Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಟ್ಟಿಂಗ್ ಕರ್ಮಕಾಂಡ ನಟ ಸಾಹೀಲ್ ಖಾನ್ ಬಂಧನ | Sahil Khan
    Trending

    ಬೆಟ್ಟಿಂಗ್ ಕರ್ಮಕಾಂಡ ನಟ ಸಾಹೀಲ್ ಖಾನ್ ಬಂಧನ | Sahil Khan

    vartha chakraBy vartha chakraApril 28, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.28-ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
    ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
    ಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ ಪೊಲೀಸರು ಸಾಹಿಲ್ ಅವರು ಆ್ಯಪ್‌ನ ಸಹ ಮಾಲೀಕರು ಆಗಿದ್ದರು ಎಂದು ಹೇಳಿದ್ದಾರೆ. ನಟ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿದೆ. ಮಾತ್ರವಲ್ಲ ನಟ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು. ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

    2023ರಲ್ಲಿ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗ ಡಿಸೆಂಬರ್ 15 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೇ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮಹಾದೇವ್​ ಬೆಟ್ಟಿಂಗ್​ ಕೇಸ್ :
    ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರು ಭಾಗಿಯಾಗಿದ್ದಾರೆ ಎನ್ನಲಾದ ಬೆಟ್ಟಿಂಗ್ ಹಗರಣವೊಂದು ಹೊರಕ್ಕೆ ಬಂದಿತ್ತು. ಮಹಾದೇವ್‌ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್ ಪ್ರಮೋಟರ್‌ಗಳಿಂದ ಇದುವರೆಗೆ ಭೂಪೇಶ್‌ ಬಘೇಲ್‌ ಸುಮಾರು 508 ಕೋಟಿ ರೂ. ಲಂಚ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಹೇಳಿದ್ದರು. ಚುನಾವಣೆ ಹೊತ್ತಿನಲ್ಲೇ ಇ.ಡಿ ಪ್ರಸ್ತಾಪಿಸಿದ ವಿಷಯವೀಗ ಚರ್ಚೆಗೆ ಗ್ರಾಸವಾಗಿತ್ತು.

    ಅಕ್ರಮವಾಗಿ ಹಣದ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಈಗಾಗಲೇ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್ ಪ್ರವರ್ತಕರನ್ನು ವಿಚಾರಣೆ ನಡೆಸುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ 5.39 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿತ್ತು. ಅಷ್ಟೇ ಅಲ್ಲ, 15 ಕೋಟಿ ರೂ. ಇರುವ ಬ್ಯಾಂಕ್‌ ಖಾತೆಯನ್ನೂ ಜಪ್ತಿ ಮಾಡಿತ್ತು. ಆಸಿಂ ದಾಸ್‌ ಎಂಬಾತನನ್ನು ಕೂಡ ಇ.ಡಿ ಬಂಧಿಸಿತ್ತು. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೇ ಲಂಚ ಸ್ವೀಕರಿಸಿದ್ದಾರೆ ಎಂದು ಇ.ಡಿ ತಿಳಿಸಿತ್ತು

    Verbattle
    Verbattle
    Verbattle
    ಇಡಿ ಕಾಂಗ್ರೆಸ್ ಕಾನೂನು Election ನ್ಯಾಯ ಲಂಚ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳ ಮಾರಾಟ ಜಾಲ ಪತ್ತೆ | Child Trafficking
    Next Article ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಸಮರ | Karnataka
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    2 Comments

    1. Fvetid on February 12, 2026 11:07 pm

      betmgm new customer promo betmgm Maryland betmgm Illinois

      Reply
    2. Dvstqh on February 20, 2026 2:59 am

      Illuminate your evenings with glowing jackpots and bonuses. In crowns coins, referral bonuses multiply the fun. Invite friends and amplify your rewards!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Go Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • espect_cu_jzpn on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    • Neiroset dlya ychebi_amsl on ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.