ್ಷಣಿಕ ಒತ್ತಡ ತಾಳಲಾರದೇ ಮನೆ ಬಿಟ್ಟು ಹೋಗಲು ಮಕ್ಕಳು ನಿರ್ಧರಿಸುತ್ತಿದ್ದಾರೆ. ‌ಕೋವಿಡ್ ನಂತರ ಶೈಕ್ಷಣಿಕವಾಗಿ ಬರುವ ಒತ್ತಡಕ್ಕೆ ಹೆದರಿ ಹೋಗಿರುವ ಮಕ್ಕಳು, ಮನೆಯಲ್ಲೂ ಅತ್ಯುತ್ತಮ ಅಂಕಗಳನ್ನು ಪಡೆಯುವಂತೆ ಒತ್ತಡ ಕೇಳಿ ಬರಲಿದ್ದು,ಮನೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯುವುದನ್ನು ಪೋಷಕರು ಕಡಿಮೆ ಮಾಡಿದ್ದಾರೆ. ಮನಸ್ಸಿನ ದುಗುಡ ಹೇಳಿಕೊಳ್ಳಲಾರದೆ ಮಕ್ಕಳಿಗೆ ಒತ್ತಡ ಹೆಚ್ಚಳವಾಗಿದೆ‌. ಇದರಿಂದ ತಪ್ಪಿಸಿಕೊಳ್ಳಲು ಮಕ್ಕಳು ಮನೆ ಬಿಟ್ಟು ಹೋಗುತ್ತಿದ್ದಾರೆ ಎಂದು ಅಧ್ಯಯನ ವರದಿ ಹೇಳುತ್ತದೆ.
    ಒಟ್ಟಿನಲ್ಲಿ ಮಕ್ಕಳು ಕಾಣೆಯಾಗುವ ಪ್ರಕರಣ ಏರಿಕೆಯಾಗುತ್ತಿದ್ದು, ಒಂದು ಸರಿ ಮನೆ ಬಿಟ್ಟು ಹೋಗುವ ಮಕ್ಕಳಿಗೆ ಅಭ್ಯಾಸವಾದರೆ, ಅದನ್ನೇ ಪದೇ ಪದೇ ಮಾಡಲಿದ್ದು, ಈ ಅಭ್ಯಾಸ ತಪ್ಪಿಸುವ ಕಡೆ ಪೊಷಕರು ಗಮನ ಹರಿಸಬೇಕಿದೆ.

    crime News Trending ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕರಾವಳಿಯಲ್ಲಿ ಹೆಡೆ ಎತ್ತಿದ ನಕ್ಸಲ್ ಘಟಸರ್ಪಗಳು | Coastal Karnataka
    Next Article ನಿರ್ಮಲಾ ಸೀತರಾಮನ್ ನಿಲುವಿಗೆ ರಾಮಲಿಂಗಾರೆಡ್ಡಿ ಆಕ್ರೋಶ | Ramalinga Reddy
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TimothySmose on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • HerbertNub on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • LewisWhoto on ಬಹಿರಂಗ ಚರ್ಚೆಗೆ ಬರುವಂತೆ ಅಮಿತ್ ಶಾ ಗೆ ಸವಾಲು | Amit Shah
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe