ಬೆಂಗಳೂರು, ಮಾ.11- ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಗೋಬಿ ಮಂಚೂರಿ ಚಿಕನ್ ಕಬಾಬ್ ಸೇರಿದಂತೆ ಇತರೆ ತಿನಿಸುಗಳ ತಯಾರಿಕೆ ಮತ್ತು ಮಾರಾಟ ನಿಷೇಧಿಸಲಾಗುತ್ತಿದೆ ಎಂದು ಆತಂಕಗೊಂಡಿದ್ದ ವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಹಾನಿಕಾರಕ ರಾಸಾಯನಿಕ ಬಳಸಿ ತಯಾರಿಸುವ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಸೇರಿದಂತೆ ಇತರೆ ಉತ್ಪನ್ನಗಳನ್ನು ಸೇವಿಸುವ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇವುಗಳ ಮೇಲೆ ನಿಷೇಧ ಹೇರಲಾಗುತ್ತದೆ ಎಂಬ ವರದಿಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿರಾಕರಿಸಿದ್ದಾರೆ.
ಈ ಕುರಿತಂತೆ ಪ್ರಯೋಗಾಲಯಗಳ ವರದಿಯನ್ನು ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಟನ್ ಕ್ಯಾಂಡಿ, ಚಿಕನ್ ಕಬಾಬ್ ಮತ್ತು ಗೋಬಿ ಮಂಚೂರಿಗೆ ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ರೋಡಮೈನ್–ಬಿಯನ್ನು ಬಳಸಲಾಗುತ್ತದೆ. ಇದನ್ನು ಆಹಾರದಲ್ಲಿ ಬಳಸುವುದಕ್ಕೆ ನಿಷೇಧವಿದೆ ಎಂದು ಹೇಳಿದರು.
ರೋಡಮೈನ್–ಬಿಯಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ ಎಂದು ಪ್ರಯೋಗಾಲಯದ ಹಲವಾರು ವರದಿಗಳಿಂದ ದೃಢಪಟ್ಟಿದೆ ಈ ಹಿನ್ನೆಲೆಯಲ್ಲಿ ಯಾವುದೇ ಆಹಾರ ಪದಾರ್ಥಗಳಿಗೆ ಇದನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ರೋಡಮೈನ್ ರಾಸಾಯನಿಕದ ಬಣ್ಣ ಬಳಸಿ ತಯಾರಿಸಲಾಗುವ ಕಾಟನ್ ಕ್ಯಾಂಡಿ ಚಿಕನ್ ಕಬಾಬ್ ಗೋಬಿ ಮಂಚೂರಿ ಸೇರಿದಂತೆ ಎಲ್ಲ ರೀತಿಯ ಖಾದ್ಯ ವಸ್ತುಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಬಣ್ಣ ಬಳಸದೆ ಮಾಡಲಾಗುವ ಕಾಟನ್ ಕ್ಯಾಂಡಿ ಸೇರಿದಂತೆ ಯಾವುದೇ ಖಾದ್ಯ ತಯಾರಿಕೆ ಮತ್ತು ಮಾರಾಟದ ಮೇಲೆ ನಿಷೇಧ ಇಲ್ಲ ಎಂದು ಸ್ಪಷ್ಟಪಡಿಸಿದರು.
