Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರುಣ್ ಗಾಂಧಿಯ ರಾಜಕೀಯ ಸೂರ್ಯ ಅಸ್ತಂಗತ? | Varun Gandhi
    Trending

    ವರುಣ್ ಗಾಂಧಿಯ ರಾಜಕೀಯ ಸೂರ್ಯ ಅಸ್ತಂಗತ? | Varun Gandhi

    vartha chakraBy vartha chakraMarch 25, 202426 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವರುಣ್ ಗಾಂಧಿಯವರ (Varun Gandhi) ಜಾಗಕ್ಕೆ ಜಿತಿನ್ ಪ್ರಸಾದ್ ಅವರನ್ನು ತಂದಿಟ್ಟು ವರುಣ್ ಗಾಂಧಿ ಬಿಜೆಪಿ ಪಕ್ಷಕ್ಕೆ ಅವಶ್ಯಕತೆ ಇಲ್ಲ ಎನ್ನುವ ಸಂದೇಶವನ್ನು ಮತದಾರರಿಗೆ ಕೇಸರಿ ಪಕ್ಷ ಕೊಟ್ಟಂತಿದೆ. 1996 ರಿಂದ ಒಂದೋ ವರುಣ್ ಗಾಂಧಿ ಇಲ್ಲವೆ ಅವರ ತಾಯಿ ಮನೇಕಾ ಗಾಂಧಿ ಗೆಲ್ಲುತ್ತಾ ಬಂದಿರುವ ಪಿಲಿಭಿಟ್ ಕ್ಷೇತ್ರದಲ್ಲಿ ಈ ಬಾರಿ ಉತ್ತರ ಪ್ರದೇಶದ ಹಾಲಿ ಮಂತ್ರಿ ಜಿತಿನ್ ಪ್ರಸಾದ್ ಸ್ಪರ್ಧಿಸುತ್ತಿದ್ದಾರೆ. ಅನೇಕ ಬಾರಿ ತಾಯಿ ಮಗ ಇಬ್ಬರೂ ಬಿಜೆಪಿಯನ್ನು ಟೀಕಿಸಿ ಪಕ್ಷವನ್ನು ಮುಜುಗರಕ್ಕೆ ಒಳಪಡಿಸಿದ್ದು ಹೊಸ ಸುದ್ದಿಯೇನಲ್ಲ. ಬಿಜೆಪಿ ಸೇರಿದಾಗಿನಿಂದ ಮನೇಕಾ ಮತ್ತು ಅವರ ಮಗನಿಗೆ ಬೇರೆ ಬೇರೆ ರೀತಿಯಲ್ಲಿ ಗೌರವಗಳು ಲಭಿಸುತ್ತಲೇ ಬಂದಿವೆ. ಮನೇಕಾ ಗಾಂಧಿ ಕೇಂದ್ರದಲ್ಲಿ NDA ಆಡಳಿತದಲ್ಲಿ ಪ್ರಮುಖ ಖಾತೆಯ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದನ್ನೂ ಇಲ್ಲಿ ನೆನಪಿಸಿಕೊಳ್ಳಬಹುದು. ನರೇಂದ್ರ ಮೋದಿಯವರು ರಾಷ್ಟ್ರ ರಾಜಕಾರಣಕ್ಕೆ ಪಾದಾರ್ಪಣೆ ಮಾಡುವ ಮೊದಲೇ ಬಿಜೆಪಿ ವರುಣ್ ಗಾಂಧಿಯವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿ ಪಶ್ಚಿಮ ಬಂಗಾಳದ ಜವಾಬ್ದಾರಿಯನ್ನು ನೀಡಿತ್ತು. ವರುಣ್ ಗಾಂಧಿ ಪಕ್ಷ ಸಂಘಟನೆಯ ವಿಚಾರದಲ್ಲಿ ಎಂದಿಗೂ ಆಸಕ್ತಿ ತೋರಿಸಲಿಲ್ಲ ಎನ್ನುವ ಆಪಾದನೆ ಯಾವಾಗಲೂ ಇತ್ತು.

