ಬೆಂಗಳೂರು, ಮಾ.26: ಲೋಕಸಭೆ Electionಯ ಕಾವು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೋದರ ಹಾಗೂ ಸಂಸದ ಡಿ.ಕೆ.ಸುರೇಶ್ (DK Suresh) ಸಂಕಷ್ಟಕ್ಕೆ ಸಿಲುಕಿದ್ದಾರೆ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಡಿ.ಕೆ.ಸುರೇಶ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದ್ದು ಈ ತಕ್ಷಣವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಕ್ಷೇತ್ರದಲ್ಲಿ ನೀತಿ ಸಂಹಿತೆ ಗಾಳಿಗೆ ತೂರಲಾಗಿದೆ. ಅಕ್ರಮವೆಸಗಲು ಆಡಳಿತ ಯಂತ್ರ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ ದೇವೇಗೌಡ ಕೇಂದ್ರ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಸಂಸದ ಡಿ.ಕೆ.ಸುರೇಶ್ ಅವರ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಚುನಾವಣೆ ಆಯುಕ್ತರಿಗೆ ದೂರು ನೀಡಲಾಗಿತ್ತು.ಆದರೆ,ಈ ಬಗ್ಗೆ ರಾಜ್ಯ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ತಮ್ಮ ಪತ್ರದಲ್ಲಿ ಆರೋಪಿಸಿದ್ದರು.
ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಡಿ.ಕೆ.ಸುರೇಶ್ ಉಲ್ಲಂಘಿಸಿದ್ದರೆ ತತಕ್ಷಣವೇ ಅವರ ಮೇಲೆ ಸೂಕ್ತವಾದ ಕಾನೂನು ಕ್ರಮವನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಸೂಚನೆ ನೀಡಿದೆ.