ಗೋಬಿ ಮಂಚೂರಿ, ಪಾನಿಪುರಿ, ಕಬಾಬ್ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು. ಬೀದಿ ಬದಿಯ ತಳ್ಳು ಗಾಡಿ Businessಿಗಳಿಂದ ಹಿಡಿದು ಪಂಚ ತಾರಾ ಹೋಟೇಲ್‌ವರೆಗೂ ಆದೇಶ ಅನ್ವಯವಾಗುತ್ತದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಆಹಾರ ಪದಾರ್ಥಗಳನ್ನು ತಯಾರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ದಂಡ ಮತ್ತು ಜೈಲು ವಾಸವನ್ನೂ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ರೂಪಿಸಲಾಗಿರುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006 ರ ನಿಯಮ 59 ರಡಿ 7 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸುವ ಜೊತೆಗೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದರು ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಿಯಮಿತವಾಗಿ ಎಲ್ಲ ರೀತಿಯ ಹೋಟೆಲ್‌ಗಳು, ಬೀದಿ ಬದಿ ತಳ್ಳುಗಾಡಿಗಳಲ್ಲಿನ ಆಹಾರ ಪದಾರ್ಥಗಳನ್ನು ಪರೀಕ್ಷೆ ನಡೆಸುತ್ತದೆ. ಈ ಕಾರ್ಯಕ್ಕಾಗಿ ಹೆಚ್ಚಿನ ಸಿಬ್ಬಂದಿ ನೇಮಿಸಿಕೊಳ್ಳಲಾಗುವುದು. ಇದಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ’ ಎಂದು ತಿಳಿಸಿದರು.
‘ರಾಜ್ಯದಾದ್ಯಂತ ಮಾರಾಟ ಮಾಡುತ್ತಿರುವ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಸಾಮಾನ್ಯ ಹೋಟೆಲ್‌ಗಳಲ್ಲದೇ ತ್ರಿಸ್ಟಾರ್ ಹೋಟೆಲ್‌ಗಳಲ್ಲೂ ಕೃತಕ ಬಣ್ಣಗಳನ್ನು ಬಳಸಿವೆ. ಸದ್ಯಕ್ಕೆ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ನು ಮಾತ್ರ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರ ಆಹಾರ ಪದಾರ್ಥಗಳನ್ನೂ ಪರೀಕ್ಷೆಗ ಒಳಪಡಿಸಲಾಗುವುದು’ ಎಂದು ವಿವರಿಸಿದರು.
ಅಪಾಯಕಾರಿ ಕಾಟನ್ ಕ್ಯಾಂಡಿಯಲ್ಲಿ ಬಳಸುವ ರೋಡಮೈನ್–ಬಿ ಅತ್ಯಂತ ಅಪಾಯಕಾರಿ. ದಟ್ಟ ಗುಲಾಬಿ ಅಥವಾ ಇತರ ಬಣ್ಣ ನೀಡುವುದಕ್ಕಾಗಿ ಇದನ್ನು ಬಳಸುತ್ತಾರೆ. ಇದು ಕ್ಯಾನ್ಸರ್‌ಗೆ ಕಾರಣವಾಗುವುದರ ಜತೆಗೆ ಮಿದುಳು, ಮೂತ್ರಪಿಂಡ, ಹೃದಯಕ್ಕೂ ಹಾನಿ ಮಾಡಬಲ್ಲದು ಎಂದು ವಿವರಿಸಿದರು.
ಇದಲ್ಲದೇ ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕಾಗಿ ಬಳಸುವ ಟಾರ್ ಟ್ರಾಸೈನ್, ಸನ್‌ಸೆಟ್ ಯೆಲ್ಲೊ ಮತ್ತು ಕಾರ್ಮೊಸಿನ್ ಕೂಡ ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳಿದರು.
ರೋಡಮೈನ್ ಪ್ಯಾಕ್ ಮಾಡಿದ ಆಹಾರಗಳಿಗೆ ಸೀಮಿತ ಪ್ರಮಾಣದಲ್ಲಿ ಬಳಕೆ ಮಾಡಲು ಮಾತ್ರ ಅವಕಾಶ ಇದೆ. ಆದರೆ, ಮನೆ, ಹೋಟೆಲ್ ಮತ್ತು ಇತರ ಕಡೆಗಳಲ್ಲಿ ಬಳಸುವುದಕ್ಕೆ ಅನುಮತಿ ಇಲ್ಲ ಎಂದರು.
4 Comments
индийский пасьянс онлайн бесплатно индийский пасьянс онлайн бесплатно .
вывод из запоя на дому санкт петербург вывод из запоя на дому санкт петербург .
снять ломку наркомана снять ломку наркомана .
купить семена через интернет магазин http://www.semenaplus74.ru .