    ಆರಂಭದಲ್ಲಿ ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಅವರ ವಿರುದ್ಧ ಟೀಕೆಗಳನ್ನು ಮಾಡುತ್ತಲೇ ಬಿಜೆಪಿಯಲ್ಲಿ ಸ್ಥಾನ ಭದ್ರ ಮಾಡಿಕೊಂಡ ವರುಣ್ ಆ ನಂತರ 2016 ರ ಹೊತ್ತಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗುವ ಕನಸನ್ನು ಕಾಣತೊಡಗಿದರು. 2017 ರ ಉತ್ತರ ಪ್ರದೇಶ ರಾಜ್ಯದ ಚುನಾವಣೆಯ ಹೊತ್ತಿಗೆ ಬಿಜೆಪಿ ವರುಣ್ ಗಾಂಧಿಗೆ ಬರಿ ಅವರ ಆಗಿನ ಕ್ಷೇತ್ರ ಸುಲ್ತಾನ್ ಪುರಕ್ಕೆ ಮಾತ್ರ ತಮ್ಮ ರಾಜಕೀಯ ಚಟುವಟಿಕೆಗಳನ್ನು ಸೀಮಿತಗೊಳಿಸಲು ನಿರ್ದೇಶಿಸಿತ್ತು. ಅದೇ ವರ್ಷ ವರುಣ್ ಗಾಂಧಿ ತಮ್ಮ ಸ್ವಂತ ಹಣವನ್ನು ಖರ್ಚು ಮಾಡಿ ಬಡವರಿಗೆ ಮನೆ ನಿರ್ಮಿಸಿ ತಮ್ಮ ಸಾಮಾಜಿಕ ಬದ್ಧತೆಯನ್ನು ತೋರಿದ್ದು ಗಮನಾರ್ಹ.

    ಅನೇಕ ವಿಚಾರಗಳಲ್ಲಿ ಬಿಜೆಪಿಯನ್ನು ಟೀಕಿಸಲು ಹಿಂದೇಟು ಹಾಕದ ವರುಣ್ ಕೋವಿಡ್ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರ್ಕಾರವನ್ನು ಬಹಳಷ್ಟು ಟೀಕೆ ಮಾಡಿದ್ದು ಉಲ್ಲೇಖನೀಯ. ಹಾಗೇ ಲಖಿಮ್ ಪುರ್ ಖೇರಿಯಲ್ಲಿ ನಡೆದ ಬಿಜೆಪಿ ಯುವ ನಾಯಕನ ಉದ್ಧಟ ವರ್ತನೆ ಮತ್ತು ಯೋಗಿ ಆದಿತ್ಯನಾಥ್ ಅವರ ಕೆಲವು ನಿರ್ಧಾರಗಳ ಬಗ್ಗೆ ಟೀಕೆ ಹೀಗೆ ಅನೇಕ ವಿಚಾರಗಳಲ್ಲಿ ವರುಣ್ ಗಾಂಧಿ ಬಿಜೆಪಿ ನಾಯಕರನ್ನು ಆತಂಕಗೊಳಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆಯಾದ ವಿಷಯ.
    2019 ರಲ್ಲಿ ಮತ್ತೊಮ್ಮೆ ಟಿಕೆಟ್ ದಕ್ಕಿಸಿಕೊಂಡು ಗೆದ್ದರೂ ಮತ್ತು ಇತ್ತೀಚೆಗೆ ನರೇಂದ್ರ ಮೋದಿಯವರನ್ನು ಪುಂಖಾನುಪುಂಖವಾಗಿ ಹೊಗಳಲು ಶುರು ಮಾಡಿದರೂ ಈಗ ಬಿಜೆಪಿ ಹೈ ಕಮಾಂಡ್ ವರುಣ್ ಗೆ ಕಿಕೆಟ್~ ಕೊಡದಿರಲು ನಿರ್ಧರಿಸಿರುವುದು ವರುಣ್ ಗಾಂಧಿಯವರ ಭವಿಷ್ಯದ ಬಗ್ಗೆ ಬಹಳ ದೊಡ್ಡ ಪ್ರಶ್ನೆಯನ್ನು ಮೂಡಿಸಿದೆ. ಅನೇಕ ರಾಜಕೀಯ ವಿಶ್ಲೇಷಕರ ಪ್ರಕಾರ ಸಧ್ಯಕ್ಕೆ ವರುಣ್ ಗಾಂಧಿಯವರ ರಾಜಕೀಯ ಭವಿಷ್ಯದ ಸೂರ್ಯ ಅಸ್ತಂಗತವಾದಂತೆಯೇ ಕಂಡುಬರುತ್ತಿದೆ.

    NDA Election ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    Next Article ಬೆಂಗಳೂರು ಆಸ್ತಿ ಮಾಲೀಕರಿಗೆ ಡಿಕೆ ಶಿವಕುಮಾರ್ ಸಿಹಿ ಸುದ್ದಿ | Bengaluru
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • best mexican online pharmacies on ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • canadian pharmacy no prescription required on ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • https://chipandchair.cz/registratsiya-v-melbet-2025/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe