Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಸಿನಿಮಾ ನಟಿ | Soumya Shetty
    Trending

    ಸ್ನೇಹಿತೆಯ ಮನೆಯಲ್ಲಿ ಚಿನ್ನ ಕದ್ದ ಸಿನಿಮಾ ನಟಿ | Soumya Shetty

    vartha chakraBy vartha chakraMarch 5, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಶಾಖಪಟ್ಟಣ, ಮಾ.5 – ಸ್ನೇಹಿತೆಯ ಮನೆಯಿಂದಲೇ ಚಿನ್ನ ಕದ್ದು ಗೋವಾಗೆ ಪರಾರಿಯಾಗಿದ್ದ ಸಿನಿಮಾ ನಟಿ ಸೌಮ್ಯಾ ಶೆಟ್ಟಿಯನ್ನು (Soumya Shetty) ವೈಜಾಗ್ ಪೊಲೀಸರು ಬಂಧಿಸಿದ್ದಾರೆ.
    ಬಂಧಿತ ನಟಿ ಸೌಮ್ಯಾ ಶೆಟ್ಟಿಯು, ಭಾರತೀಯ ಅಂಚೆ ಇಲಾಖೆಯ ನಿವೃತ್ತ ನೌಕರ ಪ್ರಸಾದ್ ಬಾಬು ಅವರ ಮನೆಯಲ್ಲಿ ಚಿನ್ನ ಕಳವು ಮಾಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಆಕೆಯ ಬಳಿಯಿಂದ ಕಳವು ಮಾಡಿದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ನಟಿಯನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮತ್ತೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ.

    ಸೌಮ್ಯಾ ಶೆಟ್ಟಿ ಮತ್ತು ಪ್ರಸಾದ್ ಬಾಬು ಅವರ ಮಗಳು ಮೌನಿಕಾ ಇಬ್ಬರೂ ಗೆಳತಿಯರು. ಚಲನಚಿತ್ರ ಆಡಿಷನ್‌ನಲ್ಲಿ ಇಬ್ಬರೂ ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಸೌಮ್ಯಾ ಆಗಾಗ ಮೌನಿಕಾಳ ಭೇಟಿಗೆ ಮನೆಗೆ ಆಗಮಿಸುತ್ತಿದ್ದಳು.
    ಈ ಸಲುಗೆಯಿಂದ ಆಕೆ ಪ್ರಸಾದ್ ಬಾಬು ಅವರ ಕುಟುಂಬದ ಆದಾಯದ ಮೂಲ, ಹಣ, ಒಡವೆಗಳನ್ನೆಲ್ಲ ಎಲ್ಲಿಟ್ಟಿದ್ದಾರೆ ಎಂಬಿತ್ಯಾದಿ ಮಾಹಿತಿ ಪಡೆದುಕೊಂಡಿದ್ದಳು ಎನ್ನಲಾಗಿದೆ.

    1 ಕೆಜಿ ಚಿನ್ನ ಕದ್ದ ಚಾಲಾಕಿ:
    ಮಗಳ ಗೆಳತಿ ಎನ್ನುವ ಕಾರಣಕ್ಕೆ ಪ್ರಸಾದ್‌ ಬಾಬು ಅವರ ಕುಟುಂಬವೂ ಸೌಮ್ಯಾ ಶೆಟ್ಟಿ ಮೇಲೆ ವಿಶ್ವಾಸವಿರಿಸಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಆಕೆ ಇತ್ತೀಚೆಗೆ ಮನೆಯಿಂದ ಸುಮಾರು 1 ಕೆಜಿ ಚಿನ್ನ ಕದ್ದಿದ್ದಳು. ಪ್ರಸಾದ್‌ ಬಾಬು ಅವರ ಕುಟುಂಬ ಮದುವೆಗೆಂದು ಹೊರ ಹೋಗಿದ್ದಾಗ ಈ ಕೃತ್ಯ ಎಸಗಿ ಗೋವಾಕ್ಕೆ ಪರಾರಿಯಾಗಿದ್ದಳು.
    ಮದುವೆಯಿಂದ ಮರಳಿ ಬಂದ ಪ್ರಸಾದ್ ಬಾಬು ಕುಟುಂಬಕ್ಕೆ ಚಿನ್ನ ಕಳ್ಳತನವಾಗಿರುವ ವಿಷಯ ತಿಳಿದು ಬಂದಿತ್ತು. ಹೀಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಗಳ ಪರಿಶೀಲನೆ, ಬೆರಳಚ್ಚು ತಜ್ಞರ ಸಹಾಯಗಳನ್ನು ಪಡೆದು ಸುಮಾರು 11 ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿ ವಿಚಾರಣೆ ನಡೆಸಿದ್ದರು. ಈ ಆರೋಪಿಗಳ ಪಟ್ಟಿಯಲ್ಲಿ ಸೌಮ್ಯಾ ಶೆಟ್ಟಿ ಸಹ ಇದ್ದರು.

    ತನಿಖೆ ವೇಳೆ ಸೌಮ್ಯಾ ತಪ್ಪೊಪ್ಪಿಕೊಂಡಿದ್ದು ಆಕೆಯಿಂದ 74 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿಯೂ ಸಕ್ರಿಯಳಾಗಿರುವ ಸೌಮ್ಯಾ ಶೆಟ್ಟಿ 1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ ಹೊಂದಿದ್ದಾಳೆ. ತೆಲುಗಿನ ‘ಯುವರ್ಸ್ ಲವಿಂಗ್ಲಿ’, ‘ದಿ ಟ್ರಿಪ್’ ಸಿನಿಮಾಗಳಲ್ಲಿ ನಟಿಸಿರುವ ಸೌಮ್ಯಾ ಶೆಟ್ಟಿ ಕೆಲವು ಕಿರು ಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾಳೆ. ಪ್ರಸ್ತುತ ‘ಶಿವಂ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾಳೆ. ಈಕೆ ಸೌಮ್ಯಾ ಕಿಲಂಪಲ್ಲಿ ಎಂಬ ಹೆಸರಿನಿಂದಲೂ ಗುರುತಿಸ್ಪಡುತ್ತಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    m ಕಳ್ಳತನ ಚಲನಚಿತ್ರ ಚಿನ್ನ ನ್ಯಾಯ ಮದುವೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleನಾಸಿರ್ ಹುಸೇನ್ ಗೆ ಉರುಳಾಗಲಿರುವ ಪಾಕಿಸ್ತಾನ ಜಿಂದಾಬಾದ್ | Naseer Hussain
    Next Article ಮಂಡ್ಯದಲ್ಲೂ‌ ಪಾಕಿಸ್ತಾನ ಜಿಂದಾಬಾದ್ | Mandya
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    1 Comment

    1. Vbsdnw on February 13, 2026 9:55 am

      betmgm Missouri betmgm-play mgm bets promo

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Eujjwt on ಬೆಂಗಳೂರು ರಸ್ತೆಗಳ ದುರಸ್ತಿ
    • LinwoodGah on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Ybydbu on ಬೆಳಗಾವಿ ಅಧಿವೇಶನಕ್ಕೆ ಎಷ್ಟು ಖರ್ಚಾಗುತ್ತದೆ ಗೊತ್ತಾ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.