Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣದ ಮೂಲಕ್ಕಾಗಿ ಹುಡುಕಾಟ | Jayanagar
    Trending

    ಹಣದ ಮೂಲಕ್ಕಾಗಿ ಹುಡುಕಾಟ | Jayanagar

    vartha chakraBy vartha chakraApril 17, 2024No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.16 – ಜಯನಗರದ (Jayanagar) ಚುನಾವಣಾ ಚೆಕ್‌ಪೋಸ್ಟ್‌ ಬಳಿ ತಪಾಸಣೆಯಲ್ಲಿ ಕಾರೊಂದರಲ್ಲಿ ಸಿಕ್ಕಿದ ಕೋಟ್ಯಂತರ ರೂಗಳ ಹಣದ ಬ್ಯಾಗ್ ಪತ್ತೆ ಪ್ರಕರಣಕ್ಕೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಅಧಿಕಾರಿ ಎನ್‌ ಮಂಜುನಾಥ್‌ ಕೊಟ್ಟ ದೂರನ್ನು ಆಧರಿಸಿ ಏ.15ರಂದು ಸ್ಕೂಟರ್‌ ಹಾಗೂ ಕಾರು ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿ, ಇಬ್ಬರಿಗೂ ನೋಟೀಸ್ ನೀಡಿದ್ದಾರೆ.

    ವಶಕ್ಕೆ ಪಡೆದಿರುವ ಕೋಟ್ಯಂತರ ರೂ. ಹಣವನ್ನು ನಗರ ಚುನಾವಣಾಧಿಕಾರಿ ಮನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ. ಕಾರಿನಲ್ಲಿ ಸಿಕ್ಕ ಹಣವನ್ನು ಎಣಿಕೆ ಮಾಡಿದಾಗ 1,34,99,000 ರೂ. ಹಣ ಪತ್ತೆಯಾಗಿದ್ದು, ಜತೆಗೆ ಬಿಬಿಎಂಪಿಗೆ ಸಂಬಂಧಿಸಿದ ಕೆಲ ದಾಖಲೆಗಳು ಸಿಕ್ಕಿವೆ. ಇವೆಲ್ಲವನ್ನೂ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು ಪ್ರಕರಣದ ವರದಿಯನ್ನು ಕೊಟ್ಟಿದ್ದಾರೆ.
    ಇನ್ನೂ ಕ್ಲಾಸ್ ಒನ್ ಗುತ್ತಿಗೆದಾರನಿಗೆ ಸೇರಿದ ಹಣ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂ. ಹಣವು ಯಾವುದಾದರು ಪಕ್ಷಕ್ಕೆ ಸೇರಿದ್ದಾ? ವೈಯಕ್ತಿಕ ವ್ಯವಹಾರದ್ದ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸೀಜ್‌ ಮಾಡಿರುವ ಸ್ಕೂಟರ್‌ ಹಾಗೂ ಕಾರಿನ ಮಾಲೀಕರಾದ ಸೋಮಶೇಖರ್ ಮತ್ತು ಧನಂಜಯ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ದೂರಿನಲ್ಲಿ ಏನಿದೆ:
    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಬೆಂಗಳೂರು ಪ್ಲೈಯಿಂಗ್‌ ಸ್ಕ್ವಾಡ್‌ ತಂಡ 3ರ ಟೀಮ್‌ ಲೀಡರ್‌ ಆಗಿ ನೇಮಕಗೊಂಡಿರುವ ಮಂಜುನಾಥ್‌ ಪ್ರಕರಣ ಸಂಬಂಧ ದೂರು ನೀಡಿದ್ದಾರೆ. ಆ ದೂರಿನನ್ವಯ ಏ.13ರ ಬೆಳಗ್ಗೆ 11:50ರ ಸುಮಾರಿಗೆ ಜಯನಗರ 4ನೇ ಬ್ಲಾಕ್‌ ಸಮೀಪ ಅಪರಿಚಿತ ವ್ಯಕ್ತಿಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಹೆಚ್ಚಿನ ಪ್ರಮಾಣದ ನಗದನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ನೋಡಲ್‌ ಅಧಿಕಾರಿ ನಿಖಿತ ಚಿನ್ನಸ್ವಾಮಿ ಅವರು ತೆರಳಿದ್ದರು.

    ಬೆಂಜ್ ಕಾರಿನಲ್ಲಿ ಪತ್ತೆ:
    ಈ ವೇಳೆ ನೀಲಿ ಬಣ್ಣದ ಆಕ್ಸಸ್‌ ಗಾಡಿಯಲ್ಲಿ ವ್ಯಕ್ತಿಯೊಬ್ಬ ಬ್ಯಾಗ್‌ ಇಟ್ಟುಕೊಂಡಿದ್ದ. ನೋಡಲ್‌ ಅಧಿಕಾರಿ ನಿಖಿತ ಅವರು ಆತನ ಬಳಿ ಹೋಗಿ ವಿಚಾರಿಸಲು ಮುಂದಾಗುತ್ತಿದ್ದಂತೆ, ಸ್ಕೂಟರ್‌ ಹಾಗೂ ಹಣದ ಬ್ಯಾಗ್‌ ಬಿಟ್ಟು ಪರಾರಿ ಆಗಿದ್ದ. ಅದೇ ರಸ್ತೆಯಲ್ಲಿದ್ದ ಕೆಂಪು ಬಣ್ಣದ ವೋಕ್ಸ್‌ ವ್ಯಾಗನ್‌ ಕಾರು ಮತ್ತು ರಿಜಿಸ್ಟೇಷನ್‌ ನಂಬರ್‌ ಇಲ್ಲದ ಬಿಳಿ ಬಣ್ಣದ ಬೆಂಜ್‌ ಕಾರಿನಲ್ಲೂ ಗರಿ ಗರಿ ನೋಟು ಪತ್ತೆಯಾಗಿತ್ತು.

    ಐಟಿಗೆ ಹಸ್ತಾಂತರ:
    ಮೊದಮೊದಲು ಬ್ಯಾಗ್‌ನಲ್ಲಿ ಏನಿದೆ ತೋರಿಸಿ ಎಂದಾಗ ಮಾವಿನ ಹಣ್ಣಿನ ಬ್ಯಾಗ್‌ ಎಂದಿದ್ದರು. ಯಾವಾಗ ನೋಡೆಲ್‌ ಅಧಿಕಾರಿ ನಿಖಿತ ಅವರು ಕಾರು ಪರಿಶೀಲನೆ ಮಾಡಲು ಹೋದಾಗ ಕಾರಲ್ಲಿದ್ದ ಐವರು ಕಾಲ್ಕಿತ್ತಿದ್ದರು. ಒಟ್ಟು 1,34,99,000 ಹಣ ಪತ್ತೆಯಾಗಿದೆ. ಜತೆಗೆ ವೋಕ್ಸ್‌ ವ್ಯಾಗನ್‌ ಕಾರಲ್ಲಿ ಬಿಬಿಎಂಪಿ ದಾಖಲಾತಿಗಳು ಹಾಗೂ ರಿಜಿಸ್ಟೇಷನ್‌ ನಂಬರ್‌ ಇಲ್ಲದ ಕಾರಲ್ಲಿ ಒಂದು ಮೊಬೈಲ್‌, ಒಂದು ಕಾರ್ಡ್‌ ಪೌಚ್‌ ದೊರೆತಿದೆ. ಇದೆಲ್ಲವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

    Verbattle
    Verbattle
    Verbattle
    jayanagar ಕಾರು ಚಿನ್ನ Election ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Next Article ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ | Star Chandru
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • Tracymix on ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • LinwoodGah on ